ಮಾನನಷ್ಟ ಪ್ರಕರಣ; ಜಡ್ಜ್​ ನಾಲಿಗೆ ಕತ್ತರಿಸುವುದಾಗಿ ಹೇಳಿದ ಕಾಂಗ್ರೆಸ್​ ಮುಖಂಡ

Rahul Gandhi
Published on

ಚೆನೈ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಹುಲ್​ ಗಾಂಧಿ ಅವರನ್ನು ದೋಷಿ ಎಂದು ತೀರ್ಪು ನೀಡಿದ ಜಡ್ಜ್​ ನಾಲಿಗೆಯನ್ನು ಅಧಿಕಾರಕ್ಕೆ ಬಂದ ಮೇಲೆ ಕತ್ತರಿಸಿ ಹಾಕುತ್ತೇನೆ ಎಂದು ಕಾಂಗ್ರೆಸ್​ ಮುಖಂಡ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಸಂಸತ್​ ಸ್ಥಾನದಿಂದ ರಾಹುಲ್​ ಗಾಂಧಿ ಅವರನ್ನು ಅನರ್ಹಗೊಳಿಸಿರುವುದನ್ನು ಖಂಡಿಸಿ ತಮಿಳುನಾಡು ಕಾಂಗ್ರೆಸ್​ನ ಎಸ್​ಸಿ/ಎಸ್​ಟಿ ವಿಭಾಗವು ಡಿಂಡಿಗಲ್​ನಲ್ಲಿ ಪ್ರತಿಭಟನೆ ನಡೆಸುತ್ತಿತ್ತು. ಈ ವೇಳೆ ಮಾತನಾಡಿದ ಮಣಿಕಂಠನ್​ ಮಾರ್ಚ್​ 23ರಂದು ನಮ್ಮ ನಾಯಕರಾದ ರಾಹುಲ್​ ಗಾಂಧಿ ಅವರಿಗೆ ಜಡ್ಜ್​​ ಎಚ್​.ವರ್ಮಾ 2 ವರ್ಷಗಳ ಕಾಲ ಜೈಲು ಶಿಕ್ಷಯನ್ನು ನೀಡಿದ್ದಾರೆ.

ಮುಂದಿನ ದಿನಗಳಲ್ಲಿ ನಾವು ಅಧಿಕಾರಕ್ಕೆ ಬಂದ ಮೇಲೆ ನಿಮ್ಮ ನಾಲಿಗೆಯನ್ನು ಕತ್ತರಿಸಿ ಹಾಕುತ್ತೇವೆ ಎಂದು ಮಾತನಾಡುವ ವೇಳೆ ಹೇಳಿಕೆಯನ್ನು ನೀಡಿದ್ದ. ಇದರ ಬೆನ್ನಲ್ಲೇ ಕಾಂಗ್ರೆಸ್​ ಮುಖಂಡನ ಈ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಪಕ್ಷ ಹೇಗೆ ಡ್ಯಾಮೇಜ್​​ ಕಂಟ್ರೋಲ್​ ಮಾಡಲಿದೆ ಎಂದು ಕಾದು ನೋಡಬೇಕಿದೆ.

ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆದ ಬೆನ್ನಲ್ಲೇ ಕಾಂಗ್ರೆಸ್​ ಮುಖಂಡ ಮಣಿಕಂಠನ್​ ವಿರುದ್ದ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net