More

    ಅರ್ಜುನನ ಬಲಿ ಪಡೆದಿದ್ದ ಕಾಡಾನೆ ಸೆರೆ ಹಿಡಿದ ಕ್ಯಾಪ್ಟನ್​ ಅಭಿಮನ್ಯು

    ಹಾಸನ: ವಿಶ್ವವಿಖ್ಯಾತ ನಾಡಹಬ್ಬ ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತು ತನ್ನದೇ ಆದ ಛಾಪು ಮೂಡಿಸಿ ಸಾಂಸ್ಕೃತಿಕ ರಾಯಭಾರಿ ಎಂದೇ ಖ್ಯಾತಿ ಪಡೆದಿದ್ದ ಸಾಕಾನೆ ಅರ್ಜುನನ್ನು ಬಲಿ ಪಡೆದಿದ್ದ ಸಾರಾ ಮಾರ್ಟಿನ್ ಹೆಸರಿನ ಆನೆಯನ್ನು ಶನಿವಾರ ಸೆರೆ ಹಿಡಿಯಲಾಗಿದೆ.

    ಮಲೆನಾಡು ಭಾಗದಲ್ಲಿ ಕಳೆದ ಹಲವು ದಿನಗಳಿಂದ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹೇರುವ ನಿಟ್ಟಿನಲ್ಲಿ ಕ್ಯಾಪ್ಟನ್​ ಅಭಿಮನ್ಯು ನೇತೃತ್ವದಲ್ಲಿ ಆನೆ ಸೆರೆ ಕಾರ್ಯಾಚರಣೆ ನಡೆಸಲಾಗಿತ್ತು. ತಾಲ್ಲೂಕಿನ ಪಾಳ್ಯ ಮತ್ತು ಕೆ. ಹೊಸಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಸಾರಾ ಮಾರ್ಟಿನ್​ ಹೆಸರಿನ ಆನೆಯನ್ನು ಸೆರೆ ಹಿಡಿಯಲಾಗಿದೆ.

    Team Abhimanyu

    ಇದನ್ನೂ ಓದಿ: ಧಾರ್ಮಿಕ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಸಾಧುಗಳ ಮೇಲೆ ಹಲ್ಲೆ; ಹಿಂದೂ ಆಗಿರುವುದೆ ಅಪರಾಧ ಎಂದ ಬಿಜೆಪಿ

    ಕೊಡಗು ಜಿಲ್ಲೆಯ ದುಬಾರೆ ಹಾಗೂ ಮತ್ತಿಗೋಡಿನಿಂದ ಬಂದಿದ್ದ ಅಭಿಮನ್ಯು, ಸುಗ್ರೀವ, ಧನಂಜಯ, ಪ್ರಶಾಂತ, ಭೀಮಾ, ಹರ್ಷ, ಅಶ್ವಥ್ಥಾಮ ಮತ್ತು ಮಹೇಂದ್ರ ಎಂಬ ಎಂಟು ಸಾಕಾನೆಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು. ಸ್ಥಳೀಯರಿಂದ ಸಾರಾ ಮಾರ್ಟಿನ್​ ಎಂದೇ ಕರೆಯಲ್ಪಡುತ್ತಿದ್ದ ಕಾಡಾನೆಯನ್ನು ಸೆರೆ ಹಿಡಿಯಲಾಗಿದೆ.

    ಡಿಸೆಂಬರ್ ತಿಂಗಳಲ್ಲಿ ಕಾರ್ಯಾಚರಣೆ ನಡೆಸಿದಾಗ, ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಸಾವನ್ನಪ್ಪಿತ್ತು. ಅದಕ್ಕಿಂತ ಮೊದಲು, ಶಾರ್ಪ್ ಶೂಟರ್ ವೆಂಕಟೇಶ್ ಭೀಮ ಎಂಬ ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದರು. ಮುಂದಿನ ದಿನಗಳಲ್ಲಿ ಸರ್ಕಾರ ಹಾಗೂ ಇಲಾಖೆ ಸೂಚನೆಯಂತೆ ಉಳಿದ ಆನೆಗಳನ್ನು ಸೆರೆ ಹಿಡಿಯಲು ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಫ್‌ಒ ಸೌರತ್ ಕುಮಾರ್ ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts