23.2 C
Bangalore
Saturday, December 14, 2019

ಭಾರತದ ಸ್ನೇಹ ಬೇಕಿದ್ದರೆ ನಿಮ್ಮಲ್ಲಿರುವ ನಮಗೆ ಬೇಕಾದ ಉಗ್ರರನ್ನು ಹಸ್ತಾಂತರಿಸಿ: ಪಾಕ್​ಗೆ ಜೈಶಂಕರ್​ ಸಲಹೆ

Latest News

ಆರ್‌ಎಫ್‌ಐಡಿ ಸ್ಟಿಕರ್​ಗಳ ಕೊರತೆ: ಫಾಸ್ಟ್ಯಾಗ್​ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಣೆ ಮಾಡಿದ ಕೇಂದ್ರ ಸರ್ಕಾರ

ನವದೆಹಲಿ: ರಾಷ್ಟ್ರಿಯ ಹೆದ್ದಾರಿಯಲ್ಲಿನ ಟೋಲ್​ಪ್ಲಾಜಾಗಳಲ್ಲಿ ಫಾಸ್ಟ್ಯಾಗ್​ ಮೂಲಕ ಟೋಲ್​ ಶುಲ್ಕ ವಸೂಲಿ ಪ್ರಕ್ರಿಯೆ ಡಿ.1 ರಿಂದ ಪ್ರಾರಂಭವಾಗಬೇಕಿತ್ತು. ಆದರೆ ಆದರೆ, ಎಲ್ಲ ವಾಹನ ಮಾಲೀಕರೂ ಫಾಸ್ಟ್ಯಾಗ್​...

ದಾವಣಗೆರೆ ಲೋಕ ಅದಾಲತ್‌ನಲ್ಲಿ 21 ನ್ಯಾಯಾಧೀಶರು ಭಾಗಿ, 678 ಕೇಸ್ ವಿಲೆ, 7.34 ಕೋಟಿ ಪರಿಹಾರ ಇತ್ಯರ್ಥ

ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಜಿಲ್ಲಾದ್ಯಂತ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ನಡೆಯಿತು. ಜಿಲ್ಲೆಯ...

ಫೆಬ್ರವರಿ 1 ರಂದು ಕೇಂದ್ರ ಬಜೆಟ್​, ಜನವರಿ 31 ರಂದು ಆರ್ಥಿಕ ಸಮೀಕ್ಷೆ ಮಂಡನೆ ಸಾಧ್ಯತೆ

ನವದೆಹಲಿ: ಹಣಕಾಸು ಸಚಿವಾಲಯದ ಮೂಲಗಳ ಪ್ರಕಾರ 2020-21 ಸಾಲಿನ ಕೇಂದ್ರ ಮುಂಗಡ ಪತ್ರ ಫೆಬ್ರವರಿ 1 ರಂದು ಮಂಡನೆಯಾಗುವ ಸಾಧ್ಯತೆಯಿದೆ. ಅಂತೆಯೇ ಆರ್ಥಿಕ...

ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸಿ

ಯಾದಗಿರಿ: ಸಂಪೂರ್ಣ ಲಸಿಕೆ ಪಡೆಯುವುದು ಪ್ರತಿ ಮಗುವಿನ ಜನ್ಮಸಿದ್ಧ ಹಕ್ಕು ಹಾಗೂ ಲಸಿಕೆಯನ್ನು ಕೊಡಿಸುವುದು ಪೋಷಕರ ಕರ್ತವ್ಯ ಕೂಡ ಆಗಿದೆ ಎಂದು ಕಿರಿಯ...

ಹಿರಿಯ ವಕೀಲರನ್ನು ಗೌರವದಿಂದ ಕಾಣಿ

ಯಾದಗಿರಿ : ಕಿರಿಯ ವಕೀಲರು ಹಿರಿಯ ವಕೀಲರನ್ನು ಗೌರವದಿಂದ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ ನೂತನ ಆಡಳಿತಾತ್ಮಕ ನ್ಯಾಯಮೂರ್ತಿ ಅಶೋಕ...

ನವದೆಹಲಿ: ಭಾರತದೊಂದಿಗೆ ಸ್ನೇಹಮಯ ಮತ್ತು ಸೌಹಾರ್ದಯುತ ಸಂಬಂಧವನ್ನು ಬಯಸುವಿರಾದರೆ, ನಿಮ್ಮಲ್ಲಿ ನೆಲೆಸಿರುವ ಭಾರತಕ್ಕೆ ಬೇಕಾದ ಎಲ್ಲ ಉಗ್ರರನ್ನು ಹಸ್ತಾಂತರಿಸಿ ಎಂದು ಭಾರತದ ವಿದೇಶಾಂಗ ಸಚಿವ ಜೈಶಂಕರ್​ ಪಾಕಿಸ್ತಾನಕ್ಕೆ ಸಲಹೆ ನೀಡಿದ್ದಾರೆ.

ಪೀಸ್​ ಫೋರಂನ ಸಭೆಯಲ್ಲಿ ಪಾಲ್ಗೊಳ್ಳಲು ಪ್ಯಾರಿಸ್​ಗೆ ತೆರಳಿರುವ ಭಾರತದ ವಿದೇಶಾಂಗ ಸಚಿವ ಜೈಶಂಕರ್​ ಫ್ರಾನ್ಸ್​ನ ಲೆ ಮಾಂಡೆ ದೈನಿಕಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಸಲಹೆ ನೀಡಿದ್ದಾರೆ. ನಮ್ಮ ಸ್ನೇಹ ಬೇಕಿದ್ದರೆ ದಾವೂದ್​ ಇಬ್ರಾಹಿಂ ಮತ್ತು ಹಫೀಜ್​ ಸಯ್ಯೀದ್​ರಂಥ ಉಗ್ರರನ್ನು ಪಾಕಿಸ್ತಾನ ಕೂಡಲೇ ಭಾರತಕ್ಕೆ ಹಸ್ತಾಂತರಿಸಬೇಕು ಎಂದು ಹೇಳಿದ್ದಾರೆ.

ಪಾಕಿಸ್ತಾನ ಉಗ್ರರನ್ನು ತಯಾರಿಸುವ ಘಟಕಗಳನ್ನು ಹೊಂದಿದೆ. ಆ ಘಟಕಗಳಲ್ಲಿ ತಯಾರಾಗುವ ಉಗ್ರರನ್ನು ಭಾರತದಲ್ಲಿ ದಾಳಿ ಮಾಡಲು ಅದು ಕಳುಹಿಸುತ್ತದೆ. ಈ ವಿಷಯವನ್ನು ಸ್ವತಃ ಪಾಕಿಸ್ತಾನ ಒಪ್ಪಿಕೊಂಡಿದೆ. ಇದು ಉಭಯ ರಾಷ್ಟ್ರಗಳ ನಡುವಿನ ಸಂಬಂಧ ಹಳಸಲು ಪ್ರಮುಖ ಕಾರಣ ಎಂದು ವಿವರಿಸಿದ್ದಾರೆ.

ಭಯೋತ್ಪಾದನಾ ಕೃತ್ಯಗಳಿಗೆ ಕುಮ್ಮಕ್ಕು ನೀಡುವ ನೆರೆಯ ರಾಷ್ಟ್ರದೊಂದಿಗೆ ಉತ್ತಮ ಬಾಂಧವ್ಯ ಹೊಂದಲಾದರೂ ಹೇಗೆ ಸಾಧ್ಯ ಎಂದು ಪ್ರಶ್ನಿಸಿರುವ ಜೈಶಂಕರ್​, ಭಯೋತ್ಪಾದನೆಗೆ ಕುಮ್ಮಕ್ಕು ನೀಡುವುದನ್ನು ನಿಲ್ಲಿಸುವ ನಿಟ್ಟಿನಲ್ಲಿ ಪಾಕಿಸ್ತಾನ ಪ್ರಾಮಾಣಿಕವಾದ ಇಚ್ಛಾಶಕ್ತಿ ತೋರಬೇಕು. ಆಗಮಾತ್ರ ಆ ರಾಷ್ಟ್ರದೊಂದಿಗೆ ಬಾಂಧವ್ಯ ಸುಧಾರಣೆಯ ಮಾತುಕತೆ ಮಾಡಬಹುದು ಎಂದು ಹೇಳಿದ್ದಾರೆ.

ಉದಾಹರಣೆಗೆ, ಭಾರತದ ಮುಂಬೈನಲ್ಲಿ ಹಿಂಸಾಚಾರ ಎಸಗಿ ಪಾಕಿಸ್ತಾನದಲ್ಲಿ ಅಡಗಿಕೊಂಡಿರುವ ದಾವೂದ್​ ಇಬ್ರಾಹಿಂ ಮತ್ತು ಹಫೀಜ್​ ಸಯ್ಯೀದ್​ರಂಥ ಉಗ್ರರನ್ನು ಹಸ್ತಾಂತರಿಸುವಂತೆ ಪಾಕಿಸ್ತಾನಕ್ಕೆ ಹೇಳುತ್ತಲೇ ಇದ್ದೇವೆ. ಆದರೆ ಅದು ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

2008ರ ಮುಂಬೈ ದಾಳಿಯ ಸಂಚುಕೋರ ಹಫೀಜ್​ ಸಯ್ಯೀದ್​ನನ್ನು ಅಕ್ರಮ ಚಟುವಟಿಕೆ (ತಡೆ) ಕಾಯ್ದೆಯನ್ವಯ ಉಗ್ರನೆಂದು ಮತ್ತು ಜೈಷ್​ ಎ ಮೊಹಮ್ಮದ್​ ಭಯೋತ್ಪಾದನಾ ಸಂಘಟನೆಯ ಪ್ರಮುಖ ಉಗ್ರ ಮಸೂದ್​ ಅಜರ್​ನನ್ನು ಜಾಗತಿಕ ಉಗ್ರನೆಂದು ವಿಶ್ವಸಂಸ್ಥೆ ಘೋಷಿಸಿದೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಕಳೆದ ವರ್ಷ ಬಿಡುಗಡೆ ಮಾಡಿದ್ದ ಉಗ್ರರ ಪಟ್ಟಿಯಲ್ಲಿ ದಾವೂದ್​ ಇಬ್ರಾಹಿಂನ ಹೆಸರು ಕೂಡ ಕಾಣಿಸಿಕೊಂಡಿತ್ತು. ಈ ಮೂವರು ಉಗ್ರರು ಪಾಕಿಸ್ತಾನದಲ್ಲೇ ನೆಲೆಸಿದ್ದಾರೆ ಎನ್ನಲಾಗಿದೆ. (ಏಜೆನ್ಸೀಸ್​)

Stay connected

278,753FansLike
588FollowersFollow
627,000SubscribersSubscribe

ವಿಡಿಯೋ ನ್ಯೂಸ್

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...

VIDEO| ಹರ್ಷಿಕಾ ಪೂಣಚ ಅವರ ಕುತ್ತಿಗೆಗೆ ಸುತ್ತುವರಿದ ಹಾವು…!: ಟ್ವಿಟರ್​ನಲ್ಲಿ...

ಬೆಂಗಳೂರು: ಸದಾ ಸಕ್ರಿಯರಾಗಿರುವ ಚಿತ್ರನಟಿ ಹರ್ಷಿಕಾ ಪೂಣಚ ಅವರ ಟ್ವಿಟರ್ ಅಕೌಂಟ್​ನಲ್ಲಿ ಶನಿವಾರ ಒಂದು ವಿಡಿಯೋ ಅಪ್ಲೋಡ್ ಆಗಿದ್ದು, ಅದರಲ್ಲಿ ಅವರ ವಿಯೆಟ್ನಾಂ ಅನುಭವದ ಒಂದು ಅಂಶ ಬಹಿರಂಗವಾಗಿದೆ. ಹರ್ಷಿಕಾ ಪೂಣಚ...

VIDEO| ನಟ ರಿಷಿ ಅಭಿನಯದ “ಸಾರ್ವಜನಿಕರಿಗೆ ಸುವರ್ಣಾವಕಾಶ” ಚಿತ್ರದ ರೊಮ್ಯಾಂಟಿಕ್​...

ಬೆಂಗಳೂರು: "ಆಪರೇಷನ್​ ಅಲಮೇಲಮ್ಮ" ಚಿತ್ರ ಖ್ಯಾತಿಯ ನಟ ರಿಷಿ ಅಭಿನಯದ ಹೊಚ್ಚ ಹೊಸ "ಸಾರ್ವಜನಿಕರಿಗೆ ಸುವರ್ಣಾವಕಾಶ" ಸಿನಿಮಾದ ಲಿರಿಕಲ್​ ವಿಡಿಯೋ ಸಾಂಗ್​ ಶುಕ್ರವಾರ ಬಿಡುಗಡೆಯಾಗಿದ್ದು ಯೂಟ್ಯೂಬ್​ನಲ್ಲಿ ಸಂಚಲನ ಸೃಷ್ಟಿಸಿದೆ. ಡಿಸೆಂಬರ್​ 20ಕ್ಕೆ...