ಪ್ರಿಯಕರನ ಹೆಂಡತಿ-ಮಗನ ಮೇಲೆ ಆ್ಯಸಿಡ್ ಎರಚಿದ ಮಹಿಳೆ!

Pub crime
Published on

ನವದೆಹಲಿ: ಪ್ರಿಯಕರನ ಹೆಂಡತಿ ಹಾಗೂ ಎರಡೂವರೆ ವರ್ಷದ ಮಗನ ಮೇಲೆ ಮಹಿಳೆ ಆ್ಯಸಿಡ್ ಎರಚಿದ ಪ್ರಕರಣವೊಂದು ನಡೆದಿದೆ. ಇಂಥದ್ದೊಂದು ಅಪರಾಧದ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.

ಶನಿವಾರ ಬೆಳ್ಳಂಬೆಳಗ್ಗೆ ಈ ಪ್ರಕರಣ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಇನ್ನೊಬ್ಬ ಮಹಿಳೆ ತಲೆ ಮರೆಸಿಕೊಂಡಿದ್ದು ಪೊಲೀಸರು ಶೋಧ ನಡೆಸುತ್ತಿದ್ದಾರೆ. ನಾಗ್ಪುರದ ಯಶೋಧರನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಆರೋಪಿ ಮಹಿಳೆ ಹಾಗೂ ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತೆ ಇಬ್ಬರೂ ಈ ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಆಗಾಗ ಜಗಳ ಮಾಡಿಕೊಳ್ಳುತ್ತಿದ್ದರು. ಇದರಿಂದ ಆರೋಪಿ ಮಹಿಳೆ ಇನ್ನೊಬ್ಬಳು ಸ್ನೇಹಿತೆಯನ್ನು ಸಂಪರ್ಕಿಸಿ ಪ್ರಿಯಕರನ ಹೆಂಡತಿ-ಮಗನ ಮೇಲೆ ಆ್ಯಸಿಡ್ ಎರಚಿದ್ದಾಳೆ. ಗಾಯಗೊಂಡಿರುವ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಯನ್ನು ಪತ್ತೆ ಮಾಡಿ, ವಶಕ್ಕೆ ಪಡೆಯಲಾಗಿದ್ದು, ಆಕೆಯ ವಿರುದ್ಧ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net