More

    ವಿಡಿಯೋ ಚಿತ್ರೀಕರಿಸಬೇಡಿ ಎಂದಿದ್ದೇ ಪೊಲೀಸ್​ ಅಧಿಕಾರಿ ಪಾಲಿಗೆ ಮುಳುವಾಯ್ತು; ಮಹಿಳೆ ಸೇರಿದಂತೆ ಒಂಬತ್ತು ಮಂದಿ ಅರೆಸ್ಟ್

    ಭೋಪಾಲ್: ಪೊಲೀಸ್ ಸಬ್​ಇನ್ಸ್​ಪೆಕ್ಟರ್​ ಮೇಲೆ ಠಾಣೆಯೊಳಗೆ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯಾರ್​ ಜಿಲ್ಲೆಯ ಶಿವಪುರಿಯಲ್ಲಿ ನಡೆದಿದೆ.ಪ್ರಕರಣ ಸಂಬಂಧ ಓರ್ವ ಮಹಿಳೆ ಸೇರಿದಂತೆ ಪೊಲೀಸರು ಒಂಬತ್ತು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

    ಗಂಭೀರವಾಗಿ ಗಾಯಗೊಂಡಿರುವ ಪೊಲೀಸ್​ ಸಬ್​ಇನ್ಸ್​ಪೆಕ್ಟರ್​ ಕೆ.ಪಿ. ಶರ್ಮಾರನ್ನುತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಕರೈರಾ ಪೊಲೀಸ್​ ಠಾಣಾಧಿಕಾರಿ ಸುರೇಶ್​ ಶರ್ಮಾ, ಬಂಧಿತ ಆರೋಪಿಗಳು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ದಾಖಲಿಸಲು ಠಾಣೆಗೆ ಆಗಮಿಸಿದ್ದರು. ಬಂಧಿತ ಆರೋಪಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ದೂರು ದಾಖಲಿಸಲಾಗಿತ್ತು. ಈ ಸಂಬಂಧ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿತ್ತು.

    ಇದನ್ನೂ ಓದಿ: ದೆಹಲಿಯಲ್ಲಿ ಶಂಕಿತ ಐಸಿಸ್ ಉಗ್ರನ ಬಂಧನ

    ಬಂಧಿತ ಆರೋಪಿಗಳು ಪೊಲೀಸ್​ ವಿಚಾರಣೆ ನಡೆಯುತ್ತಿದ್ದ ವೇಳೆ ತಮ್ಮ ಮೊಬೈಲ್​ನಲ್ಲಿ ವಿಡಿಯೋವನ್ನು ಚಿತ್ರೀಕರಿಸುತ್ತಿದ್ದರು. ಇದಕ್ಕೆ ಸಬ್​ಇನ್ಸ್​ಪೆಕ್ಟರ್​ ಕೆ.ಪಿ. ಶರ್ಮಾ ​ಆಕ್ಷೇಪ ವ್ಯಕ್ತಪಡಿಸಿದ್ದು, ವಿಡಿಯೋ ಚಿತ್ರೀಕರಿಸದಂತೆ ತಾಕೀತು ಮಾಡಿದ್ದಾರೆ. ಇದರಿಂದ ಸಿಟ್ಟಿಗೆದ್ದ ಆರೋಪಿಗಳು ಏಕಾಏಕಿ ಪೊಲೀಸ್​ ಅಧಿಕಾರಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

    ಪ್ರಕರಣ ಸಂಬಂಧ ಓರ್ವ ಮಹಿಳೆ ಸೇರಿದಂತೆ 9 ಮಂದಿಯನ್ನು ವಶಕ್ಕೆ ಪಡೆಯಲಾಗಿದ್ದು, ಶೀಘ್ರದಲ್ಲೇ ಚಾರ್ಜ್​ಶೀಟ್​ ಸಿದ್ದಪಡಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಕರೈರಾ ಪೊಲೀಸ್​ ಠಾಣಾಧಿಕಾರಿ ಸುರೇಶ್​ ಶರ್ಮಾ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts