

ಬೀದರ್: ನಾನು ಮಾಡಿದ್ದು ಸರಿಯೋ? ತಪ್ಪೋ? ಗೊತ್ತಿಲ್ಲ. ನನ್ನನ್ನು ಎಲ್ಲರೂ ಕ್ಷಮಿಸಿಬಿಡಿ ಎಂದು ಮೊಬೈಲ್ನಲ್ಲಿ ವಿಡಿಯೋ ರೆಕಾರ್ಡ್ ಮಾಡಿಟ್ಟು ಮಹಿಳೆಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಸವಕಲ್ಯಾಣ ನಗರದ ಹಿರೇಮಠ ಕಾಲನಿಯಲ್ಲಿ ಮಂಗಳವಾರ ನಡೆದಿದೆ.
ಕಲಬುರ್ಗಿ ಜಿಲ್ಲೆ ಆಳಂದ ತಾಲೂಕಿನ ಕರಹರಿ ಗ್ರಾಮದ ತ್ರಿಶೂಲಾ ಮಾರುತಿ ಕಟ್ಟಿಮನಿ(35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ತನ್ನ ಪತಿ ಹಾಗೂ ಇಬ್ಬರು ಮಕ್ಕಳೊಂದಿಗೆ ನಗರದ ಹಿರೇಮಠ್ ಕಾಲನಿಯಲ್ಲಿ ವಾಸವಾಗಿದ್ದರು. ಇದನ್ನೂ ಓದಿ: ಫೇಸ್ಬುಕ್ನಲ್ಲಿ ಅಪರಿಚಿತ ಮಹಿಳೆ ಜತೆ ಸ್ನೇಹ ಬೆಳೆಸಿದವನ ಧರ್ಮಸಂಕಟ ಹೇಳ ತೀರದು…!
ಆತ್ಮಹತ್ಯೆಗೂ ಮುನ್ನ ತನ್ನ ಮೊಬೈಲ್ನಲ್ಲಿ ವಿಡಿಯೊ ರೆಕಾರ್ಡ್ ಆನ್ ಮಾಡಿ, ನಾನು ಮಾಡಿದ್ದು ಸರಿಯೋ? ತಪ್ಪೋ? ಗೊತ್ತಿಲ್ಲ. ನನ್ನನ್ನು ಎಲ್ಲರೂ ಕ್ಷಮಿಸಿಬಿಡಿ. ನನ್ನ ಸಾವಿಗೆ ನಾನೇ ಕಾರಣವೆಂದು ಹೇಳಿ ಸಾವನ್ನಪ್ಪಿದ್ದಾರೆ.
ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ ವಿಡಿಯೋ ಪೊಲೀಸರ ಕೈಗೆ ಸಿಗುತ್ತೊ? ಇಲ್ಲವೊ? ಎಂಬ ಅನುಮಾನದಿಂದ ಬಿಳಿ ಹಾಳೆಯೊಂದರ ಮೇಲೆ ಮೊಬೈಲ್ನಲ್ಲಿ ರೆಕಾರ್ಡಿಂಗ್ ಇದೆ, ಅದನ್ನು ಪರಿಶೀಲಿಸಿ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಪುತ್ರನನ್ನು ಕಾರಿನಲ್ಲಿ ಕೂರಿಸಿ ಪತ್ನಿಯ ಹತ್ಯೆ: ಟೆಕ್ಕಿ ಕೃತ್ಯದ ಸ್ಪೋಟಕ ಮಾಹಿತಿ ತನಿಖೆಯಲ್ಲಿ ಬಹಿರಂಗ
ಘಟನೆ ಸಂಬಂಧ ಬೀದರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)