More

    ರಾಜ್ಯದ ವಿವಿಧೆಡೆ ಆಲಿಕಲ್ಲು ಮಳೆ, ಭತ್ತದ ಬೆಳೆ ನಷ್ಟದ ಮಾಹಿತಿ ಪಡೆದು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಭರವಸೆ

    ಬೆಂಗಳೂರು: ಆಲಿಕಲ್ಲು ಮಳೆ ಹಾಗೂ ಬಿರುಗಾಳಿಯಿಂದ ಆಗಿರುವ ಭತ್ತದ ಬೆಳೆ ನಷ್ಟದ ಬಗ್ಗೆ ಆಯಾ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಳ್ಳುವೆ. ನಂತರ ಸಂಬಂಧಿಸಿದ ಇಲಾಖೆಗಳ ಉನ್ನತಮಟ್ಟದ ಅಧಿಕಾರಿಗಳ ಸಭೆ ನಡೆಸಿ, ನಿಯಮಾವಳಿ ಪ್ರಕಾರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭರವಸೆ ನೀಡಿದ್ದಾರೆ.

    ಕಾವೇರಿ ನಿವಾಸದಲ್ಲಿ ಕೃಷಿ ಸಚಿವ ಬಿ.ಸಿ.ಪಾಟೀಲ್ ನೇತೃತ್ವದಲ್ಲಿ 3 ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಮುಖಂಡರ ನಿಯೋಗ ತಮ್ಮ ಭೇಟಿಯಾಗಿ ಸಲ್ಲಿಸಿದ ಅಹವಾಲು ಸ್ವೀಕರಿಸಿ ಅವರು ಮಾತನಾಡಿದರು. ಅಲ್ಲದೆ, ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ಕೃಷಿ ಸಚಿವರು ಬೆಳೆ ಹಾನಿ ತೀವ್ರತೆ ಕಣ್ಣಾರೆ ಕಂಡಿdfdAre. ಅಚ್ಚುಕಟ್ಟು ಪ್ರದೇಶದ 2ನೇ ಬೆಳೆಗೆ ನೀರು ಪೂರೈಕೆ ವ್ಯವಸ್ಥೆ ಮಾಡಿದಿರಿ. ಆದರೆ, ಅಕಾಲಿಕ ಆಲಿಕಲ್ಲು ಮಳೆಯಿಂದ ರೈತರು ಅಪಾರ ನಷ್ಟ ಅನುಭವಿಸಿದ್ದಾರೆ‌ ಎಂದು ನಿಯೋಗ ಸಿಎಂ ಮುಂದೆ ನಿವೇದಿಸಿಕೊಂಡಿತು.

    ಈ ಮನವಿಗೆ ಸ್ಪಂದಿಸಿದ ಸಿಎಂ, ಕೂಡಲೇ ಆಯಾ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಳ್ಳಬೇಕು. ಜತೆಗೆ ಇಲಾಖೆ ಉನ್ನತ ಅಧಿಕಾರಿಗಳ ಸಭೆ ಏರ್ಪಡಿಸುವಂತೆ ಕಾರ್ಯದರ್ಶಿಗೆ ಸಲಹೆ ನೀಡಿದ್ದಾರೆ.

    ಈ ನಿಯೋಗದಲ್ಲಿ ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೆಸುಗೂರು, ಕೊಪ್ಪಳ ಜಿ.ಪಂ. ಅಧ್ಯಕ್ಷ ವಿಶ್ವನಾಥ ಪಾಟೀಲ್, ಮಾಜಿ ಶಾಸಕ ಜಿ.ವೀರಪ್ಪ ಕೆಸರಹಟ್ಟಿ ಸೇರಿ ರಾಯಚೂರು, ಕೊಪ್ಪಳ ಹಾಗೂ ಯಾದಗಿರಿ ಜಿಲ್ಲೆಗಳ ಮುಖಂಡರು ಇದ್ದರು.

    ಚೀನಾದಲ್ಲಿ 2ನೇ ಸುತ್ತಿನ ಕರೊನಾ ಸೋಂಕು, 6 ವಾರಗಳ ಗರಿಷ್ಠಕ್ಕೆ ಏರಿಕೆಯಾದ ಸೋಂಕಿತರ ಸಂಖ್ಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts