

ಮಂಗಳೂರು : ನೈಋತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಸಂಬಂಧಿಸಿ ದ.ಕ. ಜಿಲ್ಲೆಯಾದ್ಯಂತ ಜೂ.1ರಂದು ಸಾಯಂಕಾಲ 4ರಿಂದ ಜೂ.3ರಂದು ಮಧ್ಯರಾತ್ರಿ 12ರ ವರೆಗೆ ಮದ್ಯ ಮುಕ್ತ ದಿನಗಳು ಎಂದು ಘೋಷಿಸಿ ಮುಲ್ಲೈ ಮುಗಿಲನ್ ಎಂ.ಪಿ. ಆದೇಶ ಹೊರಡಿಸಿದ್ದಾರೆ. ಚುನಾವಣೆಯ ಸಂದರ್ಭ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮದ್ಯದಂಗಡಿ, ಮದ್ಯಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಪಿಲರಿಗಳು, ಸ್ಟಾರ್ ಹೊಟೇಲ್ ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶ ಹೊರಡಿಸಿದ್ದಾರೆ.