

ಚೆನ್ನೈ: ಇಲ್ಲಿನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯರು ಸಂಪೂರ್ಣ ಪಾರುಪತ್ಯ ಮರೆದಿದ್ದು, ಎದುರಾಳಿಗಳ ಬೆಂಡೆತ್ತಿದೆ. ನಾಲ್ಕನೇ ದಿನದಂತ್ಯಕ್ಕೆ ಗೆಲ್ಲಬೇಕೆಂಬ ಹಂಬಲದೊಂದಿಗೆ ಭಾರತ ದಿನದಾಟ ಆರಂಭಿಸಿದ್ದು, ಮೊದಲ ಇನ್ನಿಂಗ್ಸ್ ವೇಳೆ ನಡೆದ ಘಟನೆಯೊಂದು ಕುತೂಹಲ ಮೂಡಿಸುತ್ತಿದೆ. ಈ ಬಗ್ಗೆ ಕ್ರೀಡಾ ವಲಯದಲ್ಲೂ ವ್ಯಾಪಕವಾಗಿ ಚರ್ಚಿಸಲಾಗುತ್ತಿದೆ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂತೊ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಪ್ರಥಮ ಇನಿಂಗ್ಸ್ ಆಡಿದ ಟೀಮ್ ಇಂಡಿಯಾ 376 ರನ್ಗಳಿಸಿ ಆಲೌಟ್ ಆಯಿತು. ಆತಿಥೇಯರಿಗೆ ಟಕ್ಕರ್ ಕೊಡುವ ನಿಟ್ಟಿನಲ್ಲಿ ಕಣಕ್ಕಿಳಿದ ಬಾಂಗ್ಲಾ ತಂಡವು ಮೊದಲ ಇನ್ನಿಂಗ್ಸ್ನಲ್ಲಿ 149 ರನ್ಗಳಿಗೆ ಆಲೌಟ್ ಆಗುವ ಮೂಲಕ ಎದುರಾಳಿಗಳಿಗೆ 227 ರನ್ಗಳ ಭಾರೀ ಮುನ್ನಡೆ ನೀಡಿದರು.
ಮೊದಲ ಇನಿಂಗ್ಸ್ನಲ್ಲಿ 227 ರನ್ಗಳ ಮುನ್ನಡೆ ಪಡೆದರೂ ಟೀಮ್ ಇಂಡಿಯಾ ಬಾಂಗ್ಲಾದೇಶದ ಫಾಲೋ ಆನ್ ಹೇರದೆ ಎರಡನೇ ಇನ್ನಿಂಗ್ಸ್ ಆರಂಭಿಸಿತು. 227 ರನ್ಗಳ ಮುನ್ನಡೆ ಹೊಂದಿದ್ದರೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಾಂಗ್ಲಾದೇಶ್ ತಂಡಕ್ಕೆ ಅಂತಹ ಯಾವುದೇ ಆಹ್ವಾನ ನೀಡಲಿಲ್ಲ. ಇದಕ್ಕೆ ಕಾರಣವೂ ತಿಳಿದು ಬಂದಿದ್ದು, ನಾಯಕ ರೋಹಿತ್ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.
ಬೃಹತ್ ಮೊತ್ತದ ಮುನ್ನಡೆ ಹೊಂದಿದ್ದರೂ ಟೀಮ್ ಇಂಡಿಯಾ ಫಾಲೋ ಆನ್ ಹೇರದಿರಲು ಮುಖ್ಯ ಕಾರಣ ಮುಂಬರುವ ಟೆಸ್ಟ್ ಸರಣಿಗಳು. ಅಂದರೆ ಭಾರತೀಯ ಬ್ಯಾಟರ್ಗಳು ಮುಂಬರುವ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಆಡಬೇಕಾಗಿರುವ ಕಾರಣ ಬ್ಯಾಟಿಂಗ್ ಅಭ್ಯಾಸ ನಡೆಸಲು ದ್ವಿತೀಯ ಇನಿಂಗ್ಸ್ ಆರಂಭಿಸಿದೆ.ಒಂದು ವೇಳೆ ಫಾಲೋ ಆನ್ ಹೇರಿದರೆ ಬಾಂಗ್ಲಾದೇಶ್ ತಂಡವು ದ್ವಿತೀಯ ಇನಿಂಗ್ಸ್ನಲ್ಲೂ ಕಡಿಮೆ ಮೊತ್ತಕ್ಕೆ ಆಲೌಟ್ ಆಗುವ ಸಾಧ್ಯತೆ ಹೆಚ್ಚಿತ್ತು.
ಹೀಗಾಗಿಯೇ ಟೀಮ್ ಇಂಡಿಯಾ ನ್ಯೂಜಿಲೆಂಡ್, ಆಸ್ಟ್ರೇಲಿಯಾ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ಗೂ ಮುನ್ನ ಬ್ಯಾಟಿಂಗ್ ಅಭ್ಯಾಸ ನಡೆಸಲು ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಅನ್ನು ಬಳಸಿಕೊಳ್ಳುತ್ತಿದೆ. ಅದರಂತೆ ಫಾಲೋ ಆನ್ ಅವಕಾಶವಿದ್ದರೂ ಟೀಮ್ ಇಂಡಿಯಾ ಬ್ಯಾಟಿಂಗ್ಗೆ ಅಭ್ಯಾಸಕ್ಕಾಗಿ ದ್ವಿತೀಯ ಇನಿಂಗ್ಸ್ ಆಡಿದೆ. ಈ ವಿಚಾರವಾಗಿ ನಾಯಕ ರೋಹಿತ್ ಶರ್ಮಗೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.