ಸಿಡಿಲು ಬಡಿದು ಹಲವೆಡೆ ಹಾನಿ : ಅಪಾಯ ಮಟ್ಟ ಮೀರಿದ ನೇತ್ರಾವತಿ ಹರಿವು

water

ವಿಜಯವಾಣಿ ಸುದ್ದಿಜಾಲ ಬಂಟ್ವಾಳ

ಬಂಟ್ವಾಳ ತಾಲೂಕಾದ್ಯಂತ ಮಳೆಯ ಅಬ್ಬರ ಶುಕ್ರವಾರವೂ ಮುಂದುವರಿದಿದ್ದು, ಹಲವೆಡೆ ಸಿಡಿಲಿನಿಂದ ಮನೆಗಳಿಗೆ ಹಾನಿ ಸಂಭವಿಸಿದೆ. ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಭಾರಿ ಏರಿಕೆಯಾಗಿದ್ದು, ಆಲಡ್ಕ ಸಹಿತ ತಾಲೂಕಾದ್ಯಂತ ತಗ್ಗುಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ.

ಬೆಳಗ್ಗೆ ನದಿಯಲ್ಲಿ ನೀರಿನ ಮಟ್ಟ 8 ಮೀ.ತಲುಪಿದ್ದು, ಮಧ್ಯಾಹ್ನ ಸಂದರ್ಭ ಅಪಾಯದ ಮಟ್ಟ ಮೀರಿ ಹರಿಯಲಾರಂಭಿಸಿದೆ. ಬಡ್ಡಕಟ್ಟೆ ಬಸ್ ನಿಲ್ದಾಣ, ಪಾಣೆಮಂಗಳೂರಿನ ಆಲಡ್ಕ ಹಾಗೂ ಗೂಡಿನ ಬಳಿಯ ಕಂಚಿಕಾರಪೇಟೆ ಸಹಿತ ತಗ್ಗು ಪ್ರದೇಶಗಳಿಗೆ ನೆರೆ ನೀರು ನುಗ್ಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕು ಆಡಳಿತ ಕಂಚಿಕಾರಪೇಟೆಯ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಿದೆ.

ಡಿಸಿ ಭೇಟಿ: ಬಂಟ್ವಾಳ ತಾಲೂಕಿನ ನೆರೆಪೀಡಿತ ಪ್ರದೇಶಗಳಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ ನೀಡಿ ಪರಿಶೀಲಿಸಿದ್ದು, ತಾಲೂಕು ಆಡಳಿತ ಹಾಗೂ ಪೊಲೀಸರ ಜತೆ ಚರ್ಚಿಸಿ ಪರಿಸ್ಥಿತಿ ಅವಲೋಕಿಸಿದರು. ಇದೇ ವೇಳೆ ಆಲಡ್ಕದಲ್ಲಿ ಮಕ್ಕಳ ಜತೆ ಕೆಲ ಹೊತ್ತು ಕಳೆದ ಜಿಲ್ಲಾಧಿಕಾರಿ ನದಿ ಸಮೀಪ ತೆರಳದಂತೆ, ಅದರಿಂದ ಎದುರಾಗುವ ಅಪಾಯದ ಕುರಿತು ಮಕ್ಕಳಿಗೆ ವಿವರಿಸಿದರು.

ಎಸಿ ಹರ್ಷವರ್ಧನ್, ಎಡಿಸಿ ಜಿ.ಸಂತೋಷ್‌ಕುಮಾರ್, ಎಸ್.ಪಿ.ಯತೀಶ್ ಎನ್, ಆನಂದ, ಇ.ಒ.ಮಹೇಶ್ ಹೊಳ್ಳ, ಸ್ಥಳೀಯ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಬೊಗೋಡಿ, ಬಂಟ್ವಾಳ ನಗರ ಠಾಣಾ ಪೊಲೀಸ್ ಇನ್ಸ್‌ಪೆಕ್ಟರ್ ಆನಂತಪದ್ಮನಾಭ, ಎಸ್.ಐ.ರಾಮಕೃಷ್ಣ, ಗ್ರಾಮಾಂತರ ಎಸ್.ಐ.ಹರೀಶ್, ಕಂದಾಯ ನಿರೀಕ್ಷಕ ಜನಾರ್ದನ ಬಂಟ್ವಾಳ, ವಿಜಯ್ ಪಾಣೆಮಂಗಳೂರು, ಗ್ರಾಮ ಆಡಳಿತ ಅಧಿಕಾರಿಗಳಾದ ಪ್ರಕಾಶ್, ಪ್ರಶಾಂತ್ ಉಪಸ್ಥಿತರಿದ್ದರು.

Share This Article

ಪುರುಷರೇ ಎಡಗೈ, ಮಹಿಳೆಯರ ಬಲ ಅಂಗೈ ತುರಿಕೆಯಾದ್ರೆ ಕಾದಿದೆ ಈ ಗಂಡಾಂತರ!

ಬೆಂಗಳೂರು: ಅಂಗೈ ತುರಿಕೆಯಾಗಿದೆ ಎಂದರೆ ಹಣ ಬರುತ್ತದೆ ಎಂದು ಹಲವರು ಹೇಳುತ್ತಾರೆ. ಕೆಲವರು ಹಣ ಕಳೆದುಕೊಳ್ಳುತ್ತಿದ್ದಾರೆ…

ಈ ದಿನಾಂಕದಂದು ಜನಿಸಿದವರು ಜೀವನದಲ್ಲಿ ರಾಜರಂತೆ ಬದುಕುತ್ತಾರೆ… ನೀವೂ ಇದೇ ದಿನ ಹುಟ್ಟಿದ್ದೀರಾ ನೋಡಿ!

ಜ್ಯೋತಿಷ್ಯಶಾಸ್ತ್ರದಲ್ಲಿ ಸಂಖ್ಯಾಶಾಸ್ತ್ರವೂ ಒಂದು. ಇದರ ಪ್ರಕಾರ ವ್ಯಕ್ತಿಯ ಜನ್ಮ ದಿನಾಂಕವು ಅವನ ವ್ಯಕ್ತಿತ್ವದ ಬಗ್ಗೆ ಮತ್ತು…

ಈ ಮೂರು ಕೆಲಸಗಳನ್ನು ಮಾಡಿದ ನಂತರ ಹಲ್ಲುಜ್ಜಬೇಡಿ! ಅನಾರೋಗ್ಯಕ್ಕೊಳಗಾಗುವುದು ಖಂಡಿತ..

ಬೆಂಗಳೂರು: ಬಾಯಿಯನ್ನು ಸುರಕ್ಷಿತವಾಗಿಟ್ಟುಕೊಳ್ಳುವುದು ಆರೋಗ್ಯಕ್ಕೆ ಬಹಳ ಮುಖ್ಯ. ಸೂಕ್ಷ್ಮಜೀವಿಗಳು ಬಾಯಿಯ ಮೂಲಕ ಹೊಟ್ಟೆಯನ್ನು ಪ್ರವೇಶಿಸುತ್ತವೆ. ಇದು…