ಕ್ರಿಕೆಟ್ ಆಟಗಾರರ ಆಯ್ಕೆ ಧರ್ಮದ ಆಧಾರದಲ್ಲಿ ನಡೆಯಲಿದೆಯೇ: ಪ್ರಧಾನಿ ಮೋದಿ ಪ್ರಶ್ನೆ

modi
Published on

ಭೋಪಾಲ​: ಕ್ರೀಡೆಯಲ್ಲಿ ಅಲ್ಪಸಂಖ್ಯಾತರಿಗೆ ಆದ್ಯತೆ ನೀಡುವ ಕುರಿತು ಕಾಂಗ್ರೆಸ್ ಮಾತನಾಡಿದೆ. ಕ್ರಿಕೆಟ್ ತಂಡದ ಆಟಗಾರರ ಆಯ್ಕೆಯು ಧರ್ಮದ ಆಧಾರದಲ್ಲಿ ನಡೆಯಲಿದೆಯೇ ಎಂದು ಪ್ರಧಾನಿ ಮೋದಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಮಧ್ಯಪ್ರದೇಶದ ಧಾರ್ ನಲ್ಲಿ ಆಯೋಜಿಸಲಾಗಿದ್ದ ಚುನಾವಣಾ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಕಾಂಗ್ರೆಸ್ ಪಕ್ಷವು ಗುತ್ತಿಗೆಗಳಲ್ಲಿ ಅಲ್ಪಸಂಖ್ಯಾತರ ಪಾಲ್ಗೊಳ್ಳುವಿಕೆಯನ್ನು ಖಾತರಿಪಡಿಸಲಾಗುವುದು ಎಂದು ತನ್ನ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿದೆ. ಇದರರ್ಥ ವಿರೋಧ ಪಕ್ಷಗಳು ಗುತ್ತಿಗೆಗಳನ್ನು ಧರ್ಮದ ಆಧಾರದಲ್ಲಿ ನೀಡಲಿವೆ ಎಂದು ಅವರು ದೂರಿದರು.

ಕಾಂಗ್ರೆಸ್ ಪಕ್ಷವು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರಳಿ ತರದಿರಲು, ಅಯೋಧ್ಯೆಯಲ್ಲಿನ ರಾಮಮಂದಿರಕ್ಕೆ ಬೀಗ ಹಾಕದಿರಲು ಬಿಜೆಪಿ ನೇತೃತ್ವದ ಎನ್​ಡಿಎ ಮೈತ್ರಿಕೂಟಕ್ಕೆ 400 ಸ್ಥಾನಗಳು ಬೇಕಿದೆ ಎಂದು ಮೋದಿ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net