More

    ಕರೊನಾದಿಂದ ನಮ್ಮನ್ನು ದೇವರೇ ಕಾಪಾಡಬೇಕು ಎಂದು ಶ್ರೀರಾಮುಲು ಹೇಳಿದ್ದೇಕೆ ಗೊತ್ತಾ?

    ಬೆಂಗಳೂರು: ಕರೊನಾದಿಂದ ನಮ್ಮನ್ನು ದೇವರೇ ಕಾಪಾಡಬೇಕು ಎನ್ನುವ ಮೂಲಕ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಆರೋಗ್ಯ ಸಚಿವ ಶ್ರೀರಾಮುಲು, ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

    ‘ಸೋಂಕು ತಡೆಯುವ ಬಗ್ಗೆ ಜನರಲ್ಲಿ ಜಾಗೃತಿ ಬರಬೇಕು. ಸೋಂಕು ನಿಯಂತ್ರಿಸುವಲ್ಲಿ ಜಾಗೃತಿ ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಇಲ್ಲಿ ಎಡವಿದರೆ ಪರಿಸ್ಥಿತಿ ಕ್ಲಿಷ್ಟಕರ’ ಎನ್ನುವ ಸಂರ್ಭದಲ್ಲಿ, ‘ಇನ್ನೂ ಎಡವಿದರೆ ದೇವರೇ ಕಾಪಾಡಬೇಕು’ ಎಂದು ಹೇಳಿದ ಎಚ್ಚರಿಕೆಯ ಮಾತುಗಳು ಅವು. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.

    ಇದನ್ನೂ ಓದಿರಿ ಪೊಲೀಸ್​ ಬೈಕ್​ಗಳ ಡಿಕ್ಕಿ; ಪೇದೆ ಸಾವು, ಎಎಸ್​ಐ ಗಂಭೀರ

    ಆರೋಗ್ಯ ಸಚಿವರು ಚಿತ್ರದುರ್ಗದಲ್ಲಿ ಸುದ್ದಿಗಾರರ ಜತೆ ನಿನ್ನೆ(ಬುಧವಾರ) ಮಾತನಾಡುವಾಗ, ‘ಕರೊನಾ ನಿರ್ವಹಣೆಯ ವಿಚಾರದಲ್ಲಿ ಸಚಿವರು ನಿರ್ಲಕ್ಷ್ಯ ತಾಳಿದ್ದಾರೆ ಎಂಬ ವಾದದಲ್ಲಿ ಹುರುಳಿಲ್ಲ. ನಾವು ನಮ್ಮ ಕೆಲಸವನ್ನು ಪ್ರಾಮಾಣಿಕತೆಯಿಂದ ಮಾಡುತ್ತಿದ್ದೇವೆ. ಆದರೆ ಸೋಂಕಿನ ನಿಯಂತ್ರಣ ಯಾರ ಕೈಲಿದೆ ಹೇಳಿ? ಮುಂದಿನ ಎರಡು ತಿಂಗಳಲ್ಲಿ ಕರೊನಾ ಸೋಂಕು ಮತ್ತಷ್ಟು ಹೆಚ್ಚಾಗುವುದರಲ್ಲಿ ಅನುಮಾನ ಇಲ್ಲ. ನಮ್ಮನ್ನು ದೇವರೇ ಕಾಪಾಡಬೇಕು, ಇಲ್ಲವೇ ಜನರೇ ಜಾಗೃತರಾಗಬೇಕು’ ಎಂದಿದ್ದರು.

    ಈ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೂಡ ಆಕ್ಷೇಪ ಎತ್ತಿದ್ದರು. ಸಚಿವರ ಹೇಳಿಕೆ ಇಡೀ ರಾಜ್ಯವನ್ನು ತಲ್ಲಣಗೊಳಿಸುತ್ತಿದೆ. ಇದು ಶ್ರೀರಾಮುಲು ಅವರ ವೈಯಕ್ತಿಕ ಹೇಳಿಕೆ ಅಲ್ಲ, ಸರ್ಕಾರದ ಸ್ಥಿತಿಯನ್ನು ಸಚಿವರು ಬಹಿರಂಗವಾಗಿ ಹೇಳಿದ್ದಾರೆ. ಕೂಡಲೇ ರಾಜೀನಾಮೆ ನೀಡಿ, ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಬರಲಿ ಎಂದು ಆಗ್ರಹಿಸಿದ್ದರು.

    ಡಿಕೆಶಿ ಆರೋಪಕ್ಕೂ ಟ್ವಿಟರ್​ ಮೂಲಕ ಉತ್ತರಿಸಿರುವ ಶ್ರೀರಾಮುಲು, ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ, ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಆರೋಪಗಳು ಸತ್ಯಕ್ಕೆ ದೂರವಾದದ್ದು’ ಎಂದಿದ್ದಾರೆ.

    ಕೋವಿಡ್ ಆಸ್ಪತ್ರೆಗೆ ಹೋದ ದಿನವೇ ಧ್ರುವ ಸರ್ಜಾ, ಪತ್ನಿ ಪ್ರೇರಣಾ ಡಿಸ್ಚಾರ್ಜ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts