More

    ರಾಷ್ಟ್ರೀಯ ಶಿಕ್ಷಣ ನೀತಿಗೆ ಕೆರಳಿದ ತಮಿಳುನಾಡು; ಬಿಜೆಪಿ ಅಂಗಪಕ್ಷ ವಿರೋಧಿಸುತ್ತಿರುವುದು ಏನನ್ನು?

    ಚೆನ್ನೈ: ರಾಷ್ಟ್ರೀಯ ಶಿಕ್ಷಣ ನೀತಿಗೆ ಬಿಜೆಪಿ ಅಂಗಪಕ್ಷದಿಂದಲೇ ವಿರೋಧ ವ್ಯಕ್ತವಾಗಿದೆ. ಇದರಲ್ಲಿ ಉಲ್ಲೇಖಿಸಲಾಗಿರುವ ತ್ರಿಭಾಷಾ ಸೂತ್ರ ನೋವುಂಟು ಮಾಡುವಂಥದ್ದು ಹಾಗೂ ಬೇಸರದ ಸಂಗತಿ ಎಂದು ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿಸ್ವಾಮಿ ಹೇಳಿದ್ದಾರೆ.

    ಪ್ರಧಾನಿ ಇದನ್ನು ಮರು ಪರಿಶೀಲನೆ ಮಾಡಬೇಕು ಹಾಗೂ ಭಾಷಾ ವಿಷಯದಲ್ಲಿ ರಾಜ್ಯಗಳು ತಮ್ಮದೇ ಆದ ನೀತಿಯನ್ನು ರೂಪಿಸಿಕೊಳ್ಳಲು ಅವಕಾಶ ನೀಡಬೇಕೆಂದು ಅವರು ಒತ್ತಾಯಿಸಿದ್ದಾರೆ. ಕೇಂದ್ರದ ತ್ರಿಭಾಷಾ ಸೂತ್ರವನ್ನು ಅಳವಡಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿರುವ ಸಿಎಂ ತಮಿಳುನಾಡಿನಲ್ಲಿ ದ್ವಿಭಾಷಾ ನೀತಿಯನ್ನೇ ಮುಂದುವರಿಸುವುದಾಗಿ ಹೇಳಿದ್ದಾರೆ.

    ಇದನ್ನೂ ಓದಿ; ರಾಷ್ಟ್ರೀಯ ಶಿಕ್ಷಣ ನೀತಿ ಕೇಂದ್ರದೊಂದಿಗೆ ರಾಜ್ಯದಲ್ಲೂ ಜಾರಿಗೆ; ಸಚಿವ ಅಶ್ವತ್ಥನಾರಾಯಣ ಘೋಷಣೆ

    feರಾಜ್ಯದಲ್ಲಿ ದಶಕಗಳಿಂದಲೂ ದ್ವಿಭಾಷಾ ನೀತಿ ಅನುಸರಿಸಲಾಗುತ್ತಿದೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ತಮಿಳು ಅಥವಾ ಇಂಗ್ಲಿಷ್​ ಸೂತ್ರ ಮುಂದುವರಿಯಲಿದೆ ಎಂದು ಸಿಎಂ ಹೇಳಿದ್ದಾರೆ.

    ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಹಿಂದಿ ಅಥವಾ ಸಂಸ್ಕೃತವನ್ನು ಹೇರಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ತಮಿಳುನಾಡಿನಲ್ಲಿ ಪ್ರತಿಭಟನೆಗಳು ಆರಂಭವಾಗಿರುವ ಬೆನ್ನಲ್ಲೇ ಸಿಎಂ ಈ ಸ್ಪಷ್ಟನೆ ನೀಡಿದ್ದಾರೆ.

    ಇದನ್ನೂ ಓದಿ; ಎಂಫಿಲ್​ ರದ್ದು, ಪದವಿ ಶಿಕ್ಷಣ ಸ್ವರೂಪದಲ್ಲಿ ಬದಲಾವಣೆ; ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಏನೇನಿದೆ? 

    ಈ ನಡುವೆ ಹಿಂದಿ ಹೇರಿಕೆ ವಿರೋಧಿಸಿ ಸಮಾನ ಮನಸ್ಕ ರಾಜಕೀಯ ಪಕ್ಷಗಳು ಹಾಗೂ ವಿವಿಧ ರಾಜ್ಯಗಳ ಸಿಎಂಗಳ ಜತೆಗೆ ಸೇರಿ ಹೋರಾಟ ನಡೆಸುವುದಾಗಿ ಡಿಎಂಕೆ ನಾಯಕ ಎಂ.ಕೆ. ಸ್ಟಾಲಿನ್​ ಹೇಳಿದ್ದಾರೆ.

    15ನೇ ವರ್ಷಕ್ಕೆ ಮದುವೆ, ಎರಡೂವರೆ ವರ್ಷದ ಮಗುವಿನ ತಾಯಿಯೀಗ ಪಿಯು ಪರೀಕ್ಷೆಯಲ್ಲಿ ಅಗ್ರ ಸಾಧಕಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts