More

    ಸರ್ಕಾರದ ಅನುದಾನ ಸದುಪಯೋಗವಾಗಲಿ

    ರಾಯಚೂರು: ಜಿಲ್ಲೆಯ ಅಭಿವೃದ್ಧಿ ಮತ್ತು ವ್ಯವಸ್ಥೆ ಸರಿಪಡಿಸಲು ಜನರ ಸಹಕಾರ ಅಗತ್ಯವಾಗಿದೆ ಎಂದು ಸಣ್ಣ ನೀರಾವರಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು.


    ನಗರದಲ್ಲಿ ನವೀಕರಣಗೊಂಡ ಪಂ.ಸಿದ್ಧರಾಮ ಜಂಬಲದಿನ್ನಿ ರಂಗಮಂದಿರವನ್ನು ಉದ್ಘಾಟಿಸಿ ಮಂಗಳವಾರ ಮಾತನಾಡಿದರು. ಜಿಲ್ಲೆಯ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದ್ದು, ಸರ್ಕಾರದಿಂದ ಬಂದ ಅನುದಾನ ಸದುಪಯೋಗವಾಗಬೇಕು. 1992ರಲ್ಲಿ ನಿರ್ಮಿಸಲಾದ ರಂಗಮಂದಿರ ಹಲವಾರು ಬಾರಿ ನವೀಕರಣ ಮಾಡಲಾಗಿದೆ. ರಂಗಮಂದಿರದಲ್ಲಿ ಸಾಕಷ್ಟು ಸಮಸ್ಯೆಗಳಿರುವುದನ್ನು ಕಂಡು ಕೆಕೆಆರ್‌ಡಿಬಿಯ 3 ಕೋಟಿ ರೂ. ಅನುದಾನದಲ್ಲಿ ಮತ್ತೊಮ್ಮೆ ನವೀಕರಣ ಮಾಡಲಾಗಿದೆ ಎಂದರು.


    ಮಹಿಳಾ ಸಮಾಜ ಸ್ಥಳವನ್ನು ಅಭಿವೃದ್ಧಿ ಪಡಿಸಲಾಗಿದ್ದು, ಕರ್ನಾಟಕ ಸಂಘ ಸ್ಥಳವನ್ನು ಸಂಪೂರ್ಣ ಅಭಿವೃದ್ಧಿ ಪಡಿಸುವ ಕೆಲಸ ನಡೆದಿದೆ. ಜಿಲ್ಲೆಯಲ್ಲಿನ ಶಾಲಾ ಕೊಠಡಿಗಳ ದುರಸ್ತಿಗೆ ಹೆಚ್ಚಿನ ಅನುದಾನ ನೀಡಲಾಗುತ್ತಿದೆ ಎಂದು ಎನ್.ಎಸ್.ಬೋಸರಾಜು ತಿಳಿಸಿದರು.


    ಶಾಸಕ ಡಾ.ಶಿವರಾಜ ಪಾಟೀಲ್ ಮಾತನಾಡಿ, ರಂಗಮಂದಿರದಲ್ಲಿನ ಸಮಸ್ಯೆಗಳನ್ನು ಒಂದೊಂದಾಗಿ ಪರಿಹರಿಸುವ ಬದಲು ಏಕಕಾಲಕ್ಕೆ ಎಲ್ಲವನ್ನು ಸರಿಪಡಿಸುವ ನಿಟ್ಟಿನಲ್ಲಿ ನವೀಕರಣ ಮಾಡಲಾಗಿದೆ. ಸರ್ಕಾರಿ ಆಸ್ತಿಗಳನ್ನು ಕಾಪಾಡುವ ಕೆಲಸವನ್ನು ಎಲ್ಲರೂ ಮಾಡಬೇಕು. ಅದು ಎಲ್ಲರ ಹೊಣೆಗಾರಿಕೆಯೂ ಆಗಿದೆ ಎಂದರು.
    ಮಾವಿನಕೆರೆ ಅಭಿವೃದ್ಧಿಗೆ 9.50 ಕೋಟಿ ರೂ. ತೆಗೆದಿರಿಸಲಾಗಿದ್ದು, ಸಚಿವ ಎನ್.ಎಸ್.ಬೋಸರಾಜು ಸಣ್ಣ ನೀರಾವರಿ ಇಲಾಖೆಯಿಂದ ಇನ್ನೂ 10 ಕೋಟಿ ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ. ಇದರಿಂದ ಕೆರೆ ಅಭಿವೃದ್ಧಿ ಪಡಿಸಲಾಗುವುದು. ಪಕ್ಷಾತೀತವಾಗಿ ನಗರದ ಅಭಿವೃದ್ಧಿಗೆ ಕೆಲಸ ಮಾಡಲಾಗುತ್ತಿದೆ ಎಂದು ಶಾಸಕ ಶಿವರಾಜ ಪಾಟೀಲ್ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts