ಕೋಟ: ವಿದ್ಯಾರ್ಥಿಗಳಲ್ಲಿ ಸಾಧನೆಗೈಯುವ ಗುರಿ ಇರಬೇಕು ಅಂತಹ ಗುರಿ ಇದ್ದರೆ ಯಶಸ್ಸಿನ ಗಟ್ಟ ಎರಲು ಸಾಧ್ಯ ಎಂದು ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ.ಕುಂದರ್ ಹೇಳಿದರು.
ಕರ್ನಾಟಕ ಸರ್ಕಾರ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಲಕ್ಷ್ಮೀ ಸೋಮ ಬಂಗೇರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೋಟ ಪಡುಕರೆ 2024-25ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನೆ, ಗೀತಾನಂದ ಫೌಂಡೇಶನ್ ಪ್ರಾಯೋಜಕತ್ವದಲ್ಲಿ ಪ್ರತಿಭಾನ್ವೇಷಣೆ ಅಂತರ್ ತರಗತಿ ಸಾಂಸ್ಕೃತಿಕ ಸ್ಪರ್ಧೆ, ವಿದ್ಯಾರ್ಥಿವೇತನ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಪ್ರಾಂಶುಪಾಲ ಡಾ.ರಾಜೇಂದ್ರ ಎಸ್.ನಾಯಕ ಅಧ್ಯಕ್ಷತೆ ವಹಿಸಿದ್ದರು. ಗೀತಾನಂದ ಫೌಂಡೇಶನ್ ವತಿಯಿಂದ ವಿದ್ಯಾರ್ಥಿವೇತನ ನೀಡಲಾಯಿತು.
ರೋಟರಿ ಕ್ಲಬ್ ಕೋಟ ಸಾಲಿಗ್ರಾಮ ಅಧ್ಯಕ್ಷ ತಿಮ್ಮ ಪೂಜಾರಿ, ರಕ್ಷಕ–ಶಿಕ್ಷಕ ಸಂಘದ ಅಧ್ಯಕ್ಷ ಸುರೇಶ ಪೂಜಾರಿ, ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುದಿನ, ಶಾಲಾಭಿವೃದ್ಧಿ ಸಮಿತಿ ಸದಸ್ಯ ರಮೇಶ್ ಎಚ್.ಕುಂದರ್, ಐಕ್ಯುಎಸಿ ಸಂಚಾಲಕ ಡಾ.ಸುಬ್ರಹ್ಮಣ್ಯ ಎ., ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪೂಜಾ, ಉಪಾಧ್ಯಕ್ಷೆ ದೀಕ್ಷಾ, ವಿದ್ಯಾರ್ಥಿವೇದಿಕೆ ಪದಾಧಿಕಾರಿಗಳಾದ ಸಂಜನಾ ಕಾಮತ್, ಯಶಿಕಾ, ಸಾಂಸ್ಕೃತಿಕ ಪ್ರತಿನಿಧಿ ಶ್ರೇಯಸ್ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ರಮೇಶ್ ಆಚಾರ್ ಸ್ವಾಗತಿಸಿದರು. ಉಪನ್ಯಾಸಕಿ ಮಮತಾ ನಿರೂಪಿಸಿದರು. ಸಾಂಸ್ಕೃತಿಕ ವಿಭಾಗ ಸಂಚಾಲಕ ಉಪನ್ಯಾಸಕ ಪ್ರೊ.ಶಂಕರ ನಾಯ್ಕ ಬಿ.ವಂದಿಸಿದರು.