More

    ಚೀನಾದ ತಾಳಕ್ಕೆ ಕುಣಿಯುತ್ತಿದ್ದ ನೇಪಾಳ ಪಿಎಂ ಕೆ.ಪಿ. ಶರ್ಮ ಓಲಿ ರಾಜೀನಾಮೆ?

    ನವದೆಹಲಿ: ಅಧಿಕಾರ ಉಳಿಸಿಕೊಳ್ಳಲು ಸಹಕರಿಸಿದರು ಎಂಬ ಕಾರಣಕ್ಕೆ ಚೀನಾದ ನಾಯಕರ ತಾಳಕ್ಕೆ ಹೆಜ್ಜೆ ಹಾಕುತ್ತಿದ್ದ ನೇಪಾಳದ ಪ್ರಧಾನಿ ಕೆ.ಪಿ. ಶರ್ಮ ಓಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಾಧ್ಯತೆ ಹೆಚ್ಚಾಗಿದೆ. ನೇಪಾಳ ಕಮ್ಯುನಿಸ್ಟ್​ ಪಾರ್ಟಿಯಲ್ಲೇ ಇವರ ರಾಜೀನಾಮೆಗೆ ಒತ್ತಡ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಗುರುವಾರ ರಾಷ್ಟ್ರಪತಿ ಬಿದ್ಯಾ ದೇವಿ ಭಂಡಾರಿ ಅವರನ್ನು ಭೇಟಿಯಾಗಿದ್ದು ಕುತೂಹಲಕ್ಕೆ ಕಾರಣವಾಗಿದೆ.

    ಇದರ ಜತೆಗೆ, ರಾಷ್ಟ್ರಪತಿ ಅವರನ್ನು ಭೇಟಿ ಮಾಡಿ ಬಂದ ನಂತರದಲ್ಲಿ ಪ್ರಧಾನಿ ಕೆ.ಪಿ. ಓಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾರೆ ಎಂದು ಸರ್ಕಾರದ ಪ್ರಕಟಣೆ ತಿಳಿಸಿದೆ. ಇದು ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

    ಇದನ್ನೂ ಓದಿ: ಈ ಸುಂದರಿಯ ತಾಳಕ್ಕೆ ಕುಣಿದ ನಾಯಕರ ಕತೆ ಮುಂದೇನಾಯ್ತು?

    ಅವರು ಎಷ್ಟು ಹೊತ್ತಿಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡುತ್ತಾರೆ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಆದರೆ, ಈ ವಿಷಯವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿದ ಬಳಿಕ ಸಮಯ ನಿಗದಿಯಾಗುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

    ಇದಕ್ಕೂ ಮುನ್ನ ಪಕ್ಷದಲ್ಲೇ ಇರುವ ತಮ್ಮ ರಾಜಕೀಯ ವಿರೋಧಿಗಳು ತಮ್ಮನ್ನು ಪದಚ್ಯುತಗೊಳಿಸಲು ಹುನ್ನಾರ ನಡೆಸಿದ್ದಾರೆ. ಇದಕ್ಕೆ ಭಾರತದ ಚಿತಾವಣೆ ಇದೆ ಎಂದು ಕೆ.ಪಿ. ಓಲಿ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಭಾರತದ ಚಿತಾವಣೆ ಇದೆ ಎಂಬುದನ್ನು ಸಾಕ್ಷ್ಯ ಒದಗಿಸಿ, ಇಲ್ಲವೇ ರಾಜೀನಾಮೆ ಕೊಡಿ ಎಂದು ಪಕ್ಷದ ಮುಖಂಡರು ಆಗ್ರಹಿಸಿದ್ದರು.

    ಕೊಳೆತ ಹೆಣ ತೆಗೆಯಲು ಮಕ್ಕಳ ಬಳಕೆ- ಕ್ಯಾಮೆರಾದಲ್ಲಿ ಸೆರೆಯಾಯ್ತು ಆಘಾತಕಾರಿ ದೃಶ್ಯ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts