More

  ಮೋದಿ ಕೈ ಬಲಪಡಿಸಲು ಎಚ್‌ಡಿಕೆ ಗೆಲ್ಲಿಸಿ

  ಮದ್ದೂರು: ರಾಷ್ಟ್ರದ ಸಮಗ್ರ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಉದ್ದೇಶದಿಂದ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಅಧಿಕ ಮತಗಳಿಂದ ಗೆಲ್ಲಿಸಬೇಕು ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಮನವಿ ಮಾಡಿದರು.

  ತಾಲೂಕಿನ ಆತಗೂರು ಹೋಬಳಿಯ ಹೂತಗೆರೆ ಗ್ರಾಮದಲ್ಲಿ ಶುಕ್ರವಾರ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಪರವಾಗಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದರು. ಮೋದಿ ಅವರು ರಾಷ್ಟ್ರ ರಕ್ಷಣೆ ಹಾಗೂ ದೇಶದ ಜನರ ಸಮಗ್ರ ಅಭಿವೃದ್ಧಿಗೆ 10 ವರ್ಷಗಳಿಂದ ನಿರಂತರವಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ. 3ನೇ ಬಾರಿಗೂ ಅವರು ಪ್ರಧಾನಿಯಾಗಲು ಕುಮಾರಸ್ವಾಮಿ ಅವರನ್ನು ಬೆಂಬಲಿಸುವುದು ಅಗತ್ಯ ಎಂದರು.

  ಕುಮಾರಸ್ವಾಮಿ ಅವರು ಗೆಲ್ಲುವುದರಿಂದ ಕೇಂದ್ರದಲ್ಲಿ ಕೃಷಿ ಸಚಿವರಾಗಲಿದ್ದಾರೆ. ಆ ಮೂಲಕ ಜಿಲ್ಲೆಯ ನೀರಾವರಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವುದರೊಂದಿಗೆ ಮೇಕೆದಾಟು ಯೋಜನೆ ಜಾರಿಗೆ ತರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

  ಮನ್‌ಮುಲ್ ನಿರ್ದೇಶಕ ಎಸ್.ಪಿ ಸ್ವಾಮಿ ಮಾತನಾಡಿ, ಮೋದಿ ಅವರ ಆಡಳಿತ ವಿಶ್ವದ ಗಮನ ಸೆಳೆದಿದೆ. ಮೋದಿ ಅವರು 3 ನೇ ಬಾರಿಗೆ ಪ್ರಧಾನಿಯಾಗಬೇಕಾದರೆ ಮೈತ್ರಿ ಅಭ್ಯರ್ಥಿ ಕುಮಾರಸ್ವಾಮಿ ಅವರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

  ಜಿಪಂ ಮಾಜಿ ಅಧ್ಯಕ್ಷ ಎಸ್.ಗುರುಚರಣ್ ಮಾತನಾಡಿ, ಕಾಂಗ್ರೆಸ್ ಸರ್ಕಾರದ 10 ತಿಂಗಳ ಸಾಧನೆ ಶೂನ್ಯ ಎಂದರು.

  ಇದಕ್ಕೂ ಮುನ್ನ ತಾಲೂಕಿನ ಗೊಲ್ಲರದೊಡ್ಡಿಯ ಜುಂಜಪ್ಪ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ನಂತರ ಗೊಲ್ಲರದೊಡ್ಡಿ, ಮಲ್ಲನಕುಪ್ಪೆಗೇಟ್, ಹೂತಗೆರೆ, ಕೆಸ್ತೂರು, ಆತಗೂರು, ಕದಲೂರು ಹಾಗೂ ಹೆಮ್ಮನಹಳ್ಳಿಗಳಲ್ಲಿ ಮತಪ್ರಚಾರ ಮಾಡಲಾಯಿತು. ಜಿಪಂ ಮಾಜಿ ಅಧ್ಯಕ್ಷ ಗುರುಚರಣ್, ಮನ್‌ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಳಿಯಪ್ಪ, ತಾಲೂಕು ಅಧ್ಯಕ್ಷ ಚಿಕ್ಕತಮ್ಮೇಗೌಡ, ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ಉಪಾಧ್ಯಕ್ಷ ದೇವರಹಳ್ಳಿ ವೆಂಕಟೇಶ್, ಜೆಡಿಎಸ್ ತಾಲೂಕು ಮಹಿಳಾ ಅಧ್ಯಕ್ಷೆ ದಿವ್ಯಾ, ಬಿಜೆಪಿ ತಾಲೂಕು ಮಹಿಳಾ ಅಧ್ಯಕ್ಷೆ ಶ್ವೇತಾ, ಬಿಜೆಪಿ ತಾಲೂಕು ಅಧ್ಯಕ್ಷ ಸತೀಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮುಖಂಡರಾದ ಅಪ್ಪುಪಿ.ಗೌಡ, ಕೆ.ಟಿ.ರಾಜಣ್ಣ, ಮನು, ಶೇಖರ್, ಕೂಳಗೆರೆ ಶೇಖರ್, ರವಿ, ಜಗದೀಶ್, ನಾರಾಯಣಸ್ವಾಮಿ ಸೇರಿದಂತೆ ಇತರರು ಇದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts