More

    ಇಚ್ಛಾಶಕ್ತಿ ಉತ್ತುಂಗಕ್ಕೆ ಕೊಂಡೊಯ್ಯುತ್ತದೆ

    ಚಿತ್ರದುರ್ಗ: ಅಂಗವಿಕಲರು ಐಎಎಸ್ ಸೇರಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ. ಸಿಗುವ ಅವಕಾಶ ಸದ್ಬಳಕೆ ಮಾಡಿಕೊಂಡು ಯಶಸ್ವಿ ವ್ಯಕ್ತಿಗಳಾಗಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಇ.ಬಾಲಕೃಷ್ಣ ಸಲಹೆ ನೀಡಿದರು.

    ವಿಶ್ವ ಅಂಗವಿಕಲರ ದಿನಾಚರಣೆ ಅಂಗವಾಗಿ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಆಯೋಜಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
    ಅಂಗವಿಕಲತೆ ದೇಹಕ್ಕೆ ಹೊರತು, ಮನಸ್ಸಿಗಲ್ಲ. ಇಚ್ಛಾಶಕ್ತಿ ಇರುವೆಡೆ ಸಾಧನೆ ಸಾಧ್ಯ. ಕೀಳರಿಮೆ, ತಾತ್ಸಾರ ಮನಸ್ಥಿತಿಯಿಂದ ಹೊರಬಂದು ಎಲ್ಲರಂತೆ ಕಾಣಲು ಮುಂದಾಗಿ. ನಿಮ್ಮಲ್ಲೂ ಸಾಕಷ್ಟು ಪ್ರತಿಭಾವಂತರಿದ್ದು, ಅವರನ್ನು ಗುರುತಿಸಿ ಅವಕಾಶ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರದ ಜತೆ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸಿರುವುದು ಶ್ಲಾಘನೀಯ ಎಂದು ಹೇಳಿದರು.

    18 ವರ್ಷ ಮೇಲ್ಪಟ್ಟ ಅಂಗವಿಕಲರು ಮತದಾರರ ಪಟ್ಟಿಯಲ್ಲಿ ಹೆಸರನ್ನು ನೋಂದಣಿ ಮಾಡಿಸಿಕೊಳ್ಳಿ. ಸರ್ಕಾರದ ಯಾವುದೇ ಸೌಲಭ್ಯದಿಂದ ವಂಚಿತರಾಗಬೇಡಿ ಎಂದರು.
    ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ಮಾತನಾಡಿ, 20ನೇ ರಾಷ್ಟ್ರಮಟ್ಟದ ಪ್ಯಾರಾ ಕ್ರೀಡಾಕೂಟದಲ್ಲಿ ಚಳ್ಳಕೆರೆಯ ಅಂಧ ಕ್ರೀಡಾಪಟು ರಾಧಾ ಎಂಬ ವಿದ್ಯಾರ್ಥಿ 1,500 ಮೀ. ಓಟದಲ್ಲಿ ಚಿನ್ನ, 400 ಮೀ. ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದಿದ್ದಾಳೆ. ಏಕಲವ್ಯ ಪ್ರಶಸ್ತಿಯೂ ಲಭಿಸಿದೆ. ಡಿ.3ರಂದು ಜಿಲ್ಲಾಡಳಿತದಿಂದ ನಡೆಯುವ ಜಿಲ್ಲಾಮಟ್ಟದ ವಿಶ್ವ ಅಂಗವಿಕಲರ ದಿನಾಚರಣೆಯಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

    ಕ್ರೀಡಾ ವಿಭಾಗದಲ್ಲಿ ಮಡಿಕೆ ಹೊಡೆಯುವುದು, ಕೇನ್ ರೇಸ್, 100 ಮೀ. ಓಟ, ಗುಂಡು ಎಸೆತ, ಜಾವಲಿನ್ ಥ್ರೋ, ಬಕೆಟ್‌ನಲ್ಲಿ ರಿಂಗ್ ಎಸೆತ, ಮ್ಯೂಜಿಕಲ್ ಚೇರ್, ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಜಾನಪದ, ಭಾವ ಮತ್ತು ಭಕ್ತಿಗೀತೆ ಒಳಗೊಂಡು ಇತರೆ ಚಟುವಟಿಕೆಗಳಲ್ಲಿ 18 ರಿಂದ 45 ವರ್ಷದೊಳಗಿನವರು ಪಾಲ್ಗೊಂಡಿದ್ದರು. ಜಿಪಂ ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಜಿಲ್ಲಾ ನಿರೂಪಣಾಧಿಕಾರಿ ಕೆಂಪಹನುಮಯ್ಯ, ಸಂಗೀತ ಶಿಕ್ಷಕಿ ಕೋಕಿಲಾ ಇತರರಿದ್ದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಆಯೋಜಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts