More

    ಕಾಡಾನೆ ದಾಳಿಗೆ ವ್ಯಕ್ತಿ ಬಲಿ; ವಯನಾಡಿನಲ್ಲಿ ನಿಷೇಧಾಜ್ಞೆ ಜಾರಿ

    ವಯನಾಡ್​: ಜನವಸತಿ ಪ್ರೆದೇಶಕ್ಕೆ ನುಗ್ಗಿದ ಕಾಡಾನೆಯೊಂದು ವ್ಯಕ್ತಿಯೊಬ್ಬರನ್ನು ತುಳಿದು ಕೊಲೆ ಮಾಡಿರುವ ಘಟನೆ ಕೇರಳದ ವಯನಾಡಿನ ಮಾನಂತವಾಡಿಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.

    ಮೃತ ವ್ಯಕ್ತಿಯನ್ನು ಪ್ರಜೇಶ್ (47) ಎಂದು ಗುರುತಿಸಲಾಗಿದ್ದು, ಇವರು ವೃತ್ತಿಯಲ್ಲಿ ಟ್ಯಾಕ್ಸಿ ಚಾಲಕರಾಗಿದ್ದರು ಎಂದು ತಿಳಿದು ಬಂದಿದೆ. ಆನೆ ಅಜಿಯನ್ನು ಕೊಲ್ಲುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ವ್ಯಾಪಕ ಖಂಡನೆಗೆ ಗುರಿಯಾಗಿದೆ.

    ಕಳೆದ ಒಂದು ವಾರದ ಅವಧಿಯಲ್ಲಿ ಎರಡನೇ ಬಾರಿಗೆ ಈ ಪ್ರದೇಶದಲ್ಲಿ ಕಾಡಾನೆ ದಾಳಿಯಾಗಿದ್ದು, ಜನರನ್ನು ಆತಂಕಕ್ಕೀಡು ಮಾಡಿದೆ. ಸುಮಾರು ದಿನಗಳಿಂದ ಈ ಕಾಡಾನೆ ಮಾನಂತವಾಡಿ ಜನರಿಗೆ ತೊಂದರೆಯನ್ನು ನೀಡುತ್ತಿದೆ ಎಂದು ಅರಣ್ಯಾಧಿಕಾರಿಗೆ ದೂರು ನೀಡಲಾಗಿತ್ತು. ಆದರೆ, ಅಧಿಕಾರಿಗಳು ಈ ದೂರನ್ನು ನಿರ್ಲಕ್ಷಿಸಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಇದನ್ನೂ ಓದಿ: ಚುನಾವಣಾ ಫಲಿತಾಂಶ ಪ್ರಕಟವಾದ ಬೆನ್ನಲ್ಲೇ ಮಾಜಿ ಪ್ರಧಾನಿ ಇಮ್ರಾನ್​ ಖಾನ್​ಗೆ ಜಾಮೀನು

    ಈ ಹಿಂದೆ ಬಂಡೀಪುರ ಅಭಯಾರಣ್ಯದಿಂದ ವಯನಾಡ್​ಗೆ ತನ್ವೀರ್​ ಕೊಂಬನ್​ ಹೆಸರಿನ ಕಾಡಾನೆಯೊಂದು ದಾರಿ ತಪ್ಪಿ ಹಲವರನ್ನು ಬಲಿ ಪಡೆದಿತ್ತು. ನಂತರ ಕೇರಳ ಅರಣ್ಯಧಿಕಾರಿಗಳು ತನ್ನೀರ್ ಕೊಂಬನ್ ಶಾಂತಗೊಳಿಸಿ ಸೆರೆಹಿಡಿದು ಬಂಡೀಪುರ ಅರಣ್ಯಕ್ಕೆ ಸ್ಥಳಾಂತರಿಸಿದ್ದರು. ಆದರೆ, ಈ ಆನೆ ಈಗಾಗಲೇ ಮೃತಪಟ್ಟಿದೆ ಎಂಬ ಸುದ್ದಿ ಕೇಳಿ ಬರುತ್ತಿದೆ. ಈಗ ವ್ಯಕ್ತಿಯನ್ನು ಬಲಿ ಪಡೆದಿರುವ ಕಾಡಾನೆ ಕೊರಳಲ್ಲಿ ರೇಡಿಯೋ ಕಾಲರ್​ ಅಳವಡಿಸಲಾಗಿದ್ದು, ಇದು ಕೂಡ ಕರ್ನಾಟಕದಿಂದ ಬಂದಿದೆ ಎಂದು ಅಲ್ಲಿನ ಅಧಿಕಾರಿಗಳು ಶಂಕಿಸಿದ್ದು ಆನೆ ಸೆರೆ ಹಿಡಿಯುವುದಕ್ಕೆ ಕಾರ್ಯಾಚರಣೆ ಆರಂಭಿಸಿದ್ದಾರೆ.

    ಇತ್ತ ಕಾಡಾನೆ ಉಪಟಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರು ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಜನರ ಕೆಂಗಣ್ಣಿಗೆ ಗುರಿಯಾಗಿದ್ದು, ಸ್ಥಳೀಯ ಶಾಸಕರು, ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹಾಗೂ ಹೆದ್ದಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಮಾನಂತವಾಡಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ರೇಣು ರಾಜ್​ ಮಾಹಿತಿ ನೀಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts