ಕೃಷಿ ತೋಟಕ್ಕೆ ಕಾಡಾನೆ ಲಗ್ಗೆ

krushi
ಕಾಡಾನೆ ದಾಳಿಯಿಂದ ಕೃಷಿ ಹಾನಿಗೊಂಡಿದೆ.
Published on

ವಿಜಯವಾಣಿ ಸುದ್ದಿಜಾಲ ಕಡಬ

ಕಾಡಾನೆ ಕೃಷಿ ತೋಟಕ್ಕೆ ಲಗ್ಗೆ ಇಟ್ಟು ಕೃಷಿ ಹಾನಿ ಮಾಡಿರುವ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ.

ಗ್ರಾಮದ ಹೇರ ಮನೆಯ ಕೃಷಿಕ ಚಂದ್ರಶೇಖರ ಎಂಬುವರ ಕೃಷಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆ ಇನ್ನೂರಕ್ಕೂ ಅಧಿಕ ಅಡಕೆ ಮರ, ಹಲವು ಬಾಳೆ ಗಿಡಗಳನ್ನು ಹಾನಿ ಮಾಡಿದೆ. ಘಟನಾ ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net