ಬೆಂಗಳೂರು: ಕರೊನಾ ಸೋಂಕು ಹರಡುವುದನ್ನು ತಪ್ಪಿಸಲು ದೇಶವ್ಯಾಪಿ ಮಾಡಲಾದ ಲಾಕ್ಡೌನ್ನಿಂದಾಗಿ ನಾಲ್ಕೂವರೆ ತಿಂಗಳಿನಿಂದ ಸ್ಥಗಿತಗೊಂಡಿರುವ ಮೆಟ್ರೋ ರೈಲು ಸೇವೆ ಆ. 16ಕ್ಕೆ ಆರಂಭವಾಗುವ ಸಾಧ್ಯತೆಗಳಿವೆ.
ಹಂತಹಂತವಾಗಿ ಲಾಕ್ಡೌನ್ ಸಡಿಲಿಕೆ ಮಾಡಿ ವಿಮಾನ, ರೈಲು, ಬಸ್ ಸೇರಿ ಇನ್ನಿತರ ಸಾರಿಗೆ ವ್ಯವಸ್ಥೆ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಆದರೆ, ಮೆಟ್ರೋ ರೈಲು ಸೇವೆ ಆರಂಭಕ್ಕೆ ಅನುಮತಿ ಸಿಗಬೇಕಿದೆ.
ಇದನ್ನೂ ಓದಿ: ‘ನೀವು ಬುಕ್ ಮಾಡಿದ ಬಟ್ಟೆ ಸ್ಟಾಕ್ ಇಲ್ಲ, ಓಟಿಪಿ ಹೇಳಿ ಅಕೌಂಟ್ ನೋಡ್ಕೊಳ್ಳಿ..’ಎಂದು ಯುವತಿಯ ವಂಚಿಸಿದ್ರು!
15ರಂದು ನಿರ್ಧಾರ: ಲಾಕ್ಡೌನ್ನಲ್ಲಿ ಹೇರಲಾಗಿದ್ದ ನಿರ್ಬಂಧಗಳನ್ನು ಹಂತಹಂತವಾಗಿ ತೆಗೆಯಲಾಗುತ್ತಿದೆ. ಮೆಟ್ರೋ ರೈಲು, ಚಿತ್ರಮಂದಿರಗಳು ಸೇರಿ ಇನ್ನಿತರ ಉದ್ಯಮಗಳ ಕಾರ್ಯಚಟುವಟಿಕೆಗೆ ಅನುಮತಿ ನೀಡಿಲ್ಲ. 15ರಂದು ಲಾಕ್ಡೌನ್ ತೆರವಿನ ಕುರಿತ ಮಾರ್ಗಸೂಚಿ ಬಿಡುಗಡೆ ಸಾಧ್ಯತೆಗಳಿವೆ.
ಇದನ್ನೂ ಓದಿ: ಮನೆಗೆ ನುಗ್ಗಿ ಮಹಿಳೆಯನ್ನು ಕಟ್ಟಿ ಹಾಕಿ ನಗ, ನಗದು ಹಣ ದೋಚಿದವರ ಸೆರೆ
ಮೆಟ್ರೋ ರೈಲು ಸೇವೆ ಆರಂಭಿಸಲು ಅವಕಾಶ ಸಿಗಬಹುದು ಎಂಬ ನಿರೀಕ್ಷೆ ಇರುವುದರಿಂದ ಬಿಎಂಆರ್ಸಿಎಲ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕೆಲಸಕ್ಕೆ ಬರಲು ತಯಾರಿರುವಂತೆ ಸಿಬ್ಬಂದಿಗೆ ಈಗಾಗಲೆ ಸೂಚಿಸಿದೆ. ಪ್ರಯಾಣಿಕರು ಅನುಸರಿಸಬೇಕಾದ ನಿಯಮಗಳ ಪಟ್ಟಿಯನ್ನೂ ಸಿದ್ಧಪಡಿಸಿದೆ.