More

    ಕಾಂಗ್ರೆಸ್​ ಗೆಲುವಿನ ಹಿಂದಿರುವ ಸುನೀಲ್​ ಕನುಗೋಲು ಯಾರು?

    ಬೆಂಗಳೂರು: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ.

    ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷ ಹೆಣೆದ ರಣತಂತ್ರಕ್ಕೆ ಬಿಜೆಪಿ ಪಾಳಯ ಛಿದ್ರವಾಗಿದ್ದು ಹಿಂದಿನ ಸರ್ಕಾರದಲ್ಲಿ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದವರು ಸಹ ಹೀನಾಯ ಸೋಲನ್ನು ಅನುಭವಿಸಿದ್ದಾರೆ.

    ತಂತ್ರಗಾರಿಕೆಗೆ ಶ್ರೇಯ

    ಇನ್ನು ಆಡಳಿತ ಪಕ್ಷಗಳ ವೈಫಲ್ಯವನ್ನೇ ಪ್ರಮುಖ ಅಸ್ತ್ರ ಮಾಡಿಕೊಂಡ ಕಾಂಗ್ರೆಸ್​ ಬಿಜೆಪಿ ವಿರುದ್ಧ ಸರಣಿ ಆರೋಪಗಳು ಹಾಗೂ ಹಗರಣಗಳನ್ನು ಜನರಿಗೆ ಮನದಟ್ಟು ಮಾಡುವಲ್ಲಿ ಯಶಸ್ವಿಯಾಯಿತ್ತು.

    ಚುನಾವಣೆಗೂ ಮುನ್ನ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಜನರಿಗೆ ತಲುಪಿಸುವ ಚುನಾವಣಾ ತಂತ್ರಗಾರಿಕೆಯೂ ಸಹ ಫಲ ನೀಡಿದ್ದು ಇದರ ಕ್ರೆಡಿಟ್​ ಬಳ್ಳಾರಿ ಮೂಲದ ಸುನೀಲ್​ ಕನುಗೋಲು ಅವರಿಗೆ ಸಲ್ಲುತ್ತದೆ.

    ಯಾರೀ ಸುನೀಲ್​ ಕುನಗೋಲು

    2018ರ ರಾಜ್ಯ ವಿಧಾನಸಭೆ ಚುನಾವಣೆ ಸಮಯದಲ್ಲಿ ಬಿಜೆಪಿ ಪರ ಚುನಾವಣಾ ತಂತ್ರಗಾರರಾಗಿ ಕೆಲಸ ಮಾಡಿದ್ದ ಸುನೀಲ್​ ಕನುಗೋಲು ಪ್ರಶಾಂತ್​ ಕಿಶೋರ್​ ತಂಡದಲ್ಲಿ ಇದ್ದರೂ ಎನ್ನುವುದು ವಿಶೇಷ.

    ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್​ಗೆ ಹತ್ತಿರವಾಗಿದ್ದ ಸುನೀಲ್​ ರಾಹುಲ್​ ಗಾಂಧಿ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ.

    Sunil kanugolu (1)

    ಇದನ್ನೂ ಓದಿ: ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆಗಳ ಚುನಾವಣೆ; ಪ್ರಚಂಡ ದಿಗ್ವಿಜಯ ಸಾಧಿಸಿದ ಬಿಜೆಪಿ

    ಸಮೀಕ್ಷೆ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ

    ಚುನಾವಣಾ ತಂತ್ರಗಾರ ಸುನೀಲ್​ ಕನುಗೋಲು ಅವರ ತಂಡ ಕಾಂಗ್ರೆಸ್​ ಪಕ್ಷದ ಕೆಲವು ನಾಯಕರನ್ನು ಹೊರತುಪಡಿಸಿ ಮಿಕ್ಕೆಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಸಮೀಕ್ಷೆ ನಡೆಸಿ ಅದರ ವರದಿ ನೀಡಿತ್ತು.

    ಕಳೆದ ವರ್ಷ ಕಾಂಗ್ರೆಸ್​ ನಾಯಕರು ನಡೆಸಿದ್ದ ಚಿಂತನ ಶಿಬಿರದ ಬಳಿಕ ಸುನೀಲ್​ ಅವರನ್ನು ಸೋನಿಯಾ ಗಾಂಧಿ ಮುಂಬರುವ ರಾಜ್ಯ ವಿಧಾನಸಬೆ ಚುನಾವಣೆಗಳು ಹಾಗೂ ಲೋಕಸಭೆ ಚುನಾವಣೆಗೆ ತಂತ್ರಗಾರರನ್ನಾಗಿ ನೇಮಿಸಿದ್ದರು.

    ವಿವಿಧ ಪಕ್ಷಗಳ ಪರ ಕೆಲಸ

    ಇತ್ತೀಚಿನ ವರ್ಷಗಳಲ್ಲಿ ಸುನೀಲ್​ ಕಣುಗೋಲು ಮತ್ತು ಅವರ ತಂಡ ವಿವಿಧ ಪಕ್ಷಗಳ ಪರ ಕೆಲಸ ಮಾಡಿ ಗುರುತಿಸಿಕೊಂಡಿದ್ದಾರೆ. 2016ರಲ್ಲಿ ನಡೆದ ತಮಿಳುನಾಡು ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಜಯಲಲಿತಾ ನೇತೃತ್ವದ ಎಐಎಡಿಎಂಕೆ ಹಾಗೂ 2021ರಲ್ಲಿ ಡಿಎಂಕೆ ಪರ ತಂತ್ರಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ.

    ಪ್ರಶಾಂತ್​ ಕಿಶೋರ್​ ಜೊತೆ ಸೇವೆ ಸಲ್ಲಿಸಿ ಅನುಭವ ಹೊಂದಿರುವ ಸುನೀಲ್​ 2014ರಲ್ಲಿ ಬಿಜೆಪಿಯ ಪರ ಕೆಲಸ ಮಾಡಿದ್ದರು. ಬಿಜೆಪಿಯ ಬಿಲಿಯನ್​ ಮೈಂಡ್ಸ್​ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ ಅನುಭವ ಇವರಿಗಿದೆ. ಉತ್ತರ ಪ್ರದೇಶ, ಉತ್ತರಾಖಂಡ, ಹಿಮಾಚಲ ಪ್ರದೇಶ, ಗುಜರಾತ್ ಮತ್ತು ಕರ್ನಾಟಕದಲ್ಲಿ ಬಿಜೆಪಿ ಪರ ಕೆಲಸ ಮಾಡಿ ಪಕ್ಷ ಗೆಲುವಿನ ನಗೆ ಬೀರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

    ಮೂಲತಃ ಕರ್ನಾಟಕದವರು

    ಕರ್ನಾಟಕದ ಬಳ್ಳಾರಿ ಮೂಲದವರಾದ ಸುನೀಲ್​ ಬೆಳೆದಿದ್ದು ಚೆನ್ನೈನಲ್ಲಿ. ರಾಹುಲ್​ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್​ ನಾಯಕರು ನಡೆಸಿದ ಭಾರತ್​ ಜೋಡೋ ಯಾತ್ರೆಯ ರೂಪುರೇಷೆಯನ್ನು ಸಿದ್ದಪಡಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

    ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಜನರೊಂದಿಗೆ ಸಂಪರ್ಕ ಸಾಧಿಸಲು ಯಾತ್ರೆ ಅನುಕೂಲ ಮಾಡಿದೆ ಮತ್ತು ಪಕ್ಷಕ್ಕೆ ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಸಹಾಯ ಮಾಡಿದೆ.

    ಮುಂದಿದೆ ಸಾಲು ಸಾಲು ಸವಾಲುಗಳು

    ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಸುನೀಲ್​ ಕಣುಗೋಲು ಮುಂದೆ ಸಾಲು ಸಾಲು ಸವಾಲುಗಳು ನಿಂತಿದೆ. ಮುಂಬರುವ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್​ ಪಕ್ಷವನ್ನು ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢ, ಮಿಜೋರಾಂನಲ್ಲಿ ಪಕ್ಷವನ್ನು ಅಧಿಕಾರಿಕ್ಕೆ ತರುವ ಸವಾಲು ಇವರ ಮುಂದಿದೆ.

    ಇದಲ್ಲದೆ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಡಲು ವಿರೋಧ ಪಕ್ಷಗಳನ್ನು ಒಗ್ಗೂಡಿಸಿಕೊಂಡು ಕಾಂಗ್ರೆಸ್​ ಪಕ್ಷವನ್ನು ಸದೃಢವಾಗಿ ಕಟ್ಟುವ ಕೆಲಸ ಇವರ ಮುಂದಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts