18.1 C
Bangalore
Saturday, December 7, 2019

ಹಿಂಗಾರು ಮಳೆಗೂ ಮುನ್ನ ಚಳಿಗಾಲ!

Latest News

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಶ್ರೀಕೃಷ್ಣನ ಸಂದೇಶ ಸರ್ವಕಾಲಕ್ಕೂ ಪ್ರಸ್ತುತ

ಬಾಗಲಕೋಟೆ: ಕುರುಕ್ಷೇತ್ರದಲ್ಲಿ ಅರ್ಜುನನಿಗೆ ಶ್ರೀಕೃಷ್ಣನ ನೀಡಿದ ಗೀತೋಪದೇಶ ಸರ್ವಕಾಲಕ್ಕೂ ಪ್ರಸ್ತುತ ಎಂದು ಉಡುಪಿ ಶ್ರೀಕೃಷ್ಣಮಠದ ಭಾವಿ ಪರ್ಯಾಯ ಪೀಠಾಧೀಶ, ಅದಮಾರು ಶ್ರೀ ಈಶಪ್ರಿಯತೀರ್ಥ...

ಹರೀಶ್ ಮೋಟುಕಾನ ಮಂಗಳೂರು
ಕೊಡಗು, ಕರಾವಳಿ ಜಿಲ್ಲೆಗಳು ಸೇರಿದಂತೆ ಬಹುತೇಕ ಕಡೆ ಜಲ ಪ್ರಳಯದ ಮೂಲಕ ರೌದ್ರ ನರ್ತನ ಮೆರೆದಿದ್ದ ಪ್ರಕೃತಿಯ ಮುನಿಸು ಇನ್ನೂ ಕಡಿಮೆಯಾಗಿಲ್ಲ. ಹಿಂಗಾರು ಮಳೆಯಾಗಬೇಕಿದ್ದ ಈ ದಿನಗಳಲ್ಲಿ ಹಗಲು ಸುಡುವ ಬಿಸಿಲು, ರಾತ್ರಿ ತಂಗಾಳಿ, ಬೆಳಗ್ಗೆ ಮಂಜು ಮುಸುಕಿದ ವಾತಾವರಣದ ಜತೆಗೆ ಚಳಿ ಕಾಣಿಸಿಕೊಂಡಿದೆ.
ಕಾಲ ಚಕ್ರದ ಪ್ರಕಾರ ಸೆಪ್ಟೆಂಬರ್-ಅಕ್ಟೋಬರ್ ತಿಂಗಳಲ್ಲಿ ಹಿಂಗಾರು ಮಳೆಯಾಗುವುದು ಸಾಮಾನ್ಯ. ಕರಾವಳಿಯಲ್ಲಿ ನವರಾತ್ರಿ ವೇಳೆ ಗುಡುಗು ಸಹಿತ ಒಂದೆರಡು ಮಳೆಯಷ್ಟೇ ಸುರಿದಿದೆ. ಆ ನಂತರದ ದಿನಗಳಲ್ಲಿ ಬಿಸಿಲು ಕಾಣಿಸಿಕೊಂಡಿದೆ. ದಿನದಿಂದ ದಿನಕ್ಕೆ ತಾಪಮಾನ ಏರತೊಡಗಿದೆ. ಮಳೆಗಾಲ ಆರಂಭದಲ್ಲಿ ತುಂಬಿ ಹರಿದಿದ್ದ ನದಿಗಳು ಒಂದೇ ತಿಂಗಳಿನಲ್ಲಿ ಬತ್ತಿವೆ. ಬಾವಿ, ಕೆರೆಗಳಲ್ಲಿ ನೀರು ನೆಲಮುಟ್ಟಿದೆ.
ಅಕ್ಟೋಬರ್‌ನಿಂದ ಚಳಿಗಾಲ ಆರಂಭವಾಗುತ್ತದೆ ಎಂದಿದ್ದರೂ, ಸಾಮಾನ್ಯವಾಗಿ ಚಳಿಗಾಲ ಆರಂಭಗೊಳ್ಳುವುದು ನವೆಂಬರ್ ಅಂತ್ಯದ ವೇಳೆಗೆ. ಆದರೆ ಈ ಬಾರಿ ಅಕ್ಟೋಬರ್ ಅಂತ್ಯದ ವೇಳೆಗೆ ದಟ್ಟ ಮಂಜು ಕವಿದು ಚಳಿ ಕಾಣಿಸಿಕೊಂಡಿದೆ. ವಾಕಿಂಗ್, ಸೈಕ್ಲಿಂಗ್ ಹೋಗುವವರು ಬೆಚ್ಚನೆಯ ಉಡುಪು ಧರಿಸಿ ಓಡಾಡಲು ಆರಂಭಿಸಿದ್ದಾರೆ.

ತಾಪಮಾನ ತಾಕಲಾಟ:  ಮಂಗಳೂರಿನಲ್ಲಿ ಅ.29ರಂದು ಕನಿಷ್ಠ ತಾಪಮಾನ 20.4 ಆಗಿತ್ತು. ಇದು ಜಿಲ್ಲೆಯ ಇತಿಹಾಸದಲ್ಲೇ ಎರಡನೇ ಕನಿಷ್ಠ ತಾಪಮಾನ. ಇದಕ್ಕಿಂತ ಮೊದಲು 1985 ಅ.25ರಂದು 19.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಅ.28ರಂದು 35.7 ಡಿಗ್ರಿ ಸೆಲ್ಸಿಯಸ್ ತಲುಪುವ ಮೂಲಕ ಈ ಬಾರಿಯ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಅ.30ರಂದು ಕನಿಷ್ಠ 20.4 ಹಾಗೂ ಗರಿಷ್ಠ 34.6 ತಾಪಮಾನ ದಾಖಲಾಗಿದೆ. ಸಾಮಾನ್ಯವಾಗಿ ಅಕ್ಟೋಬರ್ ತಿಂಗಳಲ್ಲಿ ಗರಿಷ್ಠ 30ರಿಂದ 31 ಡಿ.ಸೆಲ್ಸಿಯಸ್ ತಾಪಮಾನ ಕಂಡು ಬರುತ್ತಿತ್ತು. ಆದರೆ ಈ ಬಾರಿ ಸುಮಾರು 2 ಡಿಗ್ರಿ ಸೆಲ್ಸಿಯಸ್ ಏರಿಕೆ ಕಂಡಿದೆ.

ಹಿಂಗಾರು ನಿರಾಸೆ:  ಈ ಬಾರಿ ಮುಂಗಾರು ಮಳೆ ವಾಡಿಕೆಯಂತೆ ಮೇ 25ರಂದು ಅಂಡಮಾನ್ ದಕ್ಷಿಣ ಭಾಗಕ್ಕೆ ಅಪ್ಪಳಿಸಿತ್ತು. ಭಾರತೀಯ ಹವಾಮಾನ ಇಲಾಖೆ ನೀಡಿದ್ದ ಮುನ್ಸೂಚನೆಯಂತೆ ನಿಗದಿತ ಸಮಯದಲ್ಲಿ ಮೇ ಅಂತ್ಯದ ವೇಳೆಗೆ ಕರ್ನಾಟಕದ ಕರಾವಳಿಯಲ್ಲಿ ಭಾರಿ ಮಳೆಯಾಗಿತ್ತು. ಆದರೆ ಹಿಂಗಾರು ನಿಗದಿತ ಸಮಯದಲ್ಲಿ ಆಗದೆ ನಿರಾಸೆ ಮೂಡಿಸಿದೆ. ಹವಾಮಾನದಲ್ಲಿ ತೇವಾಂಶದ ಕೊರತೆಯಿಂದ ಈ ಬಾರಿ ಹಿಂಗಾರು ವಿಳಂಬವಾಗಿದೆ. ವಿಳಂಬವಾದರೂ ಸುರಿಯುವ ಮಳೆಯಲ್ಲಿ ಕಡಿಮೆಯಾಗಲಾರದು ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.

ಹೂ ಬಿಟ್ಟರೂ ಕಾಯಿ ಅನುಮಾನ:  ಸಾಮಾನ್ಯವಾಗಿ ಡಿಸೆಂಬರ್, ಜನವರಿ ತಿಂಗಳಿನಲ್ಲಿ ಹೂ ಬಿಡಬೇಕಿದ್ದ ಹಣ್ಣಿನ ಮರಗಳು ಈ ಬಾರಿ ಅಕ್ಟೋಬರ್ ಆರಂಭದಲ್ಲೇ ಹೂ ಬಿಟ್ಟಿವೆ. ಇನ್ನು ಕೆಲವು ಚಿಗುರೊಡೆವಿವೆ. ಮಳೆಗಾಲದ ಅವಧಿಯಲ್ಲಿ ಅಧಿಕ ಮಳೆ ಹಾಗೂ ತೀವ್ರ ಬಿಸಿಲು ಕಾಣಿಸಿಕೊಂಡ ಪರಿಣಾಮ ಮರಗಳು ಅವಧಿಗೆ ಮುನ್ನವೇ ಹೂ ಬಿಟ್ಟಿವೆ. ಆದರೆ, ಅಸಹಜವಾಗಿ ಹೂ ಬಿಡುವುದರಿಂದ ಬಹುತೇಕ ಹೂವುಗಳು ಕಾಯಿ ಬಿಡುವುದಿಲ್ಲ. ಇದರಿಂದ ಸಸ್ಯ ಸಂತಾನೋತ್ಪತ್ತಿ ಕುಂಠಿತವಾಗುವ ಸಾಧ್ಯತೆ ಇದೆ. ಆಯಾ ಋತುಮಾನದ ಹಣ್ಣುಗಳನ್ನು ನಂಬಿಕೊಂಡಿರುವ ಕಾಡು ಪ್ರಾಣಿಗಳ ಆಹಾರಕ್ಕೂ ಕುತ್ತು ಉಂಟಾಗುವುದಲ್ಲದೆ ಪ್ರಾಣಿಗಳು ನಾಡಿಗೆ ಲಗ್ಗೆ ಇಟ್ಟು ಮಾನವ-ಪ್ರಾಣಿ ಸಂಘರ್ಷ ಹೆಚ್ಚಲಿದೆ ಎನ್ನುತ್ತಾರೆ ತಜ್ಞರು.

ಶುಭ್ರ ಆಕಾಶ ಇರುವಾಗ ಗಾಳಿಯಲ್ಲಿ ನೀರಿನ ತೇವಾಂಶ ಇರುವುದಿಲ್ಲ. ಇದರಿಂದ ಬಿಸಿಲಿನ ಉಷ್ಣತೆ ಹೆಚ್ಚಾಗಿರುತ್ತದೆ. ಮಂಗಳೂರು ಭಾಗದಲ್ಲಿ ಸಮುದ್ರ ಇರುವುದರಿಂದ ಗಾಳಿಯಲ್ಲಿ ಸ್ವಲ್ಪ ಮಟ್ಟಿಗೆ ತೇವಾಂಶ ಇದೆ. ಹಾಗಾಗಿ ಬೇಗನೆ ಚಳಿ ಆರಂಭಗೊಂಡಿದೆ. ನ.3-4ರಂದು ಒಳಗಾಗಿ ಹಿಂಗಾರು ಮಳೆಯಾಗುವ ಸಾಧ್ಯತೆ ಇದೆ.
– ಎಂ.ಎಸ್.ಗವಾಸ್ಕರ್, ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದ ವಿಜ್ಞಾನಿ

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...