More

    ಅರ್ಹ ಸರ್ಕಾರ ರಚನೆಗೆ ಮತದಾನದ ಸಂಕಲ್ಪ

    ಸಾಗರ: ಪ್ರತಿಯೊಬ್ಬರೂ ಮತದಾನ ಮಾಡುವ ಮೂಲಕ ಅರ್ಹ ಸರ್ಕಾರ ರಚನೆಗೆ ಸಂಕಲ್ಪ ಕೈಗೊಳ್ಳಬೇಕು. ನಮ್ಮ ಒಂದು ಮತದಿಂದ ದೇಶದ ಭವಿಷ್ಯ ರೂಪಿಸಲು ಸಾಧ್ಯವಿದೆ. ಮತದಾನ ನಮ್ಮ ಹಕ್ಕು ಎಂದು ಉಪವಿಭಾಗಾಧಿಕಾರಿ ಆರ್.ಯತೀಶ್ ಹೇಳಿದರು.

    ತಾಲೂಕು ಪಂಚಾಯಿತಿ ಆವರಣದಲ್ಲಿ ಸ್ವೀಪ್ ಸಮಿತಿ ಏರ್ಪಡಿಸಿದ್ದ ‘ನಮ್ಮ ನಡೆ ಮತಗಟ್ಟೆ ಕಡೆ’ ಚುನಾವಣಾ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಾರತ ಸದೃಢ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಪ್ರತಿಯೊಬ್ಬರೂ ಕಡ್ಡಾಯ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವದ ಮೌಲ್ಯ ಎತ್ತಿಹಿಡಿಯಬೇಕು ಎಂದು ತಿಳಿಸಿದರು.
    ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮೇ 7ರಂದು ಮತಗಟ್ಟೆಗೆ ಬಂದು ಕಡ್ಡಾಯವಾಗಿ ಮತ ಚಲಾಯಿಸಬೇಕು. ನಮ್ಮ ನಡೆ ಮತಗಟ್ಟೆ ಕಡೆ ಮೂಲಕ ಮತಗಟ್ಟೆಗಳಲ್ಲಿ ಇರುವ ಮೂಲಸೌಕರ್ಯ ಸಮಸ್ಯೆ ಸರಿಪಡಿಸಲಾಗುವುದು. ಮತದಾರರು ತಮ್ಮ ವ್ಯಾಪ್ತಿಯ ಮತಗಟ್ಟೆಗಳಲ್ಲಿ ಸಮಸ್ಯೆ ಇರುವುದನ್ನು ಗಮನಕ್ಕೆ ತಂದರೆ ಮತದಾನದ ದಿನದೊಳಗೆ ಸರಿಪಡಿಸಲಾಗುತ್ತದೆ ಎಂದರು.
    ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಶೇ.100 ಮತದಾನವಾಗಬೇಕು ಎನ್ನುವ ಉದ್ದೇಶದಿಂದ ನಿರಂತರ ಜಾಗೃತಿ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು. ತಹಸೀಲ್ದಾರ್ ಸೈಯದ್ ಕಲಿಮುಲ್ಲಾ, ತಾಪಂ ಇಒ ಸುನೀತಾ, ನಗರಸಭೆ ಅಧಿಕಾರಿ ಸಂತೋಷಕುಮಾರ್, ವೆಂಕಟೇಶ್, ರಾಮಚಂದ್ರ ಸಾಗರ್, ರಘು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts