More

    ಹುಲಿ ಉಗುರು ಸೇರಿ ವನ್ಯಜೀವಿ ಅಂಗಾಂಗ ವಾಪಸ್; 3 ತಿಂಗಳು ಅವಕಾಶ ನೀಡಲು ಪ್ರಸ್ತಾಪ

    ಬೆಂಗಳೂರು: ಹುಲಿ ಉರುಗು ಸೇರಿದಂತೆ ವನ್ಯ ಜೀವಿಗಳ ಅಂಗಾಂಗದ ವಸ್ತುಗಳನ್ನು ಸರ್ಕಾಕ್ಕೆ ವಾಪಸ್ ನೀಡಲು ಒಂದು ಬಾರಿ ಮೂರು ತಿಂಗಳ ಅವಕಾಶ ನೀಡುವ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

    ವಿಕಾಸಸೌಧದಲ್ಲಿ ವನ್ಯ ಜೀವಿಗಳ ಅಂಗಾಂಗದ ಫಲಕ, ಆಭರಣಗಳೇ ಮೊದಲಾದ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಲು ಒಂದು ಬಾರಿ ಅವಕಾಶ ನೀಡುವ ನಿಟ್ಟಿನಲ್ಲಿ ಕಾನೂನಾತ್ಮಕ ವಿಷಯಗಳ ಕುರಿತಂತೆ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ ಮತ್ತು ಕಾನೂನು ಇಲಾಖೆ ಹಾಗೂ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.

    ವನ್ಯ ಜೀವಿಗಳ ಅಂಗಾಂಗ ಇಟ್ಟುಕೊಳ್ಳಲು ಕಾನೂನಿನಲ್ಲಿ ಅಕಾಶವಿಲ್ಲದ ಕಾರಣ ಸರ್ಕಾರಕ್ಕೆ ಮರಳಿಸಲು ಅವಕಾಶ ನೀಡಬಹುದು. ಕೇರಳ ಸರ್ಕಾರ ಕೈಗೊಂಡ ನಿರ್ಧಾರ ಮತ್ತು ನಮ್ಮ ಸರ್ಕಾರದ ಉದ್ದೇಶಿತ ನಿರ್ಧಾರ ವಿಭಿನ್ನವಾಗಿದ್ದು, ಈ ನಿಟ್ಟಿನಲ್ಲಿ ಕಾನೂನು ಇಲಾಖೆಯೊಂದಿಗೆ ಚರ್ಚಿಸಿ ಕಡತವನ್ನು ಪುನರ್ ಮಂಡಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು.

    ಕಾನೂನಿನ ಅರಿವಿಲ್ಲದೆ ತಮ್ಮ ಬಳಿ ವನ್ಯ ಜೀವಿಗಳ ಅಂಗಾಂಗದ ವಸ್ತುಗಳನ್ನು ನೋಂದಣಿ ಮಾಡದೆ ಇಟ್ಟುಕೊಂಡಿರುವ ಮುಗ್ದ ಜನತೆಗೆ ಕಿರುಕುಳ ಆಗದ ರೀತಿಯಲ್ಲಿ ಒಂದು ಬಾರಿ ಕೊನೆಯ ಅವಕಾಶ ನೀಡಿ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಈಶ್ವರ ಖಂಡ್ರೆ ತಿಳಿಸಿದರು.

    ಇದಕ್ಕೂ ಮುನ್ನ ನಡೆದ ಸಭೆಯಲ್ಲಿ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿ, ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಕೇಂದ್ರ ಸರ್ಕಾರದ ಉನ್ನತಾಧಿಕಾರಿ ಮಹೇಶ್, ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಬ್ರಿಜೇಶ್ ಕುಮಾರ್ ದೀಕ್ಷಿತ್, ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಸಂಜಯ್ ಬಿಜ್ಜೂರ್, ಅರಣ್ಯ ಮತ್ತು ಕಾನೂನು ಇಲಾಖೆಯ ಉನ್ನತಾಧಿಕಾರಿಗಳು ಭಾಗಿಯಾಗಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts