More

    ಭಾರತವನ್ನು ಸೋಲಿಸಲು ಬಾಂಗ್ಲಾಗೆ ಮೆಗಾ​ ಆಫರ್​ ಕೊಟ್ಟ ಪಾಕಿಸ್ತಾನದ ಸೆಹರ್​ ಶಿನ್ವಾರಿ ಹಿನ್ನೆಲೆ ಏನು?

    ನವದೆಹಲಿ: ಅ. 14ರಂದು ಗುಜರಾತಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆದ ವಿಶ್ವಕಪ್​ ಟೂರ್ನಿಯ 12ನೇ ಪಂದ್ಯದಲ್ಲಿ ಆತಿಥೇಯ ಭಾರತ ವಿರುದ್ಧ ಪಾಕಿಸ್ತಾನ ಹೀನಾಯ ಸೋಲನ್ನು ಅನುಭವಿಸಿತು. ಇದು ಪಾಕ್​ ಕ್ರೀಡಾಭಿಮಾನಿಗಳಿಗೆ ಇನ್ನೂ ಸಹಿಸಿಕೊಳ್ಳಲು ಆಗುತ್ತಿಲ್ಲ. ಹೇಗಾದರೂ ಮಾಡಿ ಭಾರತ ವಿರುದ್ಧ ಸೇಡು ತೀರಿಸಿಕೊಳ್ಳಬೇಕೆಂದು ಹಂಬಲಿಸುತ್ತಿದ್ದು, ಇದರ ನಡುವೆ ಪಾಕ್​ ನಟಿಯೊಬ್ಬಳು ವಿಭಿನ್ನ ಹಾದಿಯನ್ನು ತುಳಿದಿದ್ದಾಳೆ.

    ಇಂದು ಭಾರತ ಮತ್ತು ಬಾಂಗ್ಲಾದೇಶದ ವಿರುದ್ಧ ವಿಶ್ವಕಪ್​ ಟೂರ್ನಿಯ 17ನೇ ಪಂದ್ಯ ಪುಣೆಯಲ್ಲಿರುವ ಮಹಾರಾಷ್ಟ್ರ ಕ್ರಿಕೆಟ್​ ಅಸೋಸಿಯೇಷನ್​ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಭಾರತವನ್ನು ಸೋಲಿಸಿದ್ದಲ್ಲಿ, ಬಾಂಗ್ಲಾ ತಂಡದ ಆಟಗಾರರೊಂದಿಗೆ ಡಿನ್ನರ್​ ಡೇಟ್​ಗೆ ಬರಲು ಸಿದ್ಧಳಿರುವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಶಿನ್ವಾರಿ ಪ್ರಕಟಿಸಿದ್ದಾಳೆ.

    ಶಿನ್ವಾರಿ ಪೋಸ್ಟ್​ನಲ್ಲಿ ಏನಿದೆ?
    “ಇನ್​ಶಾಅಲ್ಲಾ, ನನ್ನ ಬಂಗಾಲಿ ಬಂಧು ಮುಂದಿನ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲಿ. ನಾನಾಗ ಢಾಕಾಗೆ ತೆರಳಿ ಬಂಗಾಲಿ ಹುಡುಗರೊಂದಿಗೆ ಡಿನ್ನರ್​ ಡೇಟ್​ಗೆ ತೆರಳುವೆ’ ಎಂದು ಶಿನ್ವಾರಿ ಎಕ್ಸ್​ನಲ್ಲಿ ಬರೆದುಕೊಂಡಿದ್ದಾಳೆ. ಈ ನಡುವೆ ಭಾರತ ತಂಡ ವಿಶ್ವಕಪ್​ನಲ್ಲಿ ಸೆಮಿಫೈನಲ್​ನಲ್ಲೇ ಹೊರಬೀಳಲಿದೆ ಎಂದು ಭವಿಷ್ಯ ನುಡಿದಿರುವ ಶಿನ್ವಾರಿ, ಪಾಕಿಸ್ತಾನ ಮತ್ತು ನ್ಯೂಜಿಲೆಂಡ್​ ತಂಡಗಳು ಫೈನಲ್​ನಲ್ಲಿ ಆಡಲಿವೆ ಎಂದಿದ್ದಾಳೆ. ಅಲ್ಲದೆ, ಪಾಕ್​ ತಂಡ ವಿಶ್ವಕಪ್​ ಎತ್ತಿಹಿಡಿಯುವ ಕನಸನ್ನೂ ಹಂಚಿಕೊಂಡಿದ್ದಾಳೆ.

    ಯಾರು ಈ ಶಿನ್ವಾರಿ?
    ಸೆಹರ್ ಶಿನ್ವಾರಿ ಹುಟ್ಟಿದ್ದು ಪಾಕಿಸ್ತಾನದ ಹೈದರಾಬಾದ್​ನಲ್ಲಿ. ಖೈಬರ್‌ನಲ್ಲಿ “ಸೈರ್ ಸಾವಾ ಸೈರ್” ಎಂಬ ಹಾಸ್ಯ ಸರಣಿಯೊಂದಿಗೆ 2014 ರಲ್ಲಿ ವೃತ್ತಿಜೀವನವನ್ನು ಪ್ರಾರಂಭಿಸಿದಳು. 2015 ರಲ್ಲಿ ಕರಾಚಿ ಸ್ಟೇಷನ್​ ಮಾಧ್ಯಮದಲ್ಲಿ ಬೆಳಗಿನ ಕಾರ್ಯಕ್ರಮದ ನಿರೂಪಕಿಯಾಗಿಯು ಕೆಲಸ ಮಾಡಿದ್ದಾಳೆ. ಸಾಮಾಜಿಕ ಜಾಲತಾಣದಲ್ಲಿ ತನ್ನ ನಟನೆ ಮತ್ತು ವೈರಲ್ ವಿಡಿಯೋಗಳಿಂದಲೇ ಸೆಹರ್​ ಹೆಸರುವಾಸಿಯಾಗಿದ್ದಾಳೆ. ಟಿಕ್‌ಟಾಕ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಸೆಹರ್​ ತುಂಬಾ ಸಕ್ರಿಯಳಾಗಿದ್ದಾಳೆ. ಇನ್​ಸ್ಟಾಗ್ರಾಂನಲ್ಲಿ 33,000 ಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾಳೆ. ಆಕೆಯ ಟ್ವೀಟ್‌ಗಳು ಈ ಹಿಂದೆ ಮಾಧ್ಯಮಗಳ ಗಮನವನ್ನು ಸೆಳೆದಿದ್ದವು.

    ಜಾಲತಾಣದಲ್ಲಿ ಮುಖಭಂಗ
    ಭ್ರಷ್ಟಾಚಾರ ಪ್ರಕರಣದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ ಅವರನ್ನು ಈ ಹಿಂದೆ ಬಂಧಿಸಿದಾಗ ದೇಶಾದ್ಯಂತ ಹಿಂಸಾಚಾರ ಭುಗಿಲೆದ್ದಿತ್ತು. ಈ ವೇಳೆ ಟ್ವೀಟ್​ ಮಾಡಿದ್ದ ಶಿನ್ವಾರಿ, ಪಾಕ್​ನಲ್ಲಿ ನಿರ್ಮಾಣವಾಗಿರುವ ನಾಗರಿಕ ಯುದ್ಧದಂತಹ ಪರಿಸ್ಥಿತಿ ಹಾಗೂ ಗಲಭೆಗೆ ಪ್ರಧಾನಿ ಮೋದಿ ಕಾರಣ ಎನ್ನುವ ಮೂಲಕ ಭಾರತೀಯರ ಕೆಂಗಣ್ಣಿಗೆ ಗುರಿಯಾಗಿದ್ದಳು. ನನ್ನ ದೇಶ ಪಾಕಿಸ್ತಾನದಲ್ಲಿ ಈಗ ಉಂಟಾಗಿರುವ ಅವ್ಯವಸ್ಥೆ ಮತ್ತು ಭಯೋತ್ಪಾದನೆಯನ್ನು ಹರಡುತ್ತಿರುವ ಭಾರತದ ಪ್ರಧಾನಿ ಮತ್ತು ಭಾರತೀಯ ಗುಪ್ತಚರ ಸಂಸ್ಥೆ RAW ವಿರುದ್ಧ ನಾನು ದೂರು ದಾಖಲಿಸಬೇಕಾಗಿದೆ, ಯಾರಾದರೂ ದೆಹಲಿ ಪೊಲೀಸರ ವೆಬ್​ಸೈಟ್​ ಲಿಂಕ್​ ಇದ್ದರೆ ಕಳುಹಿಸಿಕೊಡಿ ಎಂದು ಕೇಳಿದ್ದಾಳೆ. ಭಾರತೀಯ ನ್ಯಾಯಾಲಯಗಳು ಸ್ವತಂತ್ರವಾಗಿದ್ದರೆ ಅಲ್ಲಿನ ಸುಪ್ರೀಂ ಕೋರ್ಟ್ ನನಗೆ ನ್ಯಾಯವನ್ನು ನೀಡುತ್ತದೆ ಎಂದು ನನಗೆ ಖಾತ್ರಿಯಿದೆ ಎಂದು ಸೆಹರ್ ಶಿನ್ವಾರಿ ಟ್ವೀಟ್​ನಲ್ಲಿ ಹೇಳಿಕೊಂಡಿದ್ದಳು. ನಟಿಯ ಟ್ವೀಟ್​ಗೆ ಪ್ರತಿಕ್ರಿಯಿಸಿದ್ದ ದೆಹಲಿ ಪೊಲೀಸರು ನಮ್ಮ ಕಾರ್ಯವ್ಯಾಪ್ತಿ ಪಾಕಿಸ್ತಾನಕ್ಕೆ ಒಳಪಡುವುದಿಲ್ಲ. ನಿಮ್ಮ ದೇಶದಲ್ಲಿ ಇಂಟರ್​ನೆಟ್​ ಸೌಲಭ್ಯ ಕಡಿತಗೊಂಡಿದ್ದರೂ ನೀವು ಹೇಗೆ ಟ್ವೀಟ್​ ಮಾಡುತ್ತಿದ್ದೀರಾ ಎಂದು ಪ್ರಶ್ನಿಸುವ ಮೂಲಕ ಟಾಂಗ್​ ಕೊಟ್ಟಿದ್ದರು. ಶಿನ್ವಾರಿ ತನ್ನ ಹೇಳಿಕೆಯನ್ನು ಹಿಂಪಡೆಯಬೇಕು ಎಂದು ನೆಟ್ಟಿಗರು ಆಕ್ರೋಶ ಹೊರಹಾಕಿದ್ದರು.

    ಚಂದ್ರಯಾನ-3 ಯಶಸ್ಸಿನ ಬಗ್ಗೆ ಮಾತು
    ಈ ಹಿಂದೆ ನಟಿ ಸೆಹರ್​ ಶಿನ್ವಾರಿ, ಚಂದ್ರಯಾನ 3 ಯಶಸ್ಸಿನ ಬಗ್ಗೆ ನೀಡಿದ್ದ ಹೇಳಿಕೆ ಭಾರೀ ವೈರಲ್​ ಆಗಿತ್ತು. ಇಸ್ರೋ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದ ಶಿನ್ವಾರಿ, ವಿಜ್ಞಾನ ಮತ್ತು ತಂತ್ರಜ್ಞಾನ ವಿಚಾರದಲ್ಲಿ ಭಾರತಕ್ಕಿಂತ ತಮ್ಮ ದೇಶ ಎಷ್ಟು ಹಿಂದೆ ಬಿದ್ದಿದೆ ಎಂಬುದನ್ನು ಈ ಚಂದ್ರಯಾನ-3 ಯಶಸ್ಸು ತೋರಿಸಿದೆ ಎಂದು ಒಪ್ಪಿಕೊಂಡಿದ್ದರು. ಉಭಯ ದೇಶಗಳ ನಡುವಿನ ಹಗೆತನವನ್ನು ಹೊರತುಪಡಿಸಿ, ಚಂದ್ರಯಾನ 3 ಮೂಲಕ ಬಾಹ್ಯಾಕಾಶ ಸಂಶೋಧನೆಯಲ್ಲಿ ಇತಿಹಾಸ ಬರೆದ ಇಸ್ರೋಗೆ ನಾನು ನಿಜವಾಗಿಯೂ ಅಭಿನಂದನೆ ಸಲ್ಲಿಸುತ್ತೇನೆ. ಪಾಕಿಸ್ತಾನ ಮತ್ತು ಭಾರತ ನಡುವೆ ಇರುವ ಎಲ್ಲ ಅಂತರವು ಎಲ್ಲ ಅಂಶಗಳಲ್ಲಿ ಎಷ್ಟು ಮಟ್ಟಕ್ಕೆ ವಿಸ್ತರಿಸಿದೆ ಎಂದರೆ ಭಾರತದ ಸರಿಸಮಾನಕ್ಕೆ ಬರಲು ಪಾಕಿಸ್ತಾನಕ್ಕೆ ಎರಡರಿಂದ ಮೂರು ದಶಕಗಳನ್ನೇ ತೆಗೆದುಕೊಳ್ಳುತ್ತದೆ ಎಂದು ಶಿನ್ವಾರಿ ಹೇಳಿದ್ದರು.

    ತಲೆಗಳು ನಾಚಿಕೆಯಿಂದ ಬಾಗಿವೆ
    ದುರದೃಷ್ಟವಶಾತ್, ನಮ್ಮ ಇಂದಿನ ದುಸ್ಥಿತಿಗೆ ನಾವೇ ಕಾರಣ ಹೊರತು ಬೇರೆ ಯಾರೂ ಅಲ್ಲ. ಮೌಲ್ವಿ ತಮೀಜುದ್ದೀನ್ ಅವರ ಅಸೆಂಬ್ಲಿಯನ್ನು ಅಕ್ರಮವಾಗಿ ವಿಸರ್ಜಿಸಿದಾಗಿನಿಂದ ನಾವು ದೇಶದಲ್ಲಿ ಕಾನೂನು ಮತ್ತು ಸಂವಿಧಾನದ ಪರಮಾಧಿಕಾರಕ್ಕಾಗಿ ಶ್ರಮಿಸುತ್ತಿದ್ದೇವೆ. ಇದರ ನಡುವೆ ಇಂದು ಭಾರತ ಎಲ್ಲಿಗೆ ತಲುಪಿದೆ ಎಂಬುದನ್ನು ನೋಡಿ ನಮ್ಮ ತಲೆಗಳು ನಿಜವಾಗಿಯೂ ನಾಚಿಕೆಯಿಂದ ಇಂದು ಬಾಗುತ್ತಿವೆ. ಇಂದು ನಮ್ಮ ನಡುವೆ ಪ್ರಾರಂಭವಾದ ಅಂತರವು ಎಷ್ಟರಮಟ್ಟಿಗೆ ಬೆಳೆದಿದೆ ಎಂಬುದನ್ನು ಭಾರತ ಸಾಬೀತುಪಡಿಸಿದೆ. ಇದನ್ನು ನೋಡಿ ನಮಗೆ ನಾಚಿಕೆಯಾಗಬೇಕು. ಆದರೆ, ಅದನ್ನು ತಲುಪುವುದು ನಮಗೆ ದೊಡ್ಡ ವಿಷಯವೇ ಅಲ್ಲ ಎಂದು ಶಿನ್ವಾರಿ ಹೇಳಿದ್ದರು. (ಏಜೆನ್ಸೀಸ್​)

    ನಾಚಿಕೆಯಾಗಬೇಕು! ಚಂದ್ರಯಾನ-3 ಯಶಸ್ಸಿನ ಬಗ್ಗೆ ಪಾಕ್​ ನಟಿ ಸೆಹರ್​ ಶಿನ್ವಾರಿ ನೀಡಿದ ಹೇಳಿಕೆ ವೈರಲ್​

    ಭಾರತ ವಿರುದ್ಧ ಗೆದ್ದರೆ ಡೇಟಿಂಗ್​ಗೆ ಬರುವೆ; ಬಾಂಗ್ಲಾ ಕ್ರಿಕೆಟಿಗರಿಗೆ ಪಾಕ್​ ನಟಿ ಆಫರ್​!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts