More

  ಬನ್ನೂರಲ್ಲಿ ಕಾಡಾನೆ ದಾಳಿ

  ಬಾಳೆಹೊನ್ನೂರು: ಸಮೀಪದ ಬನ್ನೂರು ಗ್ರಾಪಂ ವ್ಯಾಪ್ತಿಯಲ್ಲಿ ಕಾಡಾನೆ ದಾಳಿ ಮುಂದುವರಿದಿದ್ದು, ರೈತರ ಜಮೀನುಗಳಿಗೆ ನುಗ್ಗಿ ಬೆಳೆ ಹಾನಿ ಮಾಡಿದೆ.

  ಬನ್ನೂರು ಗ್ರಾಮದ ಕುಂಬ್ರುಮನೆ ಎಂಬಲ್ಲಿ ಪವನ್ ಎಂಬುವರ ತೋಟಕ್ಕೆ ನುಗ್ಗಿರುವ ಕಾಡಾನೆ ಹತ್ತಾರು ಅಡಕೆ ಮರಗಳನ್ನು ಮುರಿದು ಹಾಕಿದೆ. ಅಕ್ಕಪಕ್ಕದ ತೋಟಗಳಿಗೂ ಲಗ್ಗೆ ಇಟ್ಟಿರುವ ಕಾಡಾನೆ ಅಡಕೆ, ಕಾಫಿ ಗಿಡಗಳನ್ನು ಮುರಿದು ಹಾಳು ಮಾಡಿದೆ.
  ಈ ಭಾಗದಲ್ಲಿ ಕಾಡಾನೆ ದಾಳಿ ನಿರಂತರವಾಗಿದ್ದು, ಅರಣ್ಯ ಇಲಾಖೆ, ಜನಪ್ರತಿನಿಧಿಗಳು ಕೂಡಲೇ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಮುಂದಾಗಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts