20.4 C
Bengaluru
Sunday, January 19, 2020

ಗೆಲ್ಲುವ ಅಭ್ಯರ್ಥಿಗಳಿಗೆ ದುಗುಡ!

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

| ಮಂಜುನಾಥ ಕೋಳಿಗುಡ್ಡ ಬೆಳಗಾವಿ

ಜಿಲ್ಲೆಯ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜಯಗಳಿಸುವ ಅಭ್ಯರ್ಥಿಗಳಿಗೆ ಸಂತೋಷದೊಂದಿಗೆ ದುಗುಡವೂ ಕಾಡಲಿದೆ. ಏಕೆಂದರೆ, ಪ್ರಚಾರದ ವೇಳೆ ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಕಲ್ಪಿಸುವ ವಾಗ್ದಾನ ನೀಡಿದ್ದು, ಅದನ್ನು ಮಾತಿನಂತೆ ಈಡೇರಿಸುವುದು ಅವರಿಗೆ ದೊಡ್ಡ ಸಮಸ್ಯೆಯಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಪ್ರವಾಹದಿಂದ ನಲುಗಿಹೋಗಿರುವ ಗೋಕಾಕ, ಕಾಗವಾಡ ಮತ್ತು ಅಥಣಿ ವಿಧಾನಸಭಾ ಕ್ಷೇತ್ರಗಳಲ್ಲೇ ಉಪಚುನಾವಣೆ ನಡೆದಿದ್ದು, ಇಲ್ಲಿನ ಸಂತ್ರಸ್ತರು ಇನ್ನೂ ಅನೇಕ ಸಮಸ್ಯೆ ಎದುರಿಸುತ್ತಿದ್ದಾರೆ. ಅವುಗಳನ್ನೆಲ್ಲ ಬಗೆಹರಿಸುವುದು ಮತ್ತು ದಶಕಗಳಿಂದ ನನೆಗುದಿಗೆ ಬಿದ್ದಿರುವ ನೀರಾವರಿ, ಕುಡಿಯುವ ನೀರಿನ ಯೋಜನೆಗಳಿಗೆ ಮರು ಚಾಲನೆ ನೀಡುವುದು ಗೆದ್ದ ಅಭ್ಯರ್ಥಿಗಳಿಗೆ ಸವಾಲಿನ ಕಾರ್ಯವಾಗಿದೆ. ಹೀಗಾಗಿ ‘ವಿಜಯಶಾಲಿಗಳು’ ಯಾವ ರೀತಿ ಕೆಲಸ ಕೈಗೊಳ್ಳುತ್ತಾರೆ ಎಂಬುದು ಇದೀಗ ಇಲ್ಲಿನ ಜನರಲ್ಲೂ ಕುತೂಹಲ ಮೂಡಿಸಿದೆ.

ವಾಗ್ದಾನ ಏನೇನು?: ಅಥಣಿ ಮತ್ತು ಕಾಗವಾಡದಲ್ಲಿ ದಶಕಗಳಿಂದ ನನೆಗುದಿಗೆ ಬಿದ್ದಿರುವ 22 ಗ್ರಾಮಗಳ 70 ಸಾವಿರ ಹೆಕ್ಟೇರ್ ಭೂಮಿಗೆ ನೀರುಣಿಸುವ ಬಸವೇಶ್ವರ ಏತ ನೀರಾವರಿ ಯೋಜನೆ ವರ್ಷದಲ್ಲಿ ಪೂರ್ಣಗೊಳಿಸುವುದು, 120ಕ್ಕೂ ಅಧಿಕ ಕೆರೆಗಳ ಹೂಳೆತ್ತಿ ನೀರು ತುಂಬಿಸುವ ಯೋಜನೆಗೆ ಆದ್ಯತೆ ನೀಡುವುದು. ಆಮೆ ವೇಗದಲ್ಲಿರುವ ನೀರಾವರಿ ಯೋಜನೆಗಳನ್ನೂ ವರ್ಷದ ಒಳಗೆ ಪೂರ್ಣಗೊಳಿಸುವುದು, ಘಟಪ್ರಭಾ ಬಲದಂಡೆ ಕಾಲುವೆಗಳ ದುರಸ್ತಿ ಮತ್ತು ವಿಸ್ತರಣೆ, ಪಟ್ಟಣ ಪ್ರದೇಶಗಳಿಗೆ ದಿನದ 24 ಗಂಟೆ ಕುಡಿಯುವ ನೀರು ಸೌಲಭ್ಯ, ರಸ್ತೆ, ಸಾರಿಗೆ ಹಾಗೂ ಸರ್ಕಾರಿ ಆಸ್ಪತ್ರೆ ನಿರ್ಮಿಸಿಕೊಡುವುದಾಗಿ ಮತಬೇಟೆ ಮಾಡುವಾಗ ಅಭ್ಯರ್ಥಿಗಳು ವಾಗ್ದಾನ ಮಾಡಿದ್ದಾರೆ.

ನೀರು ಕುಡಿಸುವರೇ?: ಈ ಭಾಗದ ಕೃಷ್ಣಾ ದಡದ ನಿವಾಸಿಗಳಿಗೆ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೇಸಿಗೆಯಲ್ಲಿ 4 ಟಿಎಂಸಿ ನೀರನ್ನು ಕೃಷ್ಣಾ ನದಿಗೆ ಬಿಡುವ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಶಾಶ್ವತ ಪರಿಹಾರ ಕಲ್ಪಿಸುತ್ತೇವೆ ಎಂದು ಎರಡೂ ಪಕ್ಷದ ಅಭ್ಯರ್ಥಿಗಳು, ಸಚಿವರು, ಪ್ರತಿಪಕ್ಷದ ನಾಯಕರು ಇಲ್ಲಿನ ಜನರಿಗೆ ಭರವಸೆ ನೀಡಿದ್ದಾರೆ. ಆದರೆ, ಮಹಾರಾಷ್ಟ್ರದ ಕಾಂಗ್ರೆಸ್ ಮೈತ್ರಿ ಕೂಟ ಸರ್ಕಾರ ಆಡಳಿತದಲ್ಲಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವುದು ಅಷ್ಟು ಸುಲಭದ ಮಾತಲ್ಲ.

ನಿರೀಕ್ಷೆಯಲ್ಲಿ ಸಂತ್ರಸ್ತರು

ಗೋಕಾಕ, ಅಥಣಿ ಮತ್ತು ಕಾಗವಾಡ ವಿಧಾನಸಭಾ ಕ್ಷೇತ್ರಗಳಲ್ಲಿ 45 ಸಾವಿರ ಹೆಕ್ಟೇರ್‌ಗೂ
ಅಧಿಕ ಪ್ರಮಾಣದಲ್ಲಿ ಬೆಳೆಹಾನಿ, 80 ಹಳ್ಳಿಗಳಲ್ಲಿ 10 ಸಾವಿರಕ್ಕೂ ಅಧಿಕ ಮನೆಗಳು ಜಲಾವೃತಗೊಂಡು ಕುಟುಂಬಗಳು ಬೀದಿ ಪಾಲಾಗಿವೆ. ಪ್ರವಾಹ ಮುಗಿದು 3 ತಿಂಗಳಾಗುತ್ತ ಬಂದರೂ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಳ್ಳಲು ಆಗಿಲ್ಲ. ಕೂಲಿ ಕಾರ್ಮಿಕರು, ಮಧ್ಯಮ ವರ್ಗದ ಸಾವಿರಕ್ಕೂ ಅಧಿಕ ಕುಟುಂಬದವರು ಸ್ವಂತ ಮನೆಯಿಲ್ಲದೆ ಗುಡಿಸಲು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಸರ್ಕಾರ ಇನ್ನಾದರೂ ಪರಿಹಾರ ಕಲ್ಪಿಸುತ್ತದೆ ಎಂದು ಕಾಯುತ್ತಿರುವುದಾಗಿ ಸಂತ್ರಸ್ತರಾದ ಮಹಾದೇವಿ ಎಸ್. ಕುರಬನ್ನವರ, ಆನಂದ ಕಾಂಬಳೆ ತಿಳಿಸಿದ್ದಾರೆ.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...