ನವದೆಹಲಿ: ಇತ್ತೀಚಿಗೆ ಮುಕ್ತಾಯಗೊಂಡ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ಬಹುಮತ ಸಾಧಿಸಿದ್ದು, ಇಂದು (ಜೂನ್ 09) ಸಂಜೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇನ್ನೂ ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಿರುವುದನ್ನು ಟೀಕಿಸಿರುವ ಕಾಂಗ್ರೆಸ್ ಸಂಸದ ಶಶಿ ತರೂರ್ ಪದಗ್ರಹಣ ಸಮಾರಂಭದ ಬದಲು ಭಾರತ-ಪಾಕಿಸ್ತಾನ ಕ್ರಿಕೆಟ್ ಮ್ಯಾಚ್ ನೋಡುವುದಾಗಿ ಹೇಳಿದ್ದಾರೆ.

ನವದೆಹಲಿಯಲ್ಲಿ ಈ ಕುರಿತು ಮಾತನಾಡಿದ ಸಂಸದ ಶಶಿ ತರೂರ್, ನನ್ನನ್ನು ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಿಲ್ಲ. ಹೀಗಾಗಿ ನಾನು ಭಾರತ ಹಾಗೂ ಪಾಕಿಸ್ತಾನ ನಡುವಿನ ಟಿ20 ವಿಶ್ವಕಪ್ ಪಂದ್ಯವನ್ನು ವೀಕ್ಷಿಸುತ್ತೇನೆ. ಪ್ರಧಾನಿ ಪ್ರಮಾಣವಚನ ಸಮಾರಂಭಕ್ಕೆ ಬೇರೆ ರಾಷ್ಟ್ರದ ನಾಯಕರನ್ನು ಆಹ್ವಾನಿಸಿರುವುದು ಉತ್ತಮ ಬೆಳವಣಿಗೆಯಾಗಿದೆ.
#WATCH | On leaders of foreign countries invited for the swearing-in ceremony of PM-designate Narendra Modi, Congress leader Shashi Tharoor says, "I think that's a good tradition of inviting the neighbouring countries. But this time there's one less. He has not invited Pakistan.… pic.twitter.com/ztCTVprpX6
— ANI (@ANI) June 8, 2024
ಇದನ್ನೂ ಓದಿ: ಆಂಗ್ಲರ ವಿರುದ್ಧ ಆಲ್ರೌಂಡ್ ಪ್ರದರ್ಶನ; ಹಾಲಿ ಚಾಂಪಿಯನ್ನರ ಎದುರು ಗೆದ್ದು ಬೀಗಿದ ಆಸ್ಟ್ರೇಲಿಯಾ
ಮಾಲ್ಡೀವ್ಸ್ ಹಾಗೂ ಭಾರತದ ಸಂಬಂಧ ಹದಗೆಟ್ಟಿದ್ದರು ಅಲ್ಲಿನ ಪ್ರಧಾನಿಗೆ ಆಹ್ವಾನ ನೀಡಿರುವುದು ಉತ್ತಮ ನಡೆಯಾಗಿದೆ. ಪ್ರಮಾಣವಚನದ ಬಳಿಕ ಮಾಲ್ಡೀವ್ಸ್ ಅಧ್ಯಕ್ಷ ಹಾಗೂ ಪ್ರಧಾನಿ ಮೋದಿ ಮಾತುಕತೆ ನಡೆಸಲಿದ್ದಾರೆ ಎನ್ನುವ ವಿಶ್ವಾಸ ನಮಗಿದೆ. ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ದೇಶದ ವಿದೇಶಾಂಗ ನೀತಿಗಳು ಸಕಾರಾತ್ಮಕ ಹಾಗೂ ನಕಾರಾತ್ಮಕ ಅಂಶಗಳನ್ನು ಹೊಂದಿದ್ದು, ಈ ಬಗ್ಗೆ ಮುಂದಿನ ದಿನಗಳಲ್ಲಿ ಸಂಸತ್ನಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಇತ್ತ ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿಕೆ ಪರ-ವಿರೋಧದ ಚರ್ಚೆಗೆ ಆಸ್ಪದ ಮಾಡಿಕೊಟ್ಟಿದ್ದಾರೆ. ಹಲವರು ಪಂದ್ಯ ಶುರುವಾಗುವುದು 8 ಗಂಟೆಗೆ ಪ್ರಧಾನಿ ಮೋದಿ ಅವರ ಪ್ರಮಾಣ ವಚನ ಇರುವುದು 7:15ಕ್ಕೆ ನಿಮ್ಮಗಾಗಿ ಪಂದ್ಯವನ್ನು ಬೇಗ ಶುರು ಮಾಡುವುದಿಲ್ಲ ಎಂದು ಹಲವರು ಹೇಳಿಕೆಯನ್ನು ಟೀಕಿಸಿ ಕಮೆಂಟ್ ಮಾಡುತ್ತಿದ್ದಾರೆ.