ಮದುವೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಯುವತಿ ಸಾವು! Cardiac Arrest While Dancing At Wedding

Woman 23 Dies Of Cardiac Arrest While Dancing At Wedding In Madhya Pradesh (1)
Published on

ಮಧ್ಯಪ್ರದೇಶ : (Cardiac Arrest While Dancing At Wedding ) ಮದುವೆ ಸಮಾರಂಭದಲ್ಲಿ ವೇದಿಕೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದು ಪ್ರಾಣ ಬಿಟ್ಟಿದ್ದಾಳೆ. ವಿದಿಶಾ ಜಿಲ್ಲೆಯಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ದುರಂತ ಘಟನೆ ನಡೆದಿದೆ.

ರಿಣೀತಾ ಜೈನ್ ( 23)  ಮೃತ ಯುವತಿ. ವೇದಿಕೆಯಲ್ಲಿ ನೃತ್ಯ ಮಾಡುತ್ತಿದ್ದಾಗ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದಳು. ಸಂಬಂಧಿಕರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಕೆ ಈಗಾಗಲೇ ಮೃತಪಟ್ಟಿದ್ದಾಳೆಂದು ವೈದ್ಯರು ದೃಢಪಡಿಸಿದರು.

ವಧುವಿನ ಸಹೋದರಿ, ಯುವತಿಯ ಹಠಾತ್ ಮರಣದಿಂದ ಮದುವೆ ಮನೆಯ ವಾತಾವರಣ ಹಾಳಾಗಿತ್ತು. ಪರಿಣೀತಾ ಜೈನ್ ಎಂಬ ಆ ಯುವತಿ ಮದುವೆ ಸಮಾರಂಭದಲ್ಲಿ ಭಾಗವಹಿಸಲು ಇಂದೋರ್‌ನಿಂದ ಬಂದಿದ್ದಳು ಎಂದು ಕುಟುಂಬದವರು ತಿಳಿಸಿದ್ದಾರೆ.

ನೃತ್ಯ ಮಾಡುತ್ತಿದ್ದಾಗ ಹೃದಯಾಘಾತದಿಂದ ಅವರು ಸಾವನ್ನಪ್ಪಿದ್ದಾರೆ . ನೃತ್ಯ ಮಾಡುತ್ತಾ ಕುಸಿದು ಬೀಳುವ ಯುವತಿಯ ದೃಶ್ಯಗಳು ಕ್ಯಾಮೆರಾದಲ್ಲಿ ದಾಖಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net