ಹೆತ್ತ ತಾಯಿಯನ್ನೇ ಬೆಂಕಿ ಹಚ್ಚಿ ಕೊಲೆ ಮಾಡಿದ ಮಗ; ಕಾರಣ ಮಾತ್ರ ನಿಗೂಢ

crime scene
Published on

ತಿರುವನಂತಪುರಂ: ವ್ಯಕ್ತಿಯೋರ್ವ ತನ್ನ ಹೆತ್ತ ತಾಯಿಯನ್ನು ಬೆಂಕಿ ಹಚ್ಚಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕೇರಳ ಜಿಲ್ಲೆಯ ವೆಲ್ಲರಾದ ಬಳಿ ನಡೆದಿದೆ. ಘಟನೆ ಸಂಬಂಧ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಯಾವ ಕಾರಣಕ್ಕೆ ಹತ್ಯೆ ನಡೆದಿದೆ ಎಂದು ತಿಳಿದು ಬಂದಿಲ್ಲ. ಮೃತ ಮಹಿಳೆಯ ಕಿರಿಯ ಮಗ ಮನೆ ಬಳಿ ತೆರಳಿದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಪೊಲೀಸರಿಗೆ ವಿಚಾರವನ್ನು ತಿಳಿಸಿದ್ದಾನೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಯಾವ ಕಾರಣಕ್ಕೆ ಮಹಿಳೆಯನ್ನು ಬೆಂಕಿ ಹಚ್ಚಿ ಕೊಲೆ ಮಾಡಲಾಗಿದೆ ಎಂಬುದು ತಿಳಿದು ಬಂದಿಲ್ಲ. ಮಹಿಳೆಯ ಕಿರಿಯ ಪುತ್ರ ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದ್ದು, ಕೂಡಲೇ ಆತ ವಿಚಾರವನ್ನು ಪೊಲೀಸರಿಗೆ ತಿಳಿಸಿದ್ದಾನೆ.

ಆರೋಪಿಯನ್ನು ಕೂಡಲೇ ವಶಕ್ಕೆ ಪಡೆಯಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಯಾವ ಕಾರಣಕ್ಕೆ ಹತ್ಯೆ ಮಾಡಿದ್ದಾನೆ ಎಂಬುದರ ಕುರಿತು ಈವರೆಗೆ ಆತ ತಿಳಿಸಿಲ್ಲ. ವಿಚಾರಣೆಯನ್ನು ತೀವ್ರಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ನೀಡಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net