More

    ಪತ್ನಿ ಸುನೀತಾಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ, ಚುನಾವಣೆಯಲ್ಲಿ ಸ್ಪರ್ಧಿಸಲ್ಲ: ಅರವಿಂದ್ ಕೇಜ್ರಿವಾಲ್

    ನವದೆಹಲಿ: ಪತ್ನಿ ಸುನೀತಾಗೆ ಸಕ್ರಿಯ ರಾಜಕೀಯದಲ್ಲಿ ಆಸಕ್ತಿ ಇಲ್ಲ. ಭವಿಷ್ಯದಲ್ಲಿ ಅವರು ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ ಹೇಳಿದ್ದಾರೆ.

    ಇದನ್ನೂ ಓದಿ: ದುಬಾರಿ ಕಾರು ಖರೀದಿಸಿದ ನಟ ಅಕ್ಕಿನೇನಿ ನಾಗ ಚೈತನ್ಯ! ಬೆಲೆ ಎಷ್ಟು ಗೊತ್ತಾ?

    ಪಿಟಿಐಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಕೇಜ್ರಿವಾಲ್ ಅವರು, ನನ್ನ ಜೀವನದ ಪ್ರತಿ ಹಂತದಲ್ಲೂ ಸುನೀತಾ ನನಗೆ ಬೆಂಬಲ ನೀಡಿದ್ದಾರೆ. ಅವರಂತಥ ಸಂಗಾತಿ ಸಿಗಲು ಅದೃಷ್ಟ ಮಾಡಿದ್ದೇನೆ. ನನ್ನಂತಹ ವಿಚಿತ್ರ ವ್ಯಕ್ತಿಯನ್ನು ಸಹಿಸಿಕೊಳ್ಳುವುದು ಸುಲಭವಲ್ಲ ಎಂದು ಸಿಎಂ ಕೇಜ್ರಿವಾಲ್ ಹೇಳಿದರು.

    ನಾನು ಜೈಲಿನಲ್ಲಿದ್ದಾಗ ನನ್ನ ಮತ್ತು ದೆಹಲಿ ಜನರ ಮಧ್ಯೆ ಅವರು ಕೊಂಡಿಯಾಗಿ ಕೆಲಸ ಮಾಡಿದ್ದರು. ಅದು ತಾತ್ಕಾಲಿಕವಷ್ಟೇ ಅವರಿಗೆ ಸಕ್ರಿಯ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ಭವಿಷ್ಯದಲ್ಲೂ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಸ್ಪಷ್ಪಪಡಿಸಿದರು. 2000ನೇ ಇಸವಿಯಲ್ಲಿ ಆದಾಯ ತೆರಿಗೆ ಆಯುಕ್ತನಾಗಿದ್ದಾಗ ದೆಹಲಿಯ ಕೊಲಗೇರಿಗಳಲ್ಲಿ ಕೆಲಸ ಮಾಡಲು ರಜೆ ತೆಗೆದುಕೊಂಡಿದ್ದೆ. ಬಳಿಕ ಕೆಲಸಕ್ಕೆ ರಾಜೀನಾಮೆ ನೀಡಿ ಪೂರ್ಣಾವಧಿ ಸಾಮಾಜ ಸೇವೆಗಳಲ್ಲಿ ತೊಡಗಿಸಿಕೊಂಡೆ ಎಂದಿದ್ದಾರೆ.

    2001 ರಿಂದ 2002 ರವರೆಗಿನ ದೆಹಲಿ ಸರ್ಕಾರದ ಮದ್ಯದ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮಗಳ ಅಕ್ರಮಗಳ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಬಂಧಿಸಲಾಯಿತು. ಅವರು ನಡೆಯುತ್ತಿರುವ ಸಾಮಾನ್ಯ ಚುನಾವಣೆಯಲ್ಲಿ ತಮ್ಮ ಆಮ್ ಆದ್ಮಿ ಪಕ್ಷದ ಪ್ರಚಾರಕ್ಕಾಗಿ ಮೇ 10 ರಂದು ಮಧ್ಯಂತರ ಜಾಮೀನಿನ ಮೇಲೆ ಬಿಡುಗಡೆಯಾದರು.

    ಅರವಿಂದ್​ ಕೇಜ್ರಿವಾಲ್ ಅವರು ಬಂಧನಕ್ಕೊಳಗಾದ ನಂತರ ಪತ್ನಿ ಸುನಿತಾ ಅವರು ಪಕ್ಷದ ಜವಾಬ್ದಾರಿ ಹೊತ್ತರು. ಜೈಲಿನಿಂದ ನೀಡುವ ಸಂದೇಶವನ್ನು ಸಭೆಗಳಲ್ಲಿ ಓದಿದರು, ಪಕ್ಷದ ಪರ ರೋಡ್ ಶೋಗಳನ್ನು ನಡೆಸಿದರು. ವಿರೋಧ ಪಕ್ಷದ ರ್ಯಾಲಿಗಳಲ್ಲಿ ಭಾಷಣ ಮಾಡಿದರು.

    ನಟ ಶಾರುಖ್ ಖಾನ್ ಆಸ್ಪತ್ರೆಗೆ ದಾಖಲು: ಅಹಮದಾಬಾದ್​ನಲ್ಲಿ ಚಿಕಿತ್ಸೆ! ಏನಾಯ್ತು?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts