ಕುಮಟಾದಲ್ಲಿ ಕಾಂಗ್ರೆಸ್​ ಬಂಡಾಯ ಶಮನ? ನಾಮಪತ್ರ ಹಿಂಪಡೆಯುತ್ತಾರಾ ಮಾಜಿ ಶಾಸಕಿ..?

sharada shetty
Published on

ಉತ್ತರಕನ್ನಡ: ಕುಮಟಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಬಂಡಾಯ ವಿಚಾರ ಈಗ ಮುನ್ನೆಲೆಗೆ ಬಂದಿದ್ದು ಮಾಜಿ ಶಾಸಕಿ ಶಾರದಾ ಶೆಟ್ಟಿ ನಾಮಪತ್ರ ಹಿಂಪಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಉತ್ತರಕನ್ನಡ ಜಿಲ್ಲೆಯ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿದಕ್ಕೆ ಬಂಡಾಯವೆದ್ದು ಶಾರದಾ ಶೆಟ್ಟಿ ನಾಮಪತ್ರ ಸಲ್ಲಿಸಿದ್ದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹಾಗೂ ಜಿಲ್ಲಾ ಕಾಂಗ್ರೆಸ್ ಮುಖಂಡರು ಶಾರದಾ ಶೆಟ್ಟಿ ಮನವೊಲಿಕೆಗೆ ಯತ್ನಿಸಿದ್ದು ಇದೀಗ ಕುಮಟಾ ಕಾಂಗ್ರೆಸ್‌ನಲ್ಲಿ ಬಂಡಾಯ ಶಮನವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ನಾಮಪತ್ರ ಹಿಂಪಡೆಯಲು ಇಂದು ಕೊನೆಯ ದಿನವಾಗಿದ್ದು ತಮ್ಮ ನಿಲುವಿನ ಬಗ್ಗೆ ಸ್ಪಷ್ಟಪಡಿಸುವ ಸಾಧ್ಯತೆ ಇದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net