ಯೋಧನಿಂದ ಅತ್ಯಾಚಾರ ಆರೋಪ: ಮಹಿಳೆ ಆತ್ಮಹತ್ಯೆಗೆ ಶರಣು

ಮುಜಾಫರ್‌ನಗರ: ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಹಿನ್ನೆಲೆಯಲ್ಲಿ ಮನನೊಂದು ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಬಿಎಸ್‌ಎಫ್‌ ಯೋಧ 26 ವರ್ಷದ ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದರಿಂದ ಜೂ. 6 ರಂದು ಮಹಿಳೆ ವಿಷ ಸೇವಿಸಿದ್ದಳು. ಆದರೆ, ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹಿಳೆಯ ತಂದೆ ಈ ಕುರಿತು ದೂರು ನೀಡಿದ್ದು, ತನ್ನ ಮಗಳು ಬಿಎಸ್‌ಎಫ್‌ ಯೋಧನಿಂದ ಅತ್ಯಾಚಾರಕ್ಕೆ ಒಳಗಾಗಿದ್ದಳು.

ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ ಎಸಗಿ ಅತ್ಯಾಚಾರ ಗೈದಿದ್ದಾನೆ. ಈ ಕುರಿತು ಬಾಯಿ ಬಿಟ್ಟರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿದ್ದ ಎಂದು ದೂರಿದ್ದಾರೆ. (ಏಜೆನ್ಸೀಸ್)