ಗಂಡನನ್ನು ಮರಕ್ಕೆ ಕಟ್ಟಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ದಂಪತಿಯೇ ವಿಡಿಯೋ ಮಾಡಿ ವೈರಲ್‌ ಮಾಡಿದ ಕಥೆಯಿದು…

ರಾಂಪುರ: ಆತಂಕಕಾರಿ ಘಟನೆಯೊಂದರಲ್ಲಿ ಮಹಿಳೆ ಮೇಲೆ ನಾಲ್ವರು ಕಾಮುಕರು ಗಂಡನ ಎದುರೇ ಅತ್ಯಾಚಾರ ಎಸಗಿರುವ ಘಟನೆ ಜೂ. 11ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಮೊದಲಿಗೆ ದಂಪತಿ ಪೊಲೀಸರಿಗೆ ದೂರು ನೀಡಿರಲಿಲ್ಲ. ಆದರೆ, ದುಷ್ಕರ್ಮಿಗಳು ಅತ್ಯಾಚಾರದ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ ಬಳಿಕ ಸಂತ್ರಸ್ತೆಯು ಪೊಲೀಸರಿಗೆ ದೂರನ್ನು ನೀಡಿದ್ದಾರೆ ಎಂದು ಹೇಳಲಾಗಿದೆ.

ಕೆಲ ಯುವಕರ ಗುಂಪು ದಂಪತಿಯನ್ನು ತಡೆದು ಮಹಿಳೆ ಮೇಲೆ ದೌರ್ಜನ್ಯ ಎಸಗಿದ್ದಾರೆ. ಇದನ್ನು ವಿರೋಧಿಸಿದ್ದಕ್ಕೆ ಕೋಪಗೊಂಡ ಅವರು ಚೆನ್ನಾಗಿ ಥಳಿಸಿ ಗಂಡನನ್ನು ಮರಕ್ಕೆ ಕಟ್ಟಿಹಾಕಿದ್ದಾರೆ. ಬಳಿಕ ಆತನ ಎದುರೇ ಮಹಿಳೆ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ದಂಪತಿ ದೂರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆದರೆ, ದೂರನ್ನು ಆಧರಿಸಿ ತನಿಖೆ ಕೈಗೊಂಡ ಪೊಲೀಸರಿಗೆ ಶಾಕ್‌ ಕಾದಿತ್ತು. ಏಕೆಂದರೆ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರವಾಗಿಲ್ಲವಂತೆ. ಜೂ. 11 ರಂದು ದಂಪತಿಯನ್ನು ನಾಲ್ವರು ವ್ಯಕ್ತಿಗಳು ಥಳಿಸಿದರು ಎಂದು ಹೇಳಿಕೊಂಡ ಪ್ರಕರಣವನ್ನು ತನಿಖೆ ಮಾಡಿದಾಗ ಮಹಿಳೆ ಮೇಲೆ ಅತ್ಯಾಚಾರವಾಗಿಲ್ಲ ಎಂದು ಪೊಲೀಸರೇ ಆರೋಪವನ್ನು ಅಲ್ಲಗಳೆದಿದ್ದಾರೆ.

ಘಟನೆ ಸಂಬಂಧ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಘಟನೆಯನ್ನು ಸ್ವತಃ ದಂಪತಿಯೇ ವಿಡಿಯೋ ಮಾಡಿ ವೈರಲ್‌ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ತನಿಖೆ ಪ್ರಗತಿಯಲ್ಲಿದೆ ಎಂದು ಸಬ್‌ಇನ್ಸ್‌ಪೆಕ್ಟರ್‌ ಬ್ರಿಜೇಶ್‌ ಕುಮಾರ್‌ ತಿಳಿಸಿದ್ದಾರೆ. (ಏಜೆನ್ಸೀಸ್)

Leave a Reply

Your email address will not be published. Required fields are marked *