ನನ್ನ ಮೇಲಿನ ಆರೋಪಗಳು ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: ಬ್ರಿಜ್​ ಭೂಷಣ್​ ಸಿಂಗ್​

Brij Bhushan
Published on

ಲಖನೌ: ತಮ್ಮ ಮೇಲಿನ ಆರೋಪಗಳು ಸಾಬೀತಾದರೆ ನೇಣು ಹಾಕಿಕೊಳ್ಳುವುದಾಗಿ ಭಾರತೀಯ ಕುಸ್ತಿ ಫೆಡರೇಶನ್​(WFI) ಮಾಜಿ ಅಧ್ಯಕ್ಷ , ಬಿಜೆಪಿ ಸಂಸದ ಬ್ರಿಜ್​ ಭೂಷಣ್​ ಶರಣ್​ ಸಿಂಗ್​ ಹೇಳಿದ್ದಾರೆ.

ಕಾರ್ಯಕ್ರಮ ಒಂದರಲ್ಲಿ ಮಾತನಾಡುವ ವೇಳೆ ಬ್ರಿಜ್​ಭೂಷಣ್ ತಮ್ಮ ಮೇಲಿನ ಆರೋಪಗಳನ್ನು ಅಲ್ಲಗೆಳೆದಿದ್ದು ನಿಮ್ಮ ಬಳಿ ಯಾವುದಾದರೂ ಸಾಕ್ಷಿಗಳಿದ್ದರೆ ನ್ಯಾಯಾಲಯಕ್ಕೆ ಒಪ್ಪಿಸಿ ಶಿಕ್ಷೆ ಎದುರಿಸಲು ನಾನು ಸಿದ್ದನಿದ್ದೇನೆ ಎಂದಿದ್ದಾರೆ.

ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತಿಮ ವರದಿ ಸಲ್ಲಿಸಿರುವ ಕುರಿತು ಕೆಲ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರ ಮಾಡಲಾಗುತ್ತಿದೆ ಇದು ಸತ್ಯಕ್ಕೆ ದೂರವಾದ ಮಾತು.

ಪ್ರಕರಣ ಇನ್ನು ವಿಚಾರಣೆ ಹಂತದಲ್ಲಿರುವ ಕಾರಣ ತನಿಖೆ ಪೂರ್ಣಗೊಂಡ ಬಳಿಕ ನ್ಯಾಯಾಲಯಕ್ಕೆ ವರದಿ ಸಲ್ಲಿಸಲಾಗುವುದು. ನೀವುಗಳು ಗೆದ್ದಿರುವ ಪದಕಗಳನ್ನು ಗಂಗಾ ನದಿಯಲ್ಲಿ ವಿಸರ್ಜಿಸುವುದರಿಂದ ನನ್ನನ್ನು ಗಲ್ಲಿಗೇರಿಸುವುದಿಲ್ಲ ಎಂದು ತಮ್ಮ ಕುಸ್ತಿಪಟುಗಳಿಗೆ ಬ್ರಿಜ್​ಭೂಷಣ್​ ಸಿಂಗ್​ ತಿರುಗೇಟು ನೀಡಿದ್ದಾರೆ.

ಮಂಗಳವಾರ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್​, ಬಜರಂಗ್​ ಪೂನಿಯಾ, ನಿವೇಶ್​ ಪೋಗಟ್​ ಚಾಂಪಿಯನ್​ಶಿಪ್​ಗಳಲ್ಲಿ ಗೆದ್ದ ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ವಿಸರ್ಜಿಸುವುದಾಗಿ ಹೇಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net