More

    ತುಳುವನ್ನು ರಾಜ್ಯಭಾಷೆ ಆಗಿಸಲು ಸೂಕ್ತ ಕ್ರಮ; ಸಿಎಂ ಜೊತೆ ಚರ್ಚಿಸುವುದಾಗಿ ಸಚಿವ ಲಿಂಬಾವಳಿ ಭರವಸೆ

    ಬೆಂಗಳೂರು: ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಘೋಷಿಸುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸಲಾಗುವುದು ಎಂದು ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ರವೀಂದ್ರ ಕಲಾಕ್ಷೇತ್ರದಲ್ಲಿ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಏರ್ಪಡಿಸಿದ್ದ ಗೌರವ ಪ್ರಶಸ್ತಿ ಪ್ರದಾನ ಮತ್ತು ಪುಸ್ತಕ ಬಹುಮಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

    ತುಳು ಭಾಷೆಯನ್ನು ರಾಜ್ಯ ಭಾಷೆ ಆಗಿಸಬೇಕೆಂಬುದು ಹಲವು ವರ್ಷಗಳ ಬೇಡಿಕೆಯಾಗಿದೆ. ಈ ಕುರಿತಂತೆ ಮುಖ್ಯಮಂತ್ರಿಗಳ ಜತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳುತ್ತೇನೆ. ಹಾಗೆಯೇ, ತುಳು, ಕೊಡುವ, ಬಂಜಾರ ಭಾಷೆಯನ್ನು 8ನೇ ಪರಿಚ್ಛೇದಕ್ಕೆ ಸೇರಿಸಲು ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆ ಬಗ್ಗೆ ಶೀಘ್ರದಲ್ಲಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲು ಸಂಬಂಧಪಟ್ಟ ಕೇಂದ್ರ ಸಚಿವರ ಬಳಿ ನಿಯೋಗ ಕರೆದುಕೊಂಡು ಹೋಗಲಾಗುವುದು ಎಂದರು.

    ಕಾರ್ಯಕ್ರಮದಲ್ಲಿ 2018, 2019 ಹಾಗೂ 2020ನೇ ಸಾಲಿನ ಪ್ರಶಸ್ತಿಗಳನ್ನು ವಿತರಿಸಲಾಯಿತು. ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಸಚಿವ ಎಸ್. ಅಂಗಾರ, ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ಟ ಕಲ್ಲಡ್ಕ, ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಉಪಸ್ಥಿತರಿದ್ದರು.

    ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

    ‘ದಯವಿಟ್ಟು ಆಕೆಯನ್ನು ಸಂತ್ರಸ್ತೆ ಎನ್ನಬೇಡಿ..’; ಮಾಧ್ಯಮದವರಿಗೆ ಬಾಲಚಂದ್ರ ಜಾರಕಿಹೊಳಿ ಮನವಿ

    ಮಹಿಳೆಯರಿಗೇ ಮೀಸಲಾದ ಡಿಜಿಟಲ್ ವೇದಿಕೆ : ‘ಹರ್​ಸರ್ಕಲ್’

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts