18.1 C
Bangalore
Saturday, December 7, 2019

ಸೂರತ್​ಗಢ ವಾಯುನೆಲೆಗೆ ವಿಂಗ್​ ಕಮಾಂಡರ್​ ಅಭಿನಂದನ್​ ನೇಮಕ: ಪಾಕ್​ನಿಂದ ಪಾರಾಗಿ ಬಂದಿರುವ ವೀರಯೋಧ

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಜೈಪುರ: ಪಾಕಿಸ್ತಾನ ಸೇನಾಪಡೆಯಿಂದ ಪಾರಾಗಿ ಬಂದಿರುವ ಭಾರತೀಯ ವಾಯುಪಡೆಯ ವೀರಯೋಧ ವಿಂಗ್​ ಕಮಾಂಡರ್​ ಅಭಿನಂದನ್​ ವರ್ಧಮಾನ್​ ಸೂರತ್​ಗಢದ ವಾಯುನೆಲೆಯಲ್ಲಿ ಕತ್ಯವ್ಯಕ್ಕೆ ಮರುನೇಮಕಗೊಂಡಿದ್ದಾರೆ. ರಾಜಸ್ಥಾನದಲ್ಲಿರುವ ಈ ವಾಯುನೆಲೆಯಲ್ಲಿ ಅವರು ಶನಿವಾರವೇ ಕರ್ತವ್ಯಕ್ಕೆ ಹಾಜರಾಗಿದ್ದಾಗಿ ವಾಯುಪಡೆ ಮೂಲಗಳು ತಿಳಿಸಿವೆ.

ಪಾಕಿಸ್ತಾನದ ಬಾಲಾಕೋಟ್​ನಲ್ಲಿದ್ದ ಉಗ್ರರ ನೆಲೆಗಳ ಮೇಲೆ ಭಾರತೀಯ ವಾಯುಪಡೆ ವಿಮಾನಗಳು ದಾಳಿ ಮಾಡಿದ್ದವು. ಇದರಿಂದ ಸಿಟ್ಟಿಗೆದ್ದ ಪಾಕಿಸ್ತಾನ ತನ್ನ ಯುದ್ಧವಿಮಾನಗಳನ್ನು ಭಾರತದ ವಾಯುಗಡಿಯೊಳಗೆ ನುಗ್ಗಿಸಲು ಯತ್ನಿಸಿತ್ತು. ಈ ಸಂದರ್ಭದಲ್ಲಿ ಆ ವಿಮಾನಗಳನ್ನು ಹಿಮ್ಮೆಟ್ಟಿಸಿದ್ದಲ್ಲದೆ, ಪಾಕ್​ನ ಎಫ್​-16 ಯುದ್ಧವಿಮಾನವನ್ನು ವಿಂಗ್​ ಕಮಾಂಡರ್​ ಅಭಿನಂದನ್​ ವರ್ಧಮಾನ್​ ಹೊಡೆದುರುಳಿಸಿದ್ದರು. ಈ ಪ್ರಯತ್ನದಲ್ಲಿ ಅವರಿದ್ದ ವಿಮಾನಕ್ಕೂ ಹಾನಿಯಾಗಿದ್ದರಿಂದ, ವಿಮಾನದಿಂದ ಹೊರಜಿಗಿದು ಪಾಕ್​ ಆಕ್ರಮಿತ ಕಾಶ್ಮೀರದೊಳಗೆ ಇಳಿದಿದ್ದರು. ಪಾಕ್​ ಸೇನೆ ಅವರನ್ನು ಬಂಧಿಸಿತ್ತು.

ಭಾರತ ಉಗ್ರರ ನೆಲೆಗಳ ಮೇಲೆ ದಾಳಿ ಮಾಡಿದ್ದರ ಬಗ್ಗೆ ಜಾಗತಿಕವಾಗಿ ಬೆಂಬಲ ವ್ಯಕ್ತವಾಗಿದ್ದಲ್ಲದೆ, ವಶದಲ್ಲಿರುವ ಅಭಿನಂದನ್​ ವರ್ಧಮಾನ್​ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಪಾಕ್​ ಮೇಲೆ ಜಾಗತಿಕ ನಾಯಕರು ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಬಂಧಿಸಿದ 60 ಗಂಟೆಗಳ ಬಳಿಕ ಅಭಿನಂದನ್​ ಅವರನ್ನು ಬಿಡುಗಡೆ ಮಾಡಿತ್ತು. ಆನಂತರ ಭಾರತದಲ್ಲಿ ಹಲವು ಬಗೆಯ ವೈದ್ಯಕೀಯ ತಪಾಸಣೆಗೆ ಒಳಗಾಗಿದ್ದ ಅಭಿನಂದನ್​ ಅವರು ಕರ್ತವ್ಯಕ್ಕೆ ಮರಳಲು ಅರ್ಹರಾಗಿರುವುದಾಗಿ ಹೇಳಲಾಗಿತ್ತು.

ಮಿಗ್​ 21 ಬೈಸನ್​ ಯುದ್ಧವಿಮಾನ ಹಾರಾಟ ನಡೆಸುವ ಅವಕಾಶ ಕ್ಷೀಣ?
ಸೂರತ್​ಗಢ ವಾಯುನೆಲೆಯಲ್ಲಿ ಮಿಗ್​ 21 ಬೈಸನ್​ ಯುದ್ಧವಿಮಾನ ಇದೆ. ಆದರೆ, ಯುದ್ಧವಿಮಾನದ ಪೈಲಟ್​ ಒಬ್ಬರು ವಿಮಾನದಿಂದ ಹೊರಜಿಗಿದ ಬಳಿಕ ಯುದ್ಧವಿಮಾನ ಹಾರಾಟ ನಡೆಸಲು ಅವಕಾಶ ಮಾಡಿಕೊಡುವ ಸಾಧ್ಯತೆಗಳು ತುಂಬಾ ಕಡಿಮೆ ಎನ್ನಲಾಗಿದೆ. ಹಾಗಾಗಿ ಅಭಿನಂದನ್​ ಅವರಿಗೆ ಇಂಥ ಅವಕಾಶ ಸಿಗುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ. ಆದರೆ, ಅಭಿನಂದನ್​ ಅವರ ಪ್ರಕರಣವನ್ನು ವಿಶೇಷವಾಗಿ ಪರಿಗಣಿಸಿ ಮಿಗ್​ 21 ಬೈಸನ್​ ಯುದ್ಧವಿಮಾನದಲ್ಲಿ ಹಾರಾಟ ನಡೆಸಲು ಅವಕಾಶ ಮಾಡಿಕೊಟ್ಟರೂ ಅಚ್ಚರಿ ಏನಿಲ್ಲ ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಣಿಸಿಕೊಂಡಿದ್ದ ಅಭಿನಂದನ್​
ರಾಜಸ್ಥಾನದ ಸೂರತ್​ಗಢ ವಾಯುನೆಲೆಗೆ ಕರ್ತವ್ಯಕ್ಕೆ ಮರುನಿಯೋಜನೆಗೊಳ್ಳುವ ಮುನ್ನ ವಿಂಗ್​ ಕಮಾಂಡರ್​ ಅಭಿನಂದನ್​ ವರ್ಧಮಾನ್​ ಜಮ್ಮು ಮತ್ತು ಕಾಶ್ಮೀರದ ವಾಯುನೆಲೆಯಲ್ಲಿ ಕಾಣಿಸಿಕೊಂಡಿದ್ದರು. ಅಲ್ಲಿ ಅವರು ತಮ್ಮ ಸಹೋದ್ಯೋಗಿಗಳೊಂದಿಗೆ ಆತ್ಮೀಯವಾಗಿ ಒಡನಾಡುತ್ತಿರುವ ಹಾಗೂ, ತಮ್ಮ ಸುರಕ್ಷಿತ ಬಿಡುಗಡೆಗಾಗಿ ಪ್ರಾರ್ಥಿಸಿದ ಸಹೋದ್ಯೋಗಿಗಳ ಕುಟುಂಬದವರಿಗಾಗಿ ಸೆಲ್ಫಿಗೆ ಫೋಸು ಕೊಡವುದಾಗಿ ಹೇಳಿಕೊಂಡು ಸಂತಸಪಟ್ಟಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿತ್ತು. (ಏಜೆನ್ಸೀಸ್​)

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...