16 C
Bangalore
Thursday, December 12, 2019

ಮಾಲ್ದೀವ್ಸ್​ಗೆ ಇಂದು ಮೋದಿ: 2ನೇ ಬಾರಿ ಪ್ರಧಾನಿಯಾದ ಬಳಿಕ ಮೊದಲ ಬಾರಿ ವಿದೇಶಕ್ಕೆ ಭೇಟಿ

Latest News

ರಾಜ್ಯ ಸರ್ಕಾರ, ಬಿಬಿಎಂಪಿಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಬಿಎಂಪಿಯಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಇಂಜಿನಿಯರ್​ಗಳನ್ನು ಮಾತೃ ಇಲಾಖೆಗೆ ವಾಪಸ್ ಕಳುಹಿಸಲು ಕೋರಿ ಸಲ್ಲಿಕೆಯಾಗಿರುವ ಅರ್ಜಿ ಸಂಬಂಧ ಸರ್ಕಾರ ಹಾಗೂ ಪಾಲಿಕೆಗೆ...

ಮಣ್ಣು ಮಾಲಿನ್ಯದಿಂದ ಜೀವಸಂಕುಲಕ್ಕೆ ಸಂಕಟ

ಮಣ್ಣಿನ ಮಾಲಿನ್ಯವನ್ನು ನಿರ್ಲಕ್ಷಿಸುತ್ತಿದ್ದೇವೆ. ಲಕ್ಷಾಂತರ ವರ್ಷಗಳ ನೈಸರ್ಗಿಕ ಪ್ರಕ್ರಿಯೆಯಿಂದ ಮಣ್ಣು ರೂಪುಗೊಳ್ಳುತ್ತದೆ. ಆದರೆ, ಅದಕ್ಕೆ ಹೇಗೆ ಹಾನಿ ಮಾಡುತ್ತಿದ್ದೇವೆ ಎಂದರೆ ಮುಂದಿನ ದಿನಗಳಲ್ಲಿ ದೊಡ್ಡ ಗಂಡಾಂತರ...

ರೌಡಿ ಕಾಲಿಗೆ ಗುಂಡೇಟು

ಬೆಂಗಳೂರು: ಆರು ತಿಂಗಳ ಹಿಂದೆ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ತಲೆಮರೆಸಿಕೊಂಡು ತಿರುಗುತ್ತಿದ್ದ ಶಾರ್ಪ್​ಶೂಟರ್ ರೌಡಿಶೀಟರ್ ಕಾಲಿಗೆ ಕೆ.ಜಿ. ಹಳ್ಳಿ ಪೊಲೀಸರು...

ಸುಗಮ ಸಾರಿಗೆಗೆ ಬೇಕು 2 ಲಕ್ಷ ಕೋಟಿ ರೂಪಾಯಿ

ಬೆಂಗಳೂರು: ನಗರದ ಸಂಚಾರದಟ್ಟಣೆ ನಿವಾರಿಸುವ ಜತೆಗೆ ವಾಯುಮಾಲಿನ್ಯ ಸಮಸ್ಯೆ ಉಲ್ಬಣಿಸದಂತೆ ತಡೆಯಲು ಅಗತ್ಯ ಸೌಲಭ್ಯ ಕಲ್ಪಿಸಲು 2.30 ಲಕ್ಷ ಕೋಟಿ ರೂ. ಬೇಕಿದೆ. ಮುಂದಿನ 20...

ವಿಕ್ಟೋರಿಯಾದಲ್ಲಿ 68 ಕೋಟಿ ರೂ ವೆಚ್ಚದ ಕಟ್ಟಡ

ಬೆಂಗಳೂರು: ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ (ಬಿಎಂಸಿಆರ್​ಐ) ಆಸ್ಪತ್ರೆಗಳಲ್ಲಿ ಒಳರೋಗಿಗಳ ಸೇವೆಗಾಗಿ 68.50 ಕೋಟಿ ರೂ. ವೆಚ್ಚದಲ್ಲಿ ಸಾವಿರ ಒಳರೋಗಿಗಳ ದಾಖಲು...

ನವದೆಹಲಿ: ಎರಡನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನರೇಂದ್ರ ಮೋದಿ ಮೊದಲ ವಿದೇಶ ಪ್ರವಾಸವನ್ನು ಶನಿವಾರ ಆರಂಭಿಸಲಿದ್ದಾರೆ. ‘ನೆರೆಹೊರೆಯ ರಾಷ್ಟ್ರಗಳು ಮೊದಲು’ ಎಂಬ ನೀತಿಗೆ ಅನುಗುಣವಾಗಿ ಮಾಲ್ದೀವ್ಸ್ ಹಾಗೂ ಶ್ರೀಲಂಕಾಕ್ಕೆ ಜೂ. 8 ಹಾಗೂ 9ರಂದು ಅವರು ಭೇಟಿ ನೀಡಲಿದ್ದಾರೆ.

ಮಾಲ್ದೀವ್ಸ್​ನಲ್ಲಿ ಚೀನಾ ಪ್ರಭಾವ ಕುಗ್ಗಿಸುವುದು ಹಾಗೂ ಭಾರತದ ಐತಿಹಾಸಿಕ ಸಂಬಂಧವನ್ನು ಇನ್ನಷ್ಟು ಬಲಗೊಳಿಸುವುದು ಮೋದಿ ಭೇಟಿಯ ಉದ್ದೇಶವಾಗಿದೆ. ಹೀಗಾಗಿ ಎರಡು ದಿನಗಳ ಪ್ರವಾಸದಲ್ಲಿ ಪ್ರಧಾನಿ ಮೋದಿ, ವಿವಿಧ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಇತ್ತೀಚಿಗೆ ಉಗ್ರರ ದಾಳಿಯಿಂದ ಕಂಗೆಟ್ಟಿರುವ ಶ್ರೀಲಂಕಾಕ್ಕೆ ನೈತಿಕ ಸ್ಥೈರ್ಯ ತುಂಬುವ ನಿಟ್ಟಿನಲ್ಲಿ ಜೂ.9ರಂದು ಸಾಂಕೇತಿಕ ಭೇಟಿ ನೀಡಲಿದ್ದಾರೆ.

2011ರ ಬಳಿಕ ದ್ವಿಪಕ್ಷೀಯ ಮಾತುಕತೆಗೆ ಮಾಲ್ದೀವ್ಸ್​ಗೆ ಇದೇ ಮೊದಲ ಬಾರಿಗೆ ಭಾರತದ ಪ್ರಧಾನಿ ಭೇಟಿ ನೀಡುತ್ತಿದ್ದಾರೆ. 2011ರಲ್ಲಿ ಮನಮೋಹನ್ ಸಿಂಗ್ ಭೇಟಿ ನೀಡಿದ್ದರೆ, 2018ರಲ್ಲಿ ಮಾಲ್ದೀವ್ಸ್ ನೂತನ ಅಧ್ಯಕ್ಷರ ಪ್ರಮಾಣವಚನಕ್ಕೆ ಪ್ರಧಾನಿ ಮೋದಿ ಪ್ರಯಾಣ ಬೆಳೆಸಿದ್ದರು.2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದಾಗಲೂ ಇದೇ ರೀತಿ ಪಕ್ಕದ ಭೂತಾನ್ ದೇಶಕ್ಕೆ ಮೋದಿ ಮೊದಲ ಭೇಟಿ ನೀಡಿದ್ದರು. ಈ ಮೂಲಕ ಅಕ್ಕಪಕ್ಕದ ರಾಷ್ಟ್ರಗಳಲ್ಲಿ ಚೀನಾ ಹಾಗೂ ಪಾಕಿಸ್ತಾನದ ಪ್ರಭಾವ ಹೆಚ್ಚದಂತೆ ನೋಡಿಕೊಳ್ಳುವುದು ಎನ್​ಡಿಎ ಸರ್ಕಾರದ ಆದ್ಯತೆಯಾಗಿದೆ.

ಮಾಲ್ದೀವ್ಸ್ ಜತೆ ಭಾರತ ಐತಿಹಾಸಿಕ ಹಾಗೂ ಸಾಂಸ್ಕೃತಿಕ ಸಂಬಂಧ ಹೊಂದಿದೆ. ಇದನ್ನು ಇನ್ನಷ್ಟು ಗಟ್ಟಿಗೊಳಿಸಲು ಮಾಲ್ದೀವ್ಸ್​ನತ್ತ ಹೋಗುತ್ತಿದ್ದೇನೆ. ಸರಣಿ ಬಾಂಬ್ ಸ್ಪೋಟದ ಹಿನ್ನೆಲೆಯಲ್ಲಿ ಶ್ರೀಲಂಕಾಕ್ಕೆ ಧೈರ್ಯ ತುಂಬುವ ನಿಟ್ಟಿನಲ್ಲಿ ಭೇಟಿ ನೀಡುತ್ತಿದ್ದೇನೆ.

| ನರೇಂದ್ರ ಮೋದಿ, ಪ್ರಧಾನಿ

ಏನೇನು ಕಾರ್ಯಕ್ರಮ: ಆರ್ಥಿಕ, ರಕ್ಷಣೆ ಹಾಗೂ ವಾಣಿಜ್ಯ ಸಂಬಂಧ ವೃದ್ಧಿ ಕುರಿತು ಒಪ್ಪಂದಕ್ಕೆ ಸಹಿ

ಪ್ರಮುಖ ನಾಯಕರ ಭೇಟಿ

ಭಾರತದ ಆರ್ಥಿಕ ನೆರವಿನಿಂದ ನಿರ್ಮಾಣವಾಗಿರುವ ಕರಾವಳಿ ಭದ್ರತೆಗೆ ವಿಶೇಷ ರೆಡಾರ್ ವ್ಯವಸ್ಥೆ ಹಾಗೂ ಮಾಲ್ದೀವ್ಸ್ ಸೇನಾ ತರಬೇತಿ ಕೇಂದ್ರದ ಉದ್ಘಾಟನೆ

ಭೂತಾನ್​ನಲ್ಲಿ ಜೈಶಂಕರ್

ನೂತನ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮೊದಲ ವಿದೇಶಿ ಪ್ರವಾಸದ ಅಂಗವಾಗಿ ಭೂತಾನ್​ಗೆ ಭೇಟಿ ನೀಡಿದ್ದಾರೆ. ಭೂತಾನ್ ಪ್ರಧಾನಿ ಲೊಟೆ ತ್ಶೆರಿಂಗ್ ಜತೆ ದ್ವಿಪಕ್ಷೀಯ ಮಾತುಕತೆ ನಡೆಸಿದ ಜೈಶಂಕರ್, ಗಡಿ, ಆರ್ಥಿಕ ಹಾಗೂ ಇತರ ಸಹಕಾರಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿದ್ದಾರೆ. ಭಾರತದ ಅತ್ಯಾಪ್ತ ದೇಶಗಳ ಪಟ್ಟಿಯಲ್ಲಿ ಎಂದಿಗೂ ಭೂತಾನ್ ಇರಲಿದೆ. ಹೀಗಾಗಿ 2014ರಲ್ಲಿ ಮೋದಿಯ ಮೊದಲ ಪ್ರವಾಸ ಭೂತಾನ್ ಆಗಿತ್ತು, ಈಗ ವಿದೇಶಾಂಗ ಸಚಿವರ ಮೊದಲ ಪ್ರವಾಸದ ಆಯ್ಕೆಯೂ ಭೂತಾನ್ ಆಗಿದೆ ಎಂದು ಅವರು ಹೇಳಿದ್ದಾರೆ.

ಸಂಸತ್ ಉದ್ದೇಶಿಸಿ ಮೋದಿ ಭಾಷಣ

ಮಾಲ್ದೀವ್ಸ್​ಸಂಸತ್ ಉದ್ದೇಶಿಸಿ ಪ್ರಧಾನಿ ಮೋದಿ ಶನಿವಾರ ಭಾಷಣ ಮಾಡಲಿದ್ದಾರೆ. ಮಾಲ್ದೀವ್ಸ್​ನ ನೂತನ ಅಧ್ಯಕ್ಷ ಇಬ್ರಾಹಿಂ ಮೊಹಮದ್ ಸೊಲಿಹ್ ಸೂಚನೆ ಮೇರೆಗೆ ಪ್ರಧಾನಿ ಮೋದಿಗೆ ಈ ವಿಶೇಷ ಗೌರವ ನೀಡಲಾಗುತ್ತಿದೆ. ಮಾಲ್ದೀವ್ಸ್​ನಲ್ಲಿ ಹೊಸ ಅಧ್ಯಕ್ಷರ ಆಯ್ಕೆ ಬಳಿಕ ಭಾರತದ ಪ್ರಭಾವ ಹೆಚ್ಚುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ಸಂಸತ್​ನಲ್ಲಿನ ಭಾಷಣದ ಬಳಿಕ ಅಧ್ಯಕ್ಷ ಸೊಲಿಹ್, ಉಪಾಧ್ಯಕ್ಷ ಫೈಸಲ್ ನಸೀಮ್ ಸ್ಪೀಕರ್ ಹಾಗೂ ಮಾಲ್ದೀವ್ಸ್​ಮಾಜಿ ಅಧ್ಯಕ್ಷರನ್ನು ಮೋದಿ ಭೇಟಿ ಮಾಡಲಿದ್ದಾರೆ.

ಮೊದಲ ವಿದೇಶಿ ನಾಯಕ…

ಶ್ರೀಲಂಕಾದಲ್ಲಿನ ಸರಣಿ ಬಾಂಬ್ ಸ್ಪೋಟದ ನಂತರ ಅಲ್ಲಿಗೆ ಭೇಟಿ ನೀಡುತ್ತಿರುವ ಮೊದಲ ವಿದೇಶಿ ನಾಯಕ ಪ್ರಧಾನಿ ನರೇಂದ್ರ ಮೋದಿ. ಈ ವೇಳೆ ಅನೌಪಚಾರಿಕವಾದ ದ್ವಿಪಕ್ಷೀಯ ಮಾತುಕತೆ ನಡೆಯಲಿದ್ದು, ಭೇಟಿಯು ಕೆಲ ಗಂಟೆಗಳಿಗೆ ಸೀಮಿತವಾಗಿರಲಿದೆ. ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಶ್ರೀಲಂಕಾ ಜತೆ ಭಾರತ ನಿಲ್ಲಲಿದೆ ಎನ್ನುವ ಸಂದೇಶ ರವಾನಿಸುವುದು ಈ ಭೇಟಿ ಉದ್ದೇಶವಾಗಿದೆ. ಮೋದಿ ಭೇಟಿ ಹಿನ್ನೆಲೆಯಲ್ಲಿ ಕೊಲಂಬೊದಲ್ಲಿ ವಿಶೇಷ ಭದ್ರತಾ ವ್ಯವಸ್ಥೆ ಮಾಡಲಾಗಿದ್ದು, ಮೋದಿ ಸಂಚಾರ ಮಾಡಲಿರುವ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ. ಮೋದಿ ಭೇಟಿಯನ್ನು ಶ್ರೀಲಂಕಾ ಮುಕ್ತ ಕಂಠದಿಂದ ಸ್ವಾಗತಿಸಿದೆ.

ಇಂದು ಗುರುವಾಯೂರು, ನಾಡಿದ್ದು ತಿರುಪತಿ

ಕಾಸರಗೋಡು: ಶನಿವಾರ ಕೇರಳಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿಗೆ ಶ್ರೀಕೃಷ್ಣ ದೇವಸ್ಥಾನದಲ್ಲಿ ತಾವರೆ ಹೂವುಗಳ ತುಲಾಭಾರ ನಡೆಸಲಾಗುತ್ತದೆ. ಬಳಿಕ ಗುರುವಾಯೂರು ಅರಿಯನ್ನೂರು ಶ್ರೀಕೃಷ್ಣ ಕಾಲೇಜು ಮೈದಾನದಲ್ಲಿ ಸಾರ್ವಜನಿಕ ಸಮಾರಂಭ ಆಯೋಜಿಸಲಾಗಿದೆ. ಏತನ್ಮಧ್ಯೆ ವಿದೇಶ ಪ್ರವಾಸ ಮುಗಿಸಿ ವಾಪಸಾದ ಬಳಿಕ ಜೂ. 9ರಂದು ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನಕ್ಕೆ ಮೋದಿ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ವೈ.ಎಸ್.ಜಗನ್​ವೋಹನ್ ರೆಡ್ಡಿ ಕೂಡ ಸಾಥ್ ನೀಡಲಿದ್ದಾರೆ.

Stay connected

278,741FansLike
587FollowersFollow
624,000SubscribersSubscribe

ವಿಡಿಯೋ ನ್ಯೂಸ್

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...