"ರಾಜ್ಯದಲ್ಲಿ ಲವ್​ ಜಿಹಾದ್, ಲ್ಯಾಂಡ್ ಜಿಹಾದ್ ವಿರುದ್ಧ ಕಾನೂನು ತರುತ್ತೇವೆ"

shah1
Published on

ದಿಸ್​ಪುರ್​ : ವಿಧಾನಸಭಾ ಚುನಾವಣೆ ನಡೆಯಲಿರುವ ಅಸ್ಸಾಂನಲ್ಲಿ ಬಿಜೆಪಿ ಸರ್ಕಾರಕ್ಕೆ ಮತ್ತೆ ಅಧಿಕಾರ ಕೊಟ್ಟಲ್ಲಿ 'ಲವ್ ಜಿಹಾದ್' ಮತ್ತು 'ಲ್ಯಾಂಡ್ ಜಿಹಾದ್' ವಿರುದ್ಧ ಕಾನೂನು ತರಲಾಗುವುದು ಎಂದು ಬಿಜೆಪಿ ನಾಯಕ ಮತ್ತು ಕೇಂದ್ರ ಗೃಹ ಮಂತ್ರಿ ಅಮಿತ್​ ಷಾ ಹೇಳಿದ್ದಾರೆ.

ಅಸ್ಸಾಂನ ಕಮರೂಪ್​ನಲ್ಲಿ ಚುನಾವಣಾ ರಾಲಿಯಲ್ಲಿ ಭಾಗವಹಿಸಿದ ಷಾ, "ಬಿಜೆಪಿ ಪ್ರಣಾಳಿಕೆಯಲ್ಲಿ ಹಲವಾರು ಮಾತುಗಳನ್ನು ಹೇಳಿದ್ದೇವೆ. ಅದರಲ್ಲಿ ಬಿಜೆಪಿ ಸರ್ಕಾರ ಮಾಡಲಿರುವ ಬಹು ದೊಡ್ಡ ಕೆಲಸವೆಂದರೆ ರಾಜ್ಯದಲ್ಲಿ ನಡೆಯುತ್ತಿರುವ ಲವ್ ಜಿಹಾದ್ ಮತ್ತು ಲ್ಯಾಂಡ್ ಜಿಹಾದ್​ನ ವಿರುದ್ಧ ಕಾನೂನುಗಳನ್ನು ಜಾರಿಗೊಳಿಸುವುದು" ಎಂದರು.

ಈ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತದಲ್ಲಿದ್ದಾಗ ಪ್ರತ್ಯೇಕತಾವಾದ ಮತ್ತು ಆತಂಕವಾದಗಳು ಹೆಚ್ಚಿದ್ದವು. ಕಳೆದ ಐದು ವರ್ಷಗಳಲ್ಲಿ ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಶಾಂತಿಯ ವಾತಾವರಣ ಮೂಡಿಸಿದೆ ಎಂದ ಅಮಿತ್ ಷಾ, 2000 ಕ್ಕೂ ಹೆಚ್ಚು ಪ್ರತ್ಯೇಕತಾವಾದಿಗಳು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಯನ್ನು ಪ್ರವೇಶಿಸಿದ್ದಾರೆ ಎಂದರು. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net