21.7 C
Bengaluru
Tuesday, January 21, 2020

ಮತಗಟ್ಟೆ ಸಮೀಕ್ಷೆಯಲ್ಲಿ ರಾಜಸ್ಥಾನ ಕಾಂಗ್ರೆಸ್​ಗೆ: ಮುಖ್ಯಮಂತ್ರಿ ಪಟ್ಟ ಯಾರಿಗೆ?

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಜೈಪುರ (ರಾಜಸ್ಥಾನ): ರಾಜಸ್ಥಾನದಲ್ಲಿ ಈ ಬಾರಿ ಕಾಂಗ್ರೆಸ್​ ಅಧಿಕಾರಕ್ಕೆ ಬರುವ ಸಾಧ್ಯತೆಗಳ ಬಗ್ಗೆ ಚುನಾವಣೆ ಪೂರ್ವ ಸಮೀಕ್ಷೆಗಳು ಭವಿಷ್ಯ ನುಡಿದಿದ್ದವು. ಇದೀಗ ಮತಗಟ್ಟೆ ಸಮೀಕ್ಷೆಗಳೂ ಅದನ್ನೇ ಹೇಳಿವೆ. ಕಾಂಗ್ರೆಸ್​ ಅಧಿಕಾರದತ್ತ ದಾಪುಗಾಲು ಹಾಕುತ್ತಿರುವಾಗಲೇ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಪೈಪೋಟಿಯೂ ಆರಂಭವಾಗಿದೆ.

ರಾಜಸ್ಥಾನ ಕಾಂಗ್ರೆಸ್​ನಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಮತ್ತು ರಾಜಸ್ಥಾನ ಕಾಂಗ್ರೆಸ್​ ಅಧ್ಯಕ್ಷ ಸಚಿನ್​ ಪೈಲಟ್​ ನಡುವೆ ಮುಖ್ಯಮಂತ್ರಿ ಸ್ಥಾನಕ್ಕಾಗಿ ತೀವ್ರ ಪೈಪೋಟಿ ಏರ್ಪಟ್ಟಿದೆ. ಈ ಇಬ್ಬರೂ ನಾಯಕರೂ ವಿಧಾನಸಭೆಗೆ ಸ್ಪರ್ಧಿಸಿರುವುದರಿಂದ ಸಿಎಂ ಯಾರಾಗಲಿದ್ದಾರೆ ಎಂಬ ಕುತೂಹಲ ರಾಜ್ಯಾದ್ಯಂತ ಮನೆ ಮಾಡಿದೆ.

ಇದೇ ಹಿನ್ನೆಲೆಯಲ್ಲಿ ನಿಮ್ಮಿಬ್ಬರ ನಡುವೆ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ್ದ ಅಶೋಕ್​ ಗೆಹ್ಲೋಟ್, ಸದ್ಯಕ್ಕೆ ನಾವೇನೂ ಮಾತನಾಡುವುದಿಲ್ಲ. ಇಬ್ಬರೂ ಚುನಾವಣೆಗೆ ಸ್ಪರ್ಧಿಸುತ್ತಿದ್ದೇವಷ್ಟೇ, ಎಂದು ಹೇಳಿದ್ದರು.

ಇದೇ ಪ್ರಶ್ನೆಗೆ ಉತ್ತರಿಸಿದ್ದ ಸಚಿನ್​ ಪೈಲಟ್​ “ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದು ಚುನಾವಣಾ ಪ್ರಕ್ರಿಯೆ ಪೂರ್ಣಗೊಂಡ ನಂತರ ಗೊತ್ತಾಗಲಿದೆ. ರಾಜಸ್ಥಾನವನ್ನು ಗೆಲ್ಲಲು ನಾವೆಲ್ಲ ಒಟ್ಟಾಗಿ ಹೋರಾಡುತ್ತಿದ್ದೇವೆ. ನಾವು ಬಹುಮತ ಗಳಿಸಿದರೆ, ಯಾರು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಹೈಕಮಾಂಡ್​ ಮತ್ತು ಶಾಸಕರು ನಿರ್ಧಾರ ಮಾಡಲಿದ್ದಾರೆ,” ಎಂದಿದ್ದರು.

ಅಶೋಕ್​ ಗೆಹ್ಲೋಟ್​, ಹೈಕಮಾಂಡ್​ಗೆ ಹತ್ತಿರದವರು. ಮತ್ತು ಹಿರಿಯ ರಾಜಕಾರಣಿ. ಅಲ್ಲದೆ, ಗುಜರಾತ್​ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ಗೆಹ್ಲೋಟ್​ ಪಕ್ಷದ ಗಣನೀಯ ಸಾಧನೆ ಮಾಡಲು ಕಾರಣಕರ್ತರಾಗಿದ್ದರು ಇದು ಅವರ ಆಯ್ಕೆಗಿರುವ ಗಣನೀಯ ಸಂಗತಿಗಳು. ಅದರ ಜತೆಗೆ ಈಗಾಗಲೇ ಅವರು ಎರಡು ಬಾರಿ ಅವರು ಮುಖ್ಯಮಂತ್ರಿ ಆಗಿರುವುದರಿಂದ ಹೊಸ ನಾಯಕತ್ವ ಗುರುತಿಸುವ ಕಾರಣಕ್ಕಾಗಿ ಅವರ ಆಯ್ಕೆಯನ್ನು ತಡೆದರೂ ಅಚ್ಚರಿ ಇಲ್ಲ.

ಇನ್ನೊಂದೆಡೆ, ಯುವ ನಾಯಕರಾಗಿರುವ ಸಚಿನ್​ ಪೈಲಟ್​ ರಾಜಸ್ಥಾನದಲ್ಲಿ ಕಾಂಗ್ರೆಸ್​ ಅನ್ನು ಕಟ್ಟಿ ನಿಲ್ಲಿಸುವಲ್ಲಿ ಸಾಕಷ್ಟು ಶ್ರಮ ವಹಿಸಿದ್ದಾರೆ. ಇದು ಪೈಲಟ್ ಆಯ್ಕೆಗೆ ಸಹಕಾರಿಯಾಗಬಹುದು. ಇವರಿಬ್ಬರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಅಜಯ್​ ಕುಮಾರ್​ ಸಿಂಗ್​ ಅವರೂ ಪೈಪೋಟಿ ಒಡ್ಡಿದ್ದಾರೆ.

ರಾಜಸ್ಥಾನದಲ್ಲಿ ಒಂದು ಬಾರಿ ಬಿಜೆಪಿ ಮತ್ತೊಂದು ಬಾರಿಗೆ ಕಾಂಗ್ರೆಸ್​ ಗೆಲ್ಲುವುದು ಸಂಪ್ರದಾಯವೂ ಹೌದು. ಅದರಂತೆ ಈ ಬಾರಿ ಕಾಂಗ್ರೆಸ್​ನ ಸರದಿ. ಹೀಗಾಗಿ ಕಾಂಗ್ರೆಸ್​ನಲ್ಲಿ ಸಹಜವಾಗಿಯೇ ಮಾಜಿ ಮುಖ್ಯಮಂತ್ರಿ ಸ್ಥಾನದ ಪೈಪೋಟಿ ಏರ್ಪಟ್ಟಿದೆ.

ಅಶೋಕ್​ ಗೆಹ್ಲೋಟ್​ ಮತ್ತು ಪ್ರದೇಶ ಕಾಂಗ್ರೆಸ್​ ಅಧ್ಯಕ್ಷ ಸಚಿನ್​ ಪೈಲಟ್​ ನಡುವೆ ಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ ಇದೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...