More

    ಮಳೆಯಿಂದ ಫೈನಲ್​ ಪಂದ್ಯ ರದ್ದಾದರೆ ಯಾರ ಪಾಲಾಗುತ್ತೆ ಟ್ರೋಫಿ; ಹೀಗಿದೆ ಲೆಕ್ಕಾಚಾರ

    ಚೆನ್ನೈ: ವಿಶ್ವದ ಮಿಲಿಯನ್​ ಡಾಲರ್​ ಟೂರ್ನಿಗಳಲ್ಲಿ ಒಂದಾದ ಐಪಿಎಲ್​ಗೆ ಇಂದು (ಮೇ 26) ವರ್ಣರಂಜಿತ ತೆರೆ ಬೀಳಲಿದ್ದು, ಫೈನಲ್​ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್​ ಹಾಗೂ ಕೋಲ್ಕತ ನೈಟ್​ರೈಡರ್ಸ್​ ಮುಖಾಮುಖಿಯಾಗಲಿದೆ. ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್​ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದ್ದು, ಕ್ರಿಕೆಟ್​ ಅಭಿಮಾನಿಗಳನ್ನು ಚಿಂತೆಗೆ ದೂಡಿದೆ.

    ಏಕೆಂದರೆ 17ನೇ ಆವೃತ್ತಿಯ ಐಪಿಎಲ್​ನಲ್ಲಿ ಮೂರು ಪಂದ್ಯಗಳು ಸಂಪೂರ್ಣವಾಗಿ ಮಳೆಗೆ ಆಹುತಿಯಾಗಿದ್ದು, ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ನೀಡಲಾಗಿತ್ತು. ಇದೀಗ ಫೈನಲ್​ ಪಂದ್ಯಕ್ಕೆ ರೆಮಲ್​ ಚಂಡಮಾರುತದ ಭೀತಿ ಎದುರಾಗಿದ್ದು, ಬಂಗಾಳಕೊಲ್ಲಿಯಲ್ಲಿ ಹವಾಮಾನ ವೈಪರಿತ್ಯದಿಂದ ತೀವ್ರ ಚಂಡಮಾರುತ ಎದುರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಂದು ವೇಳೆ ಮಳೆಯಿಂದಾಗಿ ಫೈನಲ್​ ಪಂದ್ಯ ರದ್ದಾದರೆ ಯಾವ ತಂಡ ಚಾಂಪಿಯನ್ ಆಗಲಿದೆ ಎಂಬ ಲೆಕ್ಕಾಚಾರ ಹೊರಬಿದ್ದಿದೆ.

    ಇದನ್ನೂ ಓದಿ: ಆರ್​ಸಿಬಿಯಲ್ಲಿ ವಿರಾಟ್​ಗಿಂತ ಇವರೇ ದೊಡ್ಡವರು; ನಿವೃತ್ತಿಯ ಬಳಿಕ ಹೊಸ ವಿಚಾರ ರಿವೀಲ್​ ಮಾಡಿದ ಡಿಕೆ

    ಐಪಿಎಲ್ 2024 ರ ಅಂತಿಮ ಪಂದ್ಯದಲ್ಲಿ ಮಳೆ ಬಂದು ಪಂದ್ಯವನ್ನು ಆಡಲು ಸಾಧ್ಯವಾಗದಿದ್ದರೆ, ಅದಕ್ಕಾಗಿ ಮೀಸಲು ದಿನವನ್ನು ಇಡಲಾಗಿದೆ. ಮೀಸಲು ದಿನದಂದು ಮಳೆ ಬಂದರೂ ಅಂಪೈರ್ ಹೇಗಾದರೂ ಮಾಡಿ ಪಂದ್ಯವನ್ನು ತಲಾ 5 ಓವರ್‌ಗಳಾಗಿ ಆಡಿಸಲು ಪ್ರಯತ್ನಿಸುತ್ತಾರೆ. 5 ಓವರ್‌ಗಳ ಪಂದ್ಯವೂ ಸಾಧ್ಯವಾಗದಿದ್ದರೆ, ಕನಿಷ್ಠ ಸೂಪರ್ ಓವರ್ ನಡೆಸಲು ಪ್ರಯತ್ನಿಸಲಾಗುವುದು. ಆದರೆ ಎರಡೂ ದಿನ ಧಾರಾಕಾರ ಮಳೆ ಸುರಿದು ಪಂದ್ಯವನ್ನು ರದ್ದುಗೊಳಿಸಿದರೆ, ಈ ಪರಿಸ್ಥಿತಿಯಲ್ಲಿ ಕೋಲ್ಕತ ಚಾಂಪಿಯನ್ ಆಗಿ ಹೊರಹೊಮ್ಮಲಿದೆ.

    ಲೀಗ್​ ಹಂತದ ಅಂಕಪಟ್ಟಿಯಲ್ಲಿ ಪಡೆದ ರನ್‌ರೇಟ್‌, ಅಂಕಗಳ ಮೇಲೆ ವಿಜೇತರನ್ನು ನಿರ್ಧರಿಸಲಾಗುತ್ತದೆ. ಒಂದು ವೇಳೆ ಪಾಯಿಂಟ್ಸ್‌ ಪಟ್ಟಿಯಲ್ಲಿ ವಿಜೇತರನ್ನ ನಿರ್ಧರಿಸುವುದಾದರೆ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವೇ ಚಾಂಪಿಯನ್‌ ಆಗಲಿದೆ, ಸನ್‌ ರೈಸರ್ಸ್‌ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಳ್ಳಲಿದೆ. ಏಕೆಂದರೆ 14 ಪಂದ್ಯಗಳ ಪೈಕಿ 9ರಲ್ಲಿ ಗೆಲುವು ಸಾಧಿಸಿರುವ ಕೋಲ್ಕತ್ತಾ ನೈಟ್‌ರೈಡರ್ಸ್‌ 20 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು 14 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿ 17 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ. ಹೀಗಾಗಿ ಮಳೆಯಿಂದ ಫೈನಲ್​ ಪಂದ್ಯ ರದ್ದುಗೊಂಡರೆ ಕೋಲ್ಕತ ನೈಟ್​ರೈಡರ್ಸ್​ ಚಾಂಪಿಯನ್​ ಪಟ್ಟ ಅಲಂಕರಿಸಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts