More

    ಈ ಮೂವರಲ್ಲಿ ಗೆಲುವು ಯಾರಿಗೆ? ಉತ್ತರಕ್ಕಾಗಿ ‘ತ್ರಿಕೋನ’ ನೋಡಿ..

    ಬೆಂಗಳೂರು: ಏಪ್ರಿಲ್​ ಒಂದರಂದು ಬಿಡುಗಡೆಯಾಗಬೇಕಿದ್ದ ಚಂದ್ರಕಾಂತ್​ ನಿರ್ದೇಶನದ ‘ತ್ರಿಕೋನ’, ಏ.08ಕ್ಕೆ ಮುಂದೂಡಲ್ಪಟ್ಟಿರುವುದು ಗೊತ್ತಿರುವ ವಿಷಯವೇ. ಬಿಡುಗಡೆ ಮುಂದಕ್ಕೆ ಹೋಗಿದ್ದು ಏಕೆ ಎಂದು ನಿರ್ಮಾಪಕ ರಾಜಶೇಖರ್​ ಹೇಳಿದ್ದೂ ಆಗಿದೆ. ಈಗ ಚಿತ್ರದ ಬಿಡುಗಡೆಗೆ ಇನ್ನೊಂದೇ ಒಂದು ದಿನ ಇರುವಂತೆ ಚಿತ್ರತಂಡದವರು ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

    ಇದನ್ನೂ ಓದಿ: 20 ಲಕ್ಷ ರೂ. ಮೌಲ್ಯದ ಚಿನ್ನಾಭರಣವಿದ್ದ ಸೂಟ್​ಕೇಸ್​ ರೈಲ್ವೆ ನಿಲ್ದಾಣದಲ್ಲಿ ಅನಾಥ; 2 ಗಂಟೆ ಬಳಿಕ ಗೊತ್ತಾದಾಗ ಶಾಕ್!

    ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ಚಂದ್ರಕಾಂತ್​, ‘ಎಲ್ಲಾ ಮನುಷ್ಯನಲ್ಲೂ ಮನಸ್ಸಿದೆ. ಆ ಮನಸ್ಸನ್ನು ನಾವು ಕ್ರೀಡಾ ಮೈದಾನ ಎನ್ನಬಹುದು. ಏಕೆಂದರೆ ಮನಸ್ಸಿನಲ್ಲಿ ಮೋಸ, ದ್ವೇಷ, ಅಸೂಯೆ, ಸೇಡು, ದುರಾಸೆ ಎಂಬ ಕ್ರೀಡೆಗಳು ನಡೆಯುತ್ತಿರುತ್ತದೆ. ಇದರಲ್ಲಿ ಅಹಂ, ಶಕ್ತಿ ಹಾಗೂ ತಾಳ್ಮೆ ಎಂಬ ಸ್ಪರ್ಧಿಗಳು ಇದ್ದಾರೆ. ಈ ಮೂವರಲ್ಲಿ ಗೆಲವು ಯಾರಿಗೆ? ಎಂದು ನೋಡಲು ನೀವು ನಮ್ಮ ಸಿನಿಮಾ ನೋಡಬೇಕು’ ಎಂದು ಹೇಳುತ್ತಾರೆ.

    ‘ತ್ರಿಕೋನ’ ನಿರ್ಮಾಣ ಮಾಡಿರುವ ರಾಜಶೇಖರ್ ಅವರೇ ಕಥೆಯನ್ನೂ ರಚಿಸಿದ್ದಾರೆ. ಈ ಬಗ್ಗೆ ಮಾತನಾಡುವ ಅವರು, ‘ನಾನು ಈ ಹಿಂದೆ ಕೆಲವು ಸಿನಿಮಾಗಳನ್ನು ನಿರ್ಮಾಣ ಹಾಗೂ ನಿರ್ದೇಶನ ಮಾಡಿದ್ದೇನೆ. ಮೊದಲ ಬಾರಿಗೆ ನಿರ್ದೇಶನವನ್ನು ಚಂದ್ರಕಾಂತ್ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಕಥೆ ನಾನೇ ಬರೆದಿದ್ದೇನೆ. ಬೇರೆ ಚಿತ್ರಗಳನ್ನು ನಿರ್ಮಾಣ ಮಾಡಲಿದ್ದು, ಬೇರೆ ನಿರ್ದೇಶಕರೆ ಚಿತ್ರ ನಿರ್ದೇಶಿಸಲಿದ್ದಾರೆ. ಏಕೆಂದರೆ, ಚಂದ್ರಕಾಂತ್ ಸೇರಿದಂತೆ ಬೇರೆ ನಿರ್ದೇಶಕರಿಂದ ನಾನು ತಿಳಿಯುವುದಿದೆ. ಈ ಚಿತ್ರ ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ನಿರ್ಮಾಣವಾಗಿದೆ’ ಎನ್ನುತ್ತಾರೆ.

    ಇನ್ನು, ಈ ಚಿತ್ರಕ್ಕೆ ಹಿರಿಯ ನಟ ಸುಚೇಂದ್ರ ಪ್ರಸಾದ್​ ರಾಯಭಾರಿಯಾಗಿ ಚಿತ್ರವನ್ನು ಪ್ರಚಾರ ಮಾಡುತ್ತಿದ್ದಾರೆ. ‘ನಾನು ಹಾಗೂ ನಿರ್ಮಾಪಕ ರಾಜಶೇಖರ್ ಸಹಪಾಠಿಗಳು. ಅವರು ಬಂದು ‘ತ್ರಿಕೋನ’ ಚಿತ್ರದ ರಾಯಭಾರಿಯಾಗಲು ಕೇಳಿದರು. ಚಿತ್ರ ನೋಡಿದೆ. ಈ ಚಿತ್ರವನ್ನು ಸಿದ್ಧಸೂತ್ರಗಳ ಜಾಡಿನಿಂದ ಹೊರತಪ್ಪಿಸಿ ಮಾಡಿದ್ದಾರೆ. ಸಿನಿಮಾ ಹೆಸರಿನಲ್ಲಿ ಇನ್ನೂ ಏನೇನೋ ಮಾಡುವುದಕ್ಕೆ ಸಾಧ್ಯವಿದೆ ಎಂದು ತೋರಿಸುವ ಪ್ರಯತ್ನ ಮಾಡಿದ್ದಾರೆ. ಈ ಚಿತ್ರ ಚರ್ವಿತಚರ್ವಣವಾಗಿರದೆ, ಅಭಿರುಚಿಯನ್ನು ಬಿತ್ತುವ ಕೆಲಸ ಮಾಡಲಿ ಎಂಬುದು ನನ್ನ ಹಾರೈಕೆ’ ಎನ್ನುತ್ತಾರೆ.

    ಇದನ್ನೂ ಓದಿ: ದೆಹಲಿಯಲ್ಲಿ ಧರ್ಮೇಂದ್ರ ಪ್ರಧಾನ್ ಜತೆ ನಡೆಯಿತು ಸಚಿವ-ಸಂಸದರ ಮಹತ್ವದ ಮಾತುಕತೆ

    ‘ತ್ರಿಕೋನ’ ಚಿತ್ರಕ್ಕೆ ಸುರೇಂದ್ರನಾಥ್ ಸಂಗೀತ ಸಂಯೋಜಿಸಿದ್ದು, ಶ್ರೀನಿವಾಸ್ ವಿನ್ನಕೋಟ ಛಾಯಾಗ್ರಹಣವಿದೆ. ಸುರೇಶ್ ಹೆಬ್ಳೀಕರ್, ಲಕ್ಷ್ಮೀ, ಅಚ್ಯುತ್​ ಕುಮಾರ್, ಸುಧಾರಾಣಿ, ಸಾಧು ಕೋಕಿಲ, ಮಾರುತೇಶ್, ರಾಜವೀರ್, ಬೇಬಿ ಅದಿತಿ, ಬೇಬಿ ಹಾಸಿನಿ, ಮನದೀಪ್ ರಾಯ್, ರಾಕ್​​ಲೈನ್ ಸುಧಾಕರ್ ಮುಂತಾದವರು ಅಭಿನಯಿಸಿದ್ದಾರೆ.

    ಹಿಂದು ರುದ್ರಭೂಮಿಯಲ್ಲಿನ ಸಮಾಧಿಗಳನ್ನು ವಿರೂಪಗೊಳಿಸಿದ ಎಸ್​ಡಿಪಿಐ?!

    ಕಾರುಗಳ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು, ಮೂವರಿಗೆ ಗಾಯ, ಒಬ್ಬರ ಕಾಲು ಮುರಿತ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts