More

    ವೈಚಾರಿಕೆ ಬೆಳಸಿದ ಕುವೆಂಪು

    ಚಿಕ್ಕಮಗಳೂರು: ರಾಷ್ಟ್ರಕವಿ ಕುವೆಂಪು ಅವರ ಕೃತಿಗಳ ಅಧ್ಯಯನ ಮಾಡುವುದರಿಂದ ವೈಚಾರಿಕತೆ ನೆಲೆಯಲ್ಲಿ ಬದುಕನ್ನು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಜಿ.ಬಿ.ವಿರೂಪಾಕ್ಷ ತಿಳಿಸಿದರು.
    ಮಲ್ಲಿಗೆ ಸುಗಮ ಸಂಗೀತ ಟ್ರಸ್ಟ್ ಮತ್ತು ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್‌ನಿಂದ ನಗರದ ಬೇಲೂರು ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರಕವಿ ಕುವೆಂಪು ಮತ್ತು ಗಾನ ಗಾರುಡಿಗ ಡಾ.ಸಿ.ಅಶ್ವತ್ ಜನ್ಮದಿನದ ಅಂಗವಾಗಿ ಏರ್ಪಡಿಸಿದ್ದ ನುಡಿ ನಮನ ಮತ್ತು ಗೀತ ಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ರಾಷ್ಟ್ರಕವಿ ಕುವೆಂಪು ಅವರು ಜಗದ ಕವಿ, ಯುಗದ ಕವಿ, ರಸ ಋಷಿಯಾಗಿದ್ದ ಅವರು ಸಾಹಿತ್ಯ ದ ಕೃತಿಗಳ ಮೂಲಕ ಸಮಾಜದ ಅಂಕು ಡೊಂಕುಗಳನ್ನು ತಿದ್ದಿ, ಮೌಢ್ಯವನ್ನು ತೊಳೆದು ಜನರಲ್ಲಿ ವೈಚಾರಿಕತೆ ಬೆಳೆಸುವ ಕೆಲಸ ಮಾಡಿದರು. ಪ್ರಕೃತಿಯನ್ನು ವರ್ಣಿಸಿದ ಹೆಗ್ಗಳಿಕೆ ಕವಿ ಕುವೆಂಪು ಅವರಿಗೆ ಸಲ್ಲುತ್ತದೆ. ಆಡು ಮುಟ್ಟದ ಸೊಪ್ಪಿಲ್ಲ ಎಂಬ ಗಾದೆಯಂತೆ ಕುವೆಂಪು ಅವರು ಸಾಹಿತ್ಯದ ಎಲ್ಲ ಪ್ರಾಕಾರಗಳಲ್ಲೂ ಕೃಷಿ ಮಾಡಿದ್ದಾರೆ ಎಂದು ಹೇಳಿದರು.
    ಗಾಯಕ ಮಲ್ಲಿಗೆ ಸುಧೀರ್ ವಿದ್ಯಾರ್ಥಿಗಳಿಗೆ ಗಾಯನ ತರಬೇತಿ ನೀಡಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳು ಮಲ್ಲಿಗೆ ಸುಧೀರ್ ಮತ್ತು ಅಭಿಷೇಕ್ ಮಲ್ಲಿಗೆ ಅವರಿಂದ ರಾಷ್ಟ್ರಕವಿ ಕುವೆಂಪು ಮತ್ತು ಡಾ.ಸಿ.ಅಶ್ವತ್ ಅವರ ಗೀತೆಗಳ ಗಾಯನ ನಡೆಯಿತು. ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಪ್ರೇಮ್‌ಕುಮಾರ್, ಸಂಗೀತ ಶಿಕ್ಷಕಿ ಸುಮಾ ಪ್ರಸಾದ್, ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಕಾರ್ಯದರ್ಶಿ ಮಂಜುಳಾ, ಮಹೇಶ್, ಶಿಕ್ಷಕರಾದ ಮಂಜುನಾಥ್, ವಿಜಯಕುಮಾರ್, ಸುಧಾ, ಪಲ್ಲವಿ ಚವ್ಹಾಣ್, ಕವನ ಚವ್ಹಾಣ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts