More

    ಸಂಸತ್ತಿನ ಚಳಿಗಾಲದ ಅಧಿವೇಶನದ ದಿನಾಂಕ ನಿಗದಿ: ಎಂದಿನಿಂದ, ಎಷ್ಟು ದಿನ? ಇಲ್ಲಿದೆ ವಿವರ..

    ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಸಂಬಂಧಿಸಿದಂತೆ ದಿನಾಂಕ ನಿಗದಿಯಾಗಿದ್ದು, ಈ ಸಲ ಎಂದಿನಿಂದ ಎಂದಿನವರೆಗೆ ಒಟ್ಟು ಎಷ್ಟು ದಿನಗಳ ಅಧಿವೇಶನ ನಡೆಯಲಿದೆ ಎಂಬ ಮಾಹಿತಿ ಬಹಿರಂಗಗೊಂಡಿದೆ. ಈ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಮಾಹಿತಿ ನೀಡಿದ್ದಾರೆ.

    2023ನೇ ಸಾಲಿನ ಚಳಿಗಾಲದ ಸಂಸತ್ ಅಧಿವೇಶನವು ಡಿ. 4ರಂದು ಆರಂಭಗೊಳ್ಳಲಿದ್ದು, ಡಿ. 22ರವರೆಗೂ ಇರಲಿದೆ ಎಂದು ಅವರು ತಮ್ಮ ಅಧಿಕೃತ ಎಕ್ಸ್ ಹ್ಯಾಂಡಲ್​ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅಲ್ಲದೆ, ಈ 19 ದಿನಗಳಲ್ಲಿ 15 ಸಭೆ ನಡೆಯಲಿದೆ ಎಂದೂ ಅವರು ಹೇಳಿಕೊಂಡಿದ್ದಾರೆ.

    ಇದನ್ನೂ ಓದಿ: ಪೊಳ್ಳು ಗ್ಯಾರಂಟಿಗಳಿಂದಾಗಿ ದೀಪಾವಳಿ ಹೊತ್ತಲ್ಲೇ ರಾಜ್ಯ ದಿವಾಳಿ: ಸರ್ಕಾರದ ವಿರುದ್ಧ ಹೋರಾಟದ ಎಚ್ಚರಿಕೆ ಕೊಟ್ಟಿದ್ದೇಕೆ ಮಾಜಿ ಸಿಎಂ?

    ಅಮೃತ ಕಾಲದ ಈ ಅಧಿವೇಶನದಲ್ಲಿ ಶಾಸಕಾಂಗ ವ್ಯವಹಾರ ಮತ್ತು ಇತರ ಪ್ರಮುಖ ವಿಷಯಗಳ ಬಗ್ಗೆ ಚರ್ಚೆಗಳು ನಡೆಯಲಿರುವುದನ್ನು ನಿರೀಕ್ಷಿಸಲಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಅವರು ಅಭಿಪ್ರಾಯ ಪಟ್ಟಿದ್ದಾರೆ.

    ಚಳಿಗಾಲದ ಅಧಿವೇಶನವು ಸಾಮಾನ್ಯವಾಗಿ ನವೆಂಬರ್ ಮೂರನೇ ವಾರದಲ್ಲಿ ಬರುತ್ತಿದ್ದು, ಡಿ. 25ರ ಒಳಗೆ ಮುಗಿಯುತ್ತಿತ್ತು. ಆದರೆ ಈ ಸಲ ಸ್ವಲ್ಪ ತಡವಾಗಿ ಆರಂಭವಾಗುತ್ತಿದೆ ಎನ್ನಲಾಗಿದೆ. ಐಪಿಸಿ, ಸಿಆರ್​​ಪಿಸಿ, ಎವಿಡೆನ್ಸ್​ ಆ್ಯಕ್ಟ್​ಗೆ ಪರ್ಯಾಯವಾಗಿ ರೂಪಿಸಲಾದ ಮಸೂದೆಗಳು ಈ ಅಧಿವೇಶನದಲ್ಲಿ ಚರ್ಚೆಗೆ ಬರಲಿವೆ ಎಂದೂ ಹೇಳಲಾಗುತ್ತಿದೆ.

    ರಾಷ್ಟ್ರೀಯ ಹೆದ್ದಾರಿಯಲ್ಲೇ ಸ್ಟೂಲ್ ಇಟ್ಟು ಕುಳಿತು ಬಸ್​ಗೆ ತಡೆ; ಸಿನಿಮೀಯ ರೀತಿಯಲ್ಲಿ ಸ್ಥಳೀಯ ಪ್ರಯಾಣಿಕರಿಗೆ ನೆರವಾದ ಉದ್ಯಮಿ

    ಪ್ರಶ್ನೆಗಾಗಿ ನಗದು ಪ್ರಕರಣ: ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಸಿಬಿಐ ತನಿಖೆಗೆ ಆದೇಶಿಸಿದ ಲೋಕಪಾಲ್

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts