More

    ಕರೊನಾ ಹೆಚ್ಚಾದರೆ ಶಾಲೆ-ಕಾಲೇಜು ಕ್ಲೋಸ್​? ಸ್ಪಷ್ಟನೆ ನೀಡಿದ ಸಿಎಂ ಯಡಿಯೂರಪ್ಪ

    ಬೆಂಗಳೂರು: ಕರ್ನಾಟಕದಲ್ಲಿ ಕರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತೆ ಶಾಲೆ ಕಾಲೇಜುಗಳನ್ನು ಮುಚ್ಚುತ್ತಾರೆಯೇ ಎನ್ನುವ ಪ್ರಶ್ನೆ ಅನೇಕರನ್ನು ಕಾಡಲಾರಂಭಿಸಿದೆ. ಈ ಬಗ್ಗೆ ಅನೇಕ ಸುದ್ದಿಗಳೂ ಹರಿದಾಡಿವೆ. ಮುಖ್ಯಮಂತ್ರಿ ಯಡಿಯೂರಪ್ಪನವರೇ ಈ ಕುರಿತಾಗಿ ಸ್ಪಷ್ಟನೆ ನೀಡಿದ್ದಾರೆ.

    ಮಕ್ಕಳು ಮನೆಯಲ್ಲಿ ಇದ್ದರೆ ಕುಣಿದು ಕುಪ್ಪಳಿಸುತ್ತಿರುತ್ತಾರೆ. ಶಾಲೆ ಕಾಲೇಜಿಗೆ ಹೋದರೆ ಶಿಸ್ತಿನಿಂದ ವರ್ತಿಸುತ್ತಾರೆ. ಹಾಗಾಗಿ ಶಾಲೆ ಕಾಲೇಜನ್ನು ಮುಚ್ಚುವುದಿಲ್ಲ ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಮದುವೆ ಕಾರ್ಯಕ್ರಮಗಳ ಬಗ್ಗೆ ಬಿಗಿಯಾದ ಕ್ರಮ ತೆಗೆದುಕೊಳ್ಳುತ್ತೇವೆ. ಯಾವುದೇ ಕಾರ್ಯಕ್ರಮಗಳಲ್ಲಿ 400, 500 ಜನ ಸೇರುವಂತಿಲ್ಲ. ಮಾಸ್ಕ್​ ಹಾಕದವರ ಮೇಲೆ ನಾಳೆಯಿಂದಲೇ ಕಠಿಣ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

    ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಫೆಬ್ರವರಿ ತಿಂಗಳಿನಲ್ಲಿ ಪಾಸಿಟಿವಿಟಿ ರೇಟ್​ 0.94% ಇದ್ದು ಮಾರ್ಚ್ ತಿಂಗಳಲ್ಲಿ 1.94% ಕ್ಕೆ ಹೆಚ್ಚಿದೆ. ರಾಜ್ಯಾದ್ಯಂತ ನಿಗದಿತ ಗುರಿಗಿಂತ ಹೆಚ್ಚು ಕರೊನಾ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಶೇ. 90 ಕ್ಕೂ ಹೆಚ್ಚು ಆರ್​ಟಿಪಿಸಿಆರ್ ಪರೀಕ್ಷೆಗಳನ್ನೇ ನಡೆಸಲಾಗುತ್ತಿದೆ. ನಗರದಲ್ಲಿ ಹೆಚ್ಚುವರಿ ವೈದ್ಯಕೀಯ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಕೋವಿಡ್ ಪರೀಕ್ಷೆ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಪ್ರತಿ ವಾರ್ಡಿನಲ್ಲಿ 2 ಮೊಬೈಲ್ ಮತ್ತು 1 ಸ್ಟಾಟಿಕ್ ತಂಡಗಳನ್ನು ನಿಯೋಜಿಸಲಾಗಿದೆ. ಬಿಬಿಎಂಪಿ ಎಂಟು ವಲಯಗಳಿಗೆ ಹಿರಿಯ ಅಧಿಕಾರಿಗಳನ್ನು ಈಗಾಗಲೇ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

    ಕೇರಳ ಮತ್ತು ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಆರ್​ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿ ಕಡ್ಡಾಯ ಮಾಡಲಾಗಿದೆ. ಪ್ರಯಾಣಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸಲು ಕೋರಿದೆ. ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

    ಕರ್ನಾಟಕದಲ್ಲಿ ಮತ್ತೆ ಲಾಕ್​ಡೌನ್​ ಆಗತ್ತಾ? ಸಿಎಂ ಯಡಿಯೂರಪ್ಪ ಸ್ಪಷ್ಟನೆ ಹೀಗಿದೆ ನೋಡಿ..

    ಪೊಲೀಸರಂತೆ ಸಮವಸ್ತ್ರ ಧರಿಸಿ ಫೀಲ್ಡಿಗಿಳಿಯಲಿದ್ದಾರೆ ಗಣಿ ಇಲಾಖೆ ಅಧಿಕಾರಿಗಳು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts