More

    ರಾಜ್ಯದಲ್ಲಿ ಅತಿ ಹೆಚ್ಚು ಮಹಿಳಾ ಮತದಾರರು ಇರುವ ಜಿಲ್ಲೆ ಯಾವುದು? ಸೇರಿದಂತೆ ಉಪಯುಕ್ತ ಮಾಹಿತಿ ಇಲ್ಲಿದೆ

    ಉಡುಪಿ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. 220 ಕ್ಷೇತ್ರಗಳಲ್ಲಿ ಒಟ್ಟು ಎಷ್ಟು ಮತದಾರರಿದ್ದಾರೆ ಗೊತ್ತಾ? ಈ ಪೈಕಿ ಮಹಿಳಾ ಮತ್ತು ಪುರುಷ ಮತದಾರರ ಸಂಖ್ಯೆ ಎಷ್ಟಿದೆ? ಅದರಲ್ಲೂ ಅತಿ ಹೆಚ್ಚು ಹಾಗೂ ಅತೀ ಕಡಿಮೆ ಮಹಿಳಾ ಮತದಾರರು ಇರುವ ಜಿಲ್ಲೆ ಯಾವುದು? ಎಂಬುದಕ್ಕೆ ಇಲ್ಲಿದೆ ಉತ್ತರ.

    ರಾಜ್ಯದಲ್ಲಿ ಇತ್ತೀಚೆಗೆ 2023ರ ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ನಂತರ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಉಡುಪಿ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ಮಹಿಳಾ ಮತದಾರರಿರುವ ಅಂಶ ಬೆಳಕಿಗೆ ಬಂದಿದೆ. ಈ ಪೈಕಿ ಕನಿಷ್ಠ ಮಹಿಳಾ ಮತದಾರರು ಇರುವ ಕ್ಷೇತ್ರ ಬೆಂಗಳೂರು ಗ್ರಾಮಾಂತರ. ಈ ಕುರಿತು ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಟ್ವೀಟ್​ ಮಾಡಿದ್ದಾರೆ.

    ರಾಜ್ಯದಲ್ಲಿರುವ ಒಟ್ಟು ಮತದಾರರ ಸಂಖ್ಯೆ 5,05,48,553. ಈ ಪೈಕಿ 2,54,49,725 ಪುರುಷರು ಮತ್ತು 2,50,94,326 ಮಹಿಳಾ ಮತದಾರರಿದ್ದಾರೆ. ಪುರುಷರೇ ಅಧಿಕವಾಗಿದ್ದಾರೆ. ಆದರೆ ಉಡುಪಿ ಜಿಲ್ಲೆಯಲ್ಲಿರುವ ಒಟ್ಟು 10,16,245 ಮತದಾರರಲ್ಲಿ 5,26,173 ಮಹಿಳಾ ಮತದಾರರು ಇರುವುದು ವಿಶೇಷ. 12 ಲಿಂಗತ್ವ ಅಲ್ಪಸಂಖ್ಯಾತರೂ ಇಲ್ಲಿದ್ದಾರೆ.

    ಮಂಡ್ಯದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ: ಸ್ಥಳದಲ್ಲೇ ರೈತ ಸಾವು, ಬಾಲಕನ ಸ್ಥಿತಿ ಗಂಭೀರ

    ಒಡತಿಗಾಗಿ 4 ದಿನ ಆಸ್ಪತ್ರೆಯ ಬಾಗಿಲು ಕಾದ ಪಪ್ಪಿ… ಒಡತಿ ಬದುಕಿ ಬರಲೇ ಇಲ್ಲ… ಶಿವಮೊಗ್ಗದಲ್ಲಿ ಮನಕಲಕುವ ಘಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts