

ಆಂಧ್ರಪ್ರದೇಶ: ಟಾಲಿವುಡ್ನ ರೆಬೆಲ್ ಸ್ಟಾರ್, ಡಾರ್ಲಿಂಗ್ ಪ್ರಭಾಸ್ ಮತ್ತು ನಿರ್ದೇಶಕ ಪ್ರಶಾಂತ್ ನೀಲ್ ಕಾಂಬಿನೇಷನ್ನಲ್ಲಿ ಮೂಡಿಬರಲು ಸಜ್ಜಾಗಿರುವ ಬಹುನಿರೀಕ್ಷಿತ 'ಸಲಾರ್- ಸೀಜ್ ಫೈರ್' ರಿಲೀಸ್ ದಿನಾಂಕದಲ್ಲಿ ಇದೀಗ ಸಾಕಷ್ಟು ಗೊಂದಲ ಎದುರಾಗಿದ್ದು, ಈ ಕುರಿತು ಇದೀಗ ಹೊಸ ಮಾಹಿತಿಯೊಂದು ಹೊರಬಿದ್ದಿದೆ.
ಈ ಹಿಂದೆ ಹೊಂಬಾಳೆ ಫಿಲಂಸ್ ತಿಳಿಸಿದಂತೆ ಚಿತ್ರವು ಇದೇ ಸೆಪ್ಟೆಂಬರ್ 28 ರಂದು ಜಾಗತಿಕವಾಗಿ ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಸಜ್ಜಾಗಿತ್ತು. ಆದ್ರೆ, ಚಿತ್ರದ ವಿಎಫ್ಎಕ್ಸ್ ಕೆಲಸಗಳಲ್ಲಿ ಒಂದಷ್ಟು ಬದಲಾವಣೆಯ ಅಗತ್ಯವಿದೆ ಎಂದು ನಿರ್ಧರಿಸಿದ ಪ್ರಶಾಂತ್, ರಿಲೀಸ್ ದಿನಾಂಕವನ್ನು ಮುಂದೂಡಿದ್ದರು.
ತದನಂತರ ಸಾಮಾಜಿಕ ಜಾಲತಾಣಗಳಲ್ಲಿ 'ಸಲಾರ್' 2024ಕ್ಕೆ ಬಿಡುಗಡೆಯಾಗಲಿದೆ ಎಂಬ ವದಂತಿಗಳು ವ್ಯಾಪಕವಾಗಿ ಹರಿದಾಡಿತು. ಪ್ರಭಾಸ್ ನಟನೆಯ ಈ ಸಿನಿಮಾವನ್ನು ಚಿತ್ರತಂಡ ಮುಂದಿನ ವರ್ಷಕ್ಕೆ ರಿಲೀಸ್ ಮಾಡಲಿದೆಯೇ ಎಂಬ ಗೊಂದಲಗಳು ಪ್ರಭಾಸ್ ಅಭಿಮಾನಿಗಳಲ್ಲಿ ಕಾಡುತ್ತಿತ್ತು. ಇದೀಗ ಈ ಕುರಿತು ಹೊಸ ಅಪ್ಡೇಟ್ವೊಂದು ರಿಲೀಸ್ ಡೇಟ್ ಬಗ್ಗೆಯಿರುವ ಗೊಂದಲಗಳನ್ನು ಮತ್ತಷ್ಟು ಹೆಚ್ಚಿಸಿದೆ.
ಪ್ರಶಾಂತ್ ನೀಲ್ ಪತ್ನಿ ಲಿಖಿತ ರೆಡ್ಡಿ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಮಾಡಿದ ಪೋಸ್ಟ್ವೊಂದು ಚಿತ್ರವು ಡಿಸೆಂಬರ್ 22, 2023 ರಂದು ಬಿಡುಗಡೆಗೊಳ್ಳಲಿದೆ ಎಂಬ ಸುಳಿವನ್ನು ನೀಡಿದೆ. ಇದರ ಬೆನ್ನಲ್ಲೇ ಮತ್ತೊಂದು ವರದಿ, 'ಸಲಾರ್' ಇದೇ ಸೆಪ್ಟೆಂಬರ್ 29 ರಂದು ರಿಲೀಸ್ ಆಗಲು ಸಜ್ಜಾಗಿದ್ದು, ಈ ಬಗ್ಗೆ ಅಧಿಕೃತ ಮಾಹಿತಿ ಪ್ರಕಟವಾಗಬೇಕಿದೆ ಎಂದು ತಿಳಿಸಿದೆ.
ಚಿತ್ರದಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದವರ ತಾರಾಗಣವಿದೆ. ಪ್ಯಾನ್ ಇಂಡಿಯಾ ಚಿತ್ರಕ್ಕೆ ರವಿ ಬಸ್ರೂರ್ ಸಂಗೀತವಿದೆ,(ಏಜೆನ್ಸೀಸ್).