More

    ನನ್ನ ಸರ್ಕಾರ ತೆಗೆದದ್ದು ಯಾರು? ಸಿದ್ದರಾಮಯ್ಯಗೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ


    ಬೆಂಗಳೂರು: “ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ?”

    ಹೀಗೆಂದು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

    ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡುವ ಅವರು, ಕುಣಿಯಲಾರದವರು ನೆಲ ಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದೆ ಬೇರೆಯವರ ಮೇಲೆ ಆರೋಪ ಹೊರಿಸುವುದು ನಿರರ್ಥಕ ಸಿದ್ದರಾಮಯ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ ಮಾಜಿ ಮುಖ್ಯಮಂತ್ರಿಗಳು.

    ಕುಣಿಯಲಾರದವನಿಗೆ ನೆಲ ಡೊಂಕು ಎನ್ನುವ ಮಾತೇನೋ ಸರಿ. ಆದರೆ, ಕುಣಿಯಲು ಬಿಟ್ಟು ನೆಲ ಅಗೆಯುವ ನಿಮ್ಮ ‘ಮೈತ್ರಿದ್ರೋಹ’ಕ್ಕೆ ಏನು ಹೇಳುವುದು ಸಿದ್ದರಾಮಯ್ಯನವರೇ? ದೋಖಾ ಮಾಡುವುದೇ ದುರುದ್ದೇಶವಾಗಿದ್ದಾಗ ನೆಲವನ್ನು ಡೊಂಕು ಮಾಡುವುದು ಕಷ್ಟವೇ? ‘ಮೀರುಸಾದಿಕ’ನ ಆಧುನಿಕ ಅವತಾರಿ ಆಗಿರುವ ನಿಮಗೆ ಇಂಥ ಕ್ಷುದ್ರವಿದ್ಯೆಗಳೆಲ್ಲ ಕರತಲಾಮಲಕ. ಅದನ್ನೇ ನೀವು ಸುತ್ತಿಬಳಸಿ ಹೇಳುತ್ತಿದ್ದೀರಿ. ಧೈರ್ಯವಾಗಿ, ನೇರವಾಗಿ ಸತ್ಯ ಹೇಳಲು ಭಯವೇ? ಹೇಳಿ, ಕುಮಾರಸ್ವಾಮಿ ಸರ್ಕಾರವನ್ನು ತೆಗೆದಿದ್ದು ನಾನೇ ಎಂದು ಹೇಳಲು ನಿಮಗೆ ಗುಂಡಿಗೆ ಸಾಲದೇ? ಎಂದು ಅವರು ಹೇಳಿದ್ದಾರೆ.

    ಸಿದ್ಧವನದಲ್ಲಿ ಹೆಣೆದ ಸಿದ್ದಸೂತ್ರ ನನಗೆ ಗೊತ್ತಿಲ್ಲದ ಚಿದಂಬರ ರಹಸ್ಯವೇ? ಬೆಕ್ಕು ಕಣ್ಮುಚ್ಚಿ, ಕದ್ದು ಹಾಲು ಕುಡಿದರೆ ಅನ್ಯರಿಗೆ ಕಾಣದು ಎನ್ನುವಷ್ಟು ಕಿಲಾಡಿತನವೇ? ಇದು ಕಿಲಾಡಿತನವೋ ಅಥವಾ ಕಿಡಿಗೇಡಿತನವೋ? ತಮ್ಮ ಇಂಥ ಸಿದ್ದಲೀಲೆಗಳು ನಮಗೇನೂ ಹೊಸತಲ್ಲ ಎಂದು ಕುಟುಕಿದ್ದಾರೆ.

    ಯಡಿಯೂರಪ್ಪ ಅವರು ಕಾವೇರಿಯನ್ನು ಖಾಲಿ ಮಾಡಲಿಲ್ಲ ಸರಿ, ಜಾರ್ಜ್ ಅವರಿಗೆ ಹಂಚಿಕೆ ಆಗಿದ್ದ ನಿವಾಸದಲ್ಲಿ ನೀವು ಯಾಕೆ ಇದ್ದಿರಿ? ಪಾಪ.. ಅನ್ಯರ ಹಂಗೇಕೆ ಬೇಕಿತ್ತು ನಿಮಗೆ? ಮಾಜಿ ಮುಖ್ಯಮಂತ್ರಿಗಳಿಗೆ ಪ್ರತ್ಯೇಕ ಭಂಗಲೆಯನ್ನೇ ಹಂಚಿಕೆ ಮಾಡುತ್ತಿದ್ದೆವು. ನೀವು ಕೇಳಬಹುದಿತ್ತು. ಕುತಂತ್ರ, ಕುಯುಕ್ತಿಯೇ ಸಿದ್ದಸೂತ್ರ ಆಗಿರುವಾಗ ಭಂಗಲೆ ಬಿಟ್ಟುಕೊಡುವಷ್ಟು ಉದಾರತೆ ನಿಮಗೆ ಎಲ್ಲಿಂದ ಬರಬೇಕು? ಎಂದು ಅವರು ಪ್ರಶ್ನೆ ಮಾಡಿದ್ದಾರೆ.

    ಇಷ್ಟಕ್ಕೂ ಇನ್ನೊಬ್ಬರು ಇದ್ದ, ಅದರಲ್ಲೂ ನನ್ನ ಸಂಪುಟದಲ್ಲಿ ಸಚಿವರಾಗಿದ್ದವರಿಗೆ ಹಂಚಿಕೆ ಆಗಿದ್ದ ಭಂಗಲೆಯಲ್ಲಿ ಸೇರಿಕೊಳ್ಳುವುದು ಸಮಾಜವಾದಿಗೆ ಅದೆಂಥ ಸಭ್ಯತೆ? ಅದೆಂಥ ಶೋಭೆ? ಎಂದು ಅವರು ಕಾಲೆಳೆದಿದ್ದಾರೆ.

    ವೆಸ್ಟ್ ಎಂಡ್ ನಲ್ಲಿ ಇದ್ದ ಕಾರಣವನ್ನು ನಾನು ಈಗಾಗಲೇ ತಿಳಿಸಿದ್ದೇನೆ, ನೂರಾರು ಸಲ. ಆದರೆ, ಜಾರ್ಜ್ ಮನೆಯಲ್ಲಿ ತಾವು ನಡೆಸಿದ ಸಿದ್ದಲೀಲೆಯನ್ನು ಬಹಿರಂಗ ಮಾಡುವಿರಾ? ನಿಮ್ಮ ಅಂತರಂಗವನ್ನು ಒಮ್ಮೆಯಾದರೂ ಬಹಿರಂಗ ಮಾಡಿ ಸಿದ್ದರಾಮಯ್ಯನವರೇ ಎಂದು ಕುಮಾರಸ್ವಾಮಿ ಅವರು ಆಗ್ರಹಿಸಿದ್ದಾರೆ.nn

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts