PSI ಪರೀಕ್ಷೆ ಮುಂದೂಡಿಕೆ ವಿಚಾರ; ಕೆಇಎ, ಇಲಾಖೆಯ ಅಧಿಕಾರಿಗಳ ಜತೆ ಚರ್ಚಿಸಿ ಕ್ರಮ: ಗೃಹ ಸಚಿವ ಡಾ. ಜಿ.ಪರಮೇಶ್ವರ್​

ಬೆಂಗಳೂರು, ಸೆ.10: ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ‌ ನಿರ್ಧಾರ ಕೈಗೊಳ್ಳುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್​ ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಅಣ್ಣಾವ್ರು ಸಿನಿಮಾದಲ್ಲಿ ದರ್ಶನ್​ಗೆ ನಾಯಕಿಯಾಗಿದ್ದ ಕನಿಹಾಗೆ ಏನಾಯ್ತು? ಫೋಟೋ ನೋಡಿ ಫ್ಯಾನ್ಸ್​ ಶಾಕ್​!​

ಸದಾಶಿವನಗರದ ಸಚಿವರ ಗೃಹ ಕಚೇರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಶಾಸಕ ಧೀರಜ್ ಮುನಿರಾಜ್ ನೇತೃತ್ವದ ನಿಯೋಗದಿಂದ‌ ಮನವಿ ಪತ್ರ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. “402 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯ ಹೊಣೆಯನ್ನು ಕೆಇಎ ಅವರಿಗೆ ವಹಿಸಲಾಗಿದೆ. ಸೆ.22ರಂದು ಪರೀಕ್ಷೆ ನಡೆಸಲು ನಿಗಧಿ ಮಾಡಿದ್ದಾರೆ. ಪಿಎಸ್‌ಐ ಪರೀಕ್ಷೆ ಬರೆಯಬೇಕಾದ ನೂರಕ್ಕು ಹೆಚ್ಚು ಆಕಾಂಕ್ಷಿಗಳು, ಯುಪಿಎಸ್‌ಸಿ ಮುಖ್ಯಪರೀಕ್ಷೆಯನ್ನು ಬರೆಯುತ್ತಿದ್ದಾರೆ. ಹೀಗಾಗಿ ಪರೀಕ್ಷಾ ದಿನ ಮುಂದೂಡುವಂತೆ ಮನವಿ ಸಲ್ಲಿಸಿದ್ದಾರೆ” ಎಂದರು.

“ಪರೀಕ್ಷೆ‌ ಮುಂದೂಡುವ ಕುರಿತ ಸಾಧಕ-ಬಾಧಕಗಳನ್ನು ಇಲಾಖೆಯ ಅಧಿಕಾರಿಗಳು ಹಾಗೂ ಕೆಇಎ ಅವರೊಂದಿಗೆ ಮತ್ತೊಮ್ಮೆ ಚರ್ಚಿಸಿ, ಕ್ರಮ ಕೈಗೊಳ್ಳಲಾಗುವುದು. ನಮಗೆ ಯುಪಿಎಸ್‌ಸಿ ಮುಖ್ಯವಲ್ಲ. ಇಲಾಖೆಯಲ್ಲಿ ಸಾವಿರ ಪಿಎಸ್ಐ ಹುದ್ದೆಗಳು ಖಾಲಿ ಇವೆ. ಈ ಹಿನ್ನೆಲೆಯಲ್ಲಿ ನಿಯಮ 32 ಅಡಿ ಎಎಸ್‌ಐಗಳಿಗೆ ಪಿಎಸ್ಐ ಹುದ್ದೆಗೆ ಬಡ್ತಿ ನೀಡಲಾಗಿದೆ. ಬೀದಿಯಲ್ಲಿ ನಿಂತು ಕರ್ತವ್ಯ ನಿರ್ವಹಿಸಬೇಕಾದ ಪಿಎಸ್ಐ ಇಲ್ಲವಾದರೆ, ಇಲಾಖೆ ಮುನ್ನಡೆಸುವುದು‌ ಹೇಗೆ” ಎಂದು ಪ್ರಶ್ನಿಸಿದರು.

ಇದನ್ನೂ ಓದಿ: 6 ಸಾವಿರ ಪರಿಸರ ಸ್ನೇಹಿ ಗಣೇಶ ವಿಗ್ರಹ ವಿತರಣೆ

“ಬಿಜೆಪಿ ಆಡಳಿತದ ಅವಧಿಯಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮವಾದ ಬಳಿಕ ನೇಮಕಾತಿ ನಡೆದಿಲ್ಲ. ಎಲ್ಲ ಗೊಂದಲದ ನಡುವೆಯೂ ಕೋರ್ಟ್‌ನಿಂದ ಅನುಮತಿ ಪಡೆದು ಮರುಪರೀಕ್ಷೆ ನಡೆಸಲಾಗಿದೆ‌. ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವ ಹಂತದಲ್ಲಿದೆ. ಈ ನಡುವೆಯೇ ಮತ್ತೆ ಕೆಲವರು ಕೋರ್ಟ್‌ಗೆ ಹೋಗಿದ್ದು, ಅಂತಿಮ‌ಪಟ್ಟಿ ಪ್ರಕಟಿಸಲು ವಿಳಂಬವಾಗುತ್ತಿದೆ” ಎಂದು ತಿಳಿಸಿದರು.

“ಕಳೆದ ನಾಲ್ಕು ವರ್ಷಗಳಿಂದ ಪಿಎಸ್ಐ ನೇಮಕಾತಿ ನಡೆದಿಲ್ಲ. ಸಿಂಧುತ್ವ, ದಾಖಲಾತಿ ಪರಿಶೀಲನೆ, ತರಬೇತಿ ಪಡೆದು ಇಲಾಖೆಗೆ ಸೇರಲು‌ಒಂದು ವರ್ಷ ಬೇಕಾಗುತ್ತದೆ. ಎರಡು ವರ್ಷ ಪ್ರೊಬೆಷನರಿ ಅವಧಿಯಲ್ಲಿ ಕಾರ್ಯನಿರ್ವಹಿಸುತ್ತಾರೆ. ಈ ಪರಿಸ್ಥಿತಿಯ ಹಿನ್ನೆಲೆಯಲ್ಲಿ, 402 ಪಿಎಸ್‌ಐ ಹುದ್ದೆಗಳಿಗೆ ಆದಾಷ್ಟು ಬೇಗ ಪರೀಕ್ಷೆ ನಡೆಸಲು ಮುಂದಾಗಿದ್ದೇವೆ. ಇದಾದ ನಂತರ 600 ಪಿಎಸ್ಐ ಹುದ್ದೆಗಳಿಗು ನೇಮಕಾತಿಗು ಸಿದ್ಧತೆ ಮಾಡಿಕೊಳ್ಳಬೇಕಿದೆ” ಎಂದು ಹೇಳಿದರು‌.

“ಕೆಲ ಆಕಾಂಕ್ಷಿಗಳು ಮನವಿ ಸಲ್ಲಿಸಿದ್ದು, ಕೆಇಎ ಮತ್ತು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಈಗ ಪರೀಕ್ಷೆ ಮುಂದೂಡಿದರೆ, ಮುಂದಿನ ಆರು ತಿಂಗಳವರೆಗೆ ಪರೀಕ್ಷೆ ನಡೆಸಲು ದಿನ ಖಾಲಿ ಇಲ್ಲ ಎಂದು ಕೆಇಎ ಅವರು ತಿಳಿಸಿದ್ದಾರೆ. ಪಿಎಸ್ಐ ಪರೀಕ್ಷೆ ಮುಂದೂಡುವಂತೆ ತಿಳಿಸಿದರೆ‌ ಮುಂದೂಡುತ್ತಾರೆ. ಆದರೆ, ಪರೀಕ್ಷೆ ನಡೆಸಲು 6 ತಿಂಗಳು ಬೇಕಾಗುತ್ತದೆ” ಎಂದು ತಿಳಿಸಿದರು.

ಇದನ್ನೂ ಓದಿ: ಭಾರತದ ಸಂಸ್ಕೃತಿ ಉಳಿವಿಗೆ ಶ್ರಮಿಸಲಿ

“ಬಿಜೆಪಿ ಆಡಳಿತದ ಅವಧಿಯಲ್ಲಿ ನಡೆದ ಎಲ್ಲ ಹಗರಣಗಳನ್ನು ಪರಿಶೀಲಿಸುತ್ತಿದ್ದೇವೆ. ಸರ್ಕಾರಕ್ಕೆ ಯಾರ ಮೇಲೂ ಸಾಫ್ಟ್‌ಕಾರ್ನರ್ ಇಲ್ಲ‌. ದ್ವೇಷದ ರಾಜಕಾರಣ ಮಾಡಬಾರದು ಎಂಬುದು ನಮ್ಮ ಉದ್ದೇಶ. ಬಿಜೆಪಿಯವರು ದ್ವೇಷದ ರಾಜಕಾರಣ ಮುಂದುವರಿಸಿದರೆ, ನಾವು ಅದನ್ನೇ ಮಾಡಬೇಕಾಗುತ್ತದೆ” ಎಂದು ಹೇಳಿದರು.

26 ವರ್ಷ ಸೇವೆ, 10 ವರ್ಷದಿಂದ ಅದೇ ಸಂಬಳ! 1 ರೂ. ಹೆಚ್ಚಾಗಲಿಲ್ಲ: ಈ ಸರ್ಕಾರದ ವಿರುದ್ಧ ವೈದ್ಯ ಕಿಡಿ

ಆ ಪ್ರೀತಿಯನ್ನು ಮರೆಯಲು ಸಾಧ್ಯವೇ ಇಲ್ಲ! ಈಗಲೂ ಕಣ್ಣಿನಲ್ಲಿ ಕಟ್ಟಿದಂತಿದೆ: ‘ಕಿಂಗ್’ ಕೊಹ್ಲಿ ಮನದಾಳ

Share This Article

ದೀಪಾವಳಿಗೆ ಮನೆ ಸ್ವಚ್ಛ ಮಾಡ್ತಾ ಇದ್ದೀರಾ? ಮನೆಯಲ್ಲಿ cockroach ಇದ್ರೆ ಹೀಗೆ ಮಾಡಿ…

ಬೆಂಗಳೂರು: ಅನೇಕ ಜನರು ತಮ್ಮ ಮನೆಯಲ್ಲಿ ಜಿರಳೆಗಳ ( cockroach )  ಸಮಸ್ಯೆಯನ್ನು ಎದುರಿಸುತ್ತಾರೆ. ಅವುಗಳನ್ನು…

Crab Sukka : ಭಾನುವಾರದ ಬಾಡೂಟಕ್ಕೆ ಮಾಡಿ ರುಚಿಯಾದ ಏಡಿ ಸುಕ್ಕ..

ಬೆಂಗಳೂರು: ವಾರದ ಕೊನೆಯಲ್ಲಿ ಮಧ್ಯಾಹ್ನದ ಸಮಯಕ್ಕೆ ರುಚಿಯಾದ ಅಡುಗೆ ಏನಾದರು ಮಾಡುವ ಪ್ಲಾನ್ (Plan)​ ಹಾಕಿಕೊಂಡಿದ್ದೀರಾ?ಆದಿತ್ಯವಾರದಂದು…

ಹಾವು ಕಚ್ಚಿದಾಗ ಮಾಡುವ ಈ ಒಂದು ತಪ್ಪಿನಿಂದ ಪ್ರಾಣ ಹೋಗುತ್ತೆ ಎಚ್ಚರ! ಈ ರೀತಿ ಮಾಡೋದನ್ನು ತಪ್ಪಿಸಿ | Snakes

ಕೊಲ್ಲಂ: ಹಾವುಗಳು ( Snakes ) ಕಚ್ಚಿದ ಸಂದರ್ಭದಲ್ಲಿ ಯಾವ ಹಾವು ಕಚ್ಚಿತ್ತು ಎಂಬುದನ್ನು ತಿಳಿದುಕೊಳ್ಳಲು…